ಕೊರೊನಾಭೀತಿ:ಪ್ರವಾಸಿಗರ ನಿರ್ಬಂಧಕ್ಕೆಆಗ್ರಹ

ಜಿಪಂ ಸಭೆಯಲ್ಲಿ ಸದಸ್ಯರ ಒಕ್ಕೊರಲ ಒತ್ತಾಯಪ್ರವಾಸೋದ್ಯಮ ತಾತ್ಕಾಲಿಕ ಸ್ಥಗಿತಕ್ಕೆ ಸಲಹೆ

Team Udayavani, Mar 12, 2020, 1:19 PM IST

12-March-10

ಚಿಕ್ಕಮಗಳೂರು: ದೇಶಾದ್ಯಂತ ಕೊರೊನಾ ವೈರಸ್‌ ಹರಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರನ್ನು ನಿರ್ಬಂಧಿ ಸುವಂತೆ ಜಿಲ್ಲಾ ಪಂಚಾಯತ್‌ ಸರ್ವ ಸದಸ್ಯರ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.

ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸರ್ವ ಸದಸ್ಯರ ಸಮಾನ್ಯ ಸಭೆಯಲ್ಲಿ ಶೃಂಗೇರಿ ಶಿವಣ್ಣ ವಿಷಯ ಪ್ರಸ್ತಾಪಿಸಿ, ಜಿಲ್ಲೆ ಅನೇಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ದೇಶದಲ್ಲಿ ಕೊರೊನಾ ಭೀತಿ ಇರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದು ಒಳ್ಳೆಯದು ಎಂದರು.

ಸದಸ್ಯ ಪ್ರಭಾಕರ್‌ ಧ್ವನಿಗೂಡಿಸಿ ಜಿಲ್ಲೆಗೆ ಹೊರರಾಜ್ಯ ಮತ್ತು ವಿದೇಶದಿಂದ ಬರುವ ಪ್ರವಾಸಿಗರನ್ನು ತಡೆಗಟ್ಟಬೇಕು ಮತ್ತು ಇಲ್ಲಿಂದ ಬೇರೆ ರಾಜ್ಯಗಳಿಗೆ ಹೊಗುವವರನ್ನು ತಡೆಗಟ್ಟಬೇಕು ಎಂದರು. ಸೋಮಶೇಖರ್‌ ಮಾತನಾಡಿ, ಕೊರೊನಾ ವೈರಸ್‌ ಕೇರಳ ರಾಜ್ಯದಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು ಮೊದಲು ಕೇರಳದಿಂದ ರಾಜ್ಯಕ್ಕೆ ಬರುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರಬೇಕು ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ಕೊರೊನಾ ವೈರಸ್‌ ಹಬ್ಬದಂತೆ ದೇಶ ವಿದೇಶದಿಂದ ಬರುವ ಪ್ರವಾಸಿಗರನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದರು.

ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇತ್ತು. ಆದರೆ, ಅದು ಹುಸಿಯಾಗಿದೆ. ನಿಯೋಗ ಹೋಗಿ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಇದು ಜಿಲ್ಲೆಯ ದೌರ್ಭಾಗ್ಯ ಎಂದು ಸದಸ್ಯ ಶರತ್‌ ಕೃಷ್ಣಮೂರ್ತಿ ಬಿಜೆಪಿ ಸದಸ್ಯರ ಕಾಲೆಳೆದರು.

ಸದಸ್ಯ ಸೋಮಶೇಖರ್‌ ಮಾತನಾಡಿ, ಅನುಪಾಲನಾ ವರದಿ ಮೇಲೆ ಚರ್ಚೆಯಾಗಲಿ. ಬಜೆಟ್‌ ವಿಚಾರದ ಬಗ್ಗೆ ಇಲ್ಲಿ ಚರ್ಚೆ ಬೇಡ ಎಂದರು. ಹತ್ತು ವರ್ಷದಲ್ಲಿ ಯಾವ ಬಜೆಟ್‌ ಏನಾಗಿದೆ ಅದನ್ನು ಹೇಳಬೇಕಾಗುತ್ತದೆ ಎಂದು ಸದಸ್ಯ ಮಹೇಶ್‌ ಒಡೆಯರ್‌ ಬಜೆಟ್‌ ಚರ್ಚೆಗೆ ತೆರೆ ಎಳೆದರು.

ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಅವಕಾಶ ಇಲ್ಲ ಎಂದರೆ ಹೇಗೆ ಎಂದು ಸದಸ್ಯ ಪ್ರಭಾಕರ್‌ ಬೇಸರ ವ್ಯಕ್ತಪಡಿಸಿದರು. ಸದಸ್ಯ ಪ್ರಭಾಕರ್‌ ಮಾತನಾಡಿ, ಇತ್ತೀಚೆಗೆ ಗುಡ್ಡೆತೋಟ ಗ್ರಾಮದಲ್ಲಿ ದರೋಡೆ ಪ್ರಕರಣ ನಡೆದಿದ್ದು, ಮಲೆನಾಡು ಪ್ರದೇಶದಲ್ಲಿ ಒಚಿಟಿ ಮನೆಗಳಿದ್ದು ರಕ್ಷಣೆಗೆ ಆಯುಧ ಇರಿಸಿಕೊಳ್ಳಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಬೇಕು. ಕೊಡಗು ಜಿಲ್ಲೆ ಮಾದರಿಯಲ್ಲಿ ಒಂಟಿ ಮನೆಗಳಲ್ಲಿ ಆಯುಧ ಹೊಂದಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಮಲೆನಾಡು ಭಾಗದಲ್ಲಿ ಪ್ರಾಣ, ಆಸ್ತಿ ರಕ್ಷಣೆ ಬಹಳ ಕಷ್ಟ ಎಂದರು.

ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಮಾ.13ಕ್ಕೆ ಕೆ-2 ಮುಚ್ಚುವ ಬಗ್ಗೆ ಸರ್ಕಾರದಿಂದ ಸುತ್ತೋಲೆ ಬಂದಿದೆ. ಜಿಲ್ಲೆಯಲ್ಲಿ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ. ಕೆಲ ಕಾಮಗಾರಿ ಮುಗಿದ್ದರು ಜಿಪಿಎಸ್‌ ವಿಳಂಬವಾಗಿದೆ. ತಾಂತ್ರಿಕ ಕಾರಣದಿಂದ ಬಿಲ್‌ ಪಾವತಿಸಲು ಸಾಧ್ಯವಾಗಿಲ್ಲ. ಇದರಿಂದ ಬಹಳಷ್ಟು ತೊಂದರೆಯಾಗಲಿದೆ. ಆದ್ದರಿಂದ ಕಾಮಗಾರಿಗಳ ಅನುದಾನವನ್ನು ಸಿಇಒ ಅವರ ಪಿಡಿ ಖಾತೆಗೆ ವರ್ಗಾಯಿಸಿಕೊಳ್ಳಲು ಸರ್ಕಾರದಿಂದ ಅನುಮತಿ ಪಡೆಯಬೇಕು. ಹಣ ಸರ್ಕಾರಕ್ಕೆ ವಾಪಸ್‌ ಕಳುಹಿಸಬಾರದು ಎಂದರು.

ಕಳಸ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೂರ್ಣಗೊಳ್ಳುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ಸಿಇಒ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಪ್ರಭಾಕರ್‌ ಆಗ್ರಹಿಸಿದರು.

ಜಿಲ್ಲೆಯ ಬಹುತೇಕ ಶುದ್ಧಗಂಗಾ ಘಟಕಗಳು ಉಪಯೋಗಿಸಲು ಬಾರದಾಗಿದ್ದು, ಅವುಗಳನ್ನು ಅಗತ್ಯವಿರುವ ಕಡೆಗೆ ವರ್ಗಾಯಿಸುವಂತೆ ಕವಿತಾ ಲಿಂಗರಾಜ್‌ ಸಲಹೆ ನೀಡಿದರು. ಜಿಲ್ಲೆಯಲ್ಲಿ 231 ಶುದ್ಧಗಂಗಾ ಘಟಕಗಳ ಪೈಕಿ 41 ಹಾಳಾಗಿವೆ. ಸದ್ಯದಲ್ಲೇ ದುರಸ್ತಿ ಮಾಡಲಾಗುವುದು ಎಂದು ಸಂಬಂಧಪಟ್ಟ ಇಲಾಖೆ ಇಂಜಿನಿಯರ್‌ ಸಭೆಗೆ ತಿಳಿಸಿದರು.

ಮೆಣಸೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಮೇಲೆ ಅವ್ಯವಹಾರದ ಆರೋಪಗಳಿದ್ದರೂ ಏಕೆ ಅವರ ವಿರುದ್ಧ ಕ್ರಮವಿಲ್ಲ ಎಂದು ಸದಾಶಿವ ಕೇಳಿದರು. ಈ ಬಗ್ಗೆ ಮತ್ತೆ ಪರಿಶೀಲಿಸಿಲು ಸಿಇಒ ಸೂಚಿಸಿದರು. ತರೀಕೆರೆ, ಕಡೂರು, ಚಿಕ್ಕಮಗಳೂರಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನಗಳನ್ನು ಅನ್ಯಕ್ರಾಂತ ಮಾಡಿ ಇ-ಖಾತೆ ಮಾಡುವಾಗ ಅಕ್ರಮ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಮಹೇಶ್‌ ಒಡೆಯರ್‌ ಆಗ್ರಹಿಸಿದರು.

ಕಳೆದ ಆಗಸ್ಟ್‌ ಸೆಪ್ಟಂಬರ್‌ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಸರ್ಕಾರಿ ಶಾಲೆ ಕಟ್ಟಡಗಳು ಕುಸಿದು ಬಿದ್ದಿದ್ದು, ಕಟ್ಟಡ ದುರಿಸ್ತಿಗೆ ನೀಡಿರುವ ಎರಡು ಲಕ್ಷ ರೂ. ಸಾಲದು. ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು ಮತ್ತು ಅಲೇಖಾನ್‌ ಹೊರಟ್ಟಿ ಶಾಲೆ ಕಟ್ಟಡ ನಿರ್ಮಿಸುವಂತೆ ಮೂಡಿಗೆರೆ ತಾಲೂಕು ಅಧ್ಯಕ್ಷ ರತನ್‌ ತಿಳಿಸಿದರು. ಇದೇ ಸಂದರ್ಭದಲ್ಲಿ ಅವಧಿ ಪೂರ್ಣಗೊಂಡ ವಿವಿಧ ಸಮಿತಿಗಳ ಪುನಾರಚಿಸಿ ಅನುಮೋದನೆ ಪಡೆದುಕೊಳ್ಳಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.