Chikkamagaluru: ನೆರೆಮನೆಯ ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ
Team Udayavani, Dec 5, 2023, 12:28 PM IST
ಚಿಕ್ಕಮಗಳೂರು : ಪಕ್ಕದ ಮನೆಯ ನಾಯಿ ಬೊಗಳಿದ್ದಕ್ಕೆ ಮಾಲಕರ ಮೇಲೆ ಆಸಿಡ್ ದಾಳಿ ಮಾಡಿದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.
ಪಕ್ಕದ ಮನೆಯ ಜೇಮ್ಸ್, ನಾಯಿ ಮಾಲಕ ಸುಂದರರಾಜ್ ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ ವ್ಯಕ್ತಿ.
ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರ ನಾಯಿಗೆ ಬೈಯುತ್ತಿರುವುದು ಕಂಡು ಪಕ್ಕದ ಮನೆಯ ಜೇಮ್ಸ್, ಅದು ತನಗೆ ಬೈಯುತ್ತಿದ್ದಾನೆ ಎಂದು ಭಾವಿಸಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರವಾಗಿದ್ದು, ಎಡಗಣ್ಣಿಗೆ ಗಂಭೀರ ಗಾಯವಾಗಿರುವುದರಿಂದ ಕಣ್ಣಿನ ಪದರ ಬದಲಿಸುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಸುಂದರ್ ರಾಜ್ ಅವರನ್ನು ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಬೈಯುತ್ತಿರುವ ಆರೋಪದ ಹಿನ್ನೆಲೆ ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿದ್ದ ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ