
ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!
Team Udayavani, Jun 2, 2023, 10:57 AM IST

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ.
ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಪಕ್ಕದ ಮನೆಯ ಯುವಕರು ತನ್ನೊಡನೆ ಅಸಭ್ಯ ವರ್ತನೆ ಮಾಡಿದ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಆದರೆ ಎಫ್.ಐ.ಆರ್. ದಾಖಲಾಗದೆ ಮನೆಗೆ ಹೋಗಲ್ಲವೆಂದು ಪಟ್ಟು ಹಿಡಿದ ಮಹಿಳೆ ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ಮಲಗಿಸಿದ್ದಾರೆ.
ಮಹಿಳೆಯ ಆಕ್ರೋಶ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿಯ ವೇಳೆಗೆ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಿದ್ದಾರೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Kalasa: ಹೃದಯಾಘಾತದಿಂದ ಎಎಸ್ಐ ಸಾವು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು
MUST WATCH
ಹೊಸ ಸೇರ್ಪಡೆ

Belagavi: ಶೆಫರ್ಡ ಇಂಡಿಯಾ ಇಂಟರ್ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ