Chikkamagaluru 10 ಸಾವಿರ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ
Team Udayavani, Nov 3, 2023, 6:01 PM IST
ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು ಎಸ್.ಡಿ.ಎ.ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದು, ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು.
ಒಂದು ಫೈಲ್ಗೆ 5 ಸಾವಿರದಂತೆ 2 ಫೈಲ್ಗೆ 10 ಸಾವಿರ ಕೇಳಿದ್ದರು. ಈ ಬಗ್ಗೆ ಮೂಡಿಗೆರೆ ಮೂಲದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನೆಲೆ ಡಿಡಿಪಿಐ ರಂಗನಾಥ ಸ್ವಾಮಿ ಮೇಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ