ಅನುದಾನ ಅರ್ಹರಿಗೆ ವಿತರಿಸಿ: ಸುಜಾತಾ ಸೂಚನೆ

ರೇಷ್ಮೆ ಇಲಾಖೆಯಿಂದ ಬೆಳೆಗಾರರಿಗೆ ಪ್ರೋತ್ಸಾಹ

Team Udayavani, May 23, 2020, 1:13 PM IST

23-May-10

ಚಿಕ್ಕಗಮಳೂರು: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿಕ್ಕಮಗಳೂರು: ಅಧಿಕಾರಿಗಳು ಇಲಾಖೆಗೆ ಬರುವ ಅನುದಾನವನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ನೀಡಬೇಕೆಂದು ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ತಿಳಿಸಿದರು.

ಶುಕ್ರವಾರ ನಗರದ ಜಿಪಂ ಸಭಾಂಗಣದಲ್ಲಿ ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಯಾವುದೇ ಕೆಲಸ ಕೈಗೊಳ್ಳುವ ಮುಂಚೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಗೌರವ ಬರುತ್ತದೆ ಎಂದರು. ಜಿಲ್ಲೆಯಲ್ಲಿ ಕೋವಿಡ್‌-19 ಆರೋಗ್ಯ ಇಲಾಖೆ ಜೊತೆಗೆ ಇತರ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡುವ ಮೂಲಕ ಕೋವಿಡ್ ಸೋಂಕು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದು ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕೊಪ್ಪ ಕೃಷಿ ಇಲಾಖೆ ಕಟ್ಟಡ ಪೂರ್ಣಗೊಂಡು ಒಂದು ವರ್ಷ ಆದರೂ ಉದ್ಘಾಟನೆಗೊಂಡಿಲ್ಲ. ಪಶುಪಾಲನೆ ಇಲಾಖೆ ಅಧಿಕಾರಿಗಳು ಸರ್ಕಾರದ ಅನುದಾನವನ್ನು ಜಿಪಂ ಸದಸ್ಯರ ಗಮನಕ್ಕೆ ತರದೆ ಸುಸ್ತಿರವಾಗಿರುವ ಕಟ್ಟಡಗಳ ದುರಸ್ಥಿಗೆ ಅನುದಾನ ಇಟ್ಟಿದ್ದಾರೆ. ಹೀಗೆ ಸರ್ಕಾರ ಹಣ ಪೋಲು ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ರೇಷ್ಮೆ ಇಲಾಖೆ ವತಿಯಿಂದ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಪಂ ಸದಸ್ಯ ಕೆ.ಆರ್‌. ಮಹೇಶ್‌ ಒಡೆಯರ್‌ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿ ಸಿಕ್ಕಿದ್ದಾರೆ. ಅಧಿಕಾರಿಗಳು ಸಾಮಾನ್ಯ ಜನರನ್ನು ಕಚೇರಿಗೆ ಅಲೆದಾಡಿಸದೆ ಶೀಘ್ರದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಆಗ್ರಹಿಸಿದರು. ಸದಸ್ಯೆ ಅಮಿತಾ ಮುತ್ತಪ್ಪ ಮಾತನಾಡಿ, ಮಲೆನಾಡು ಭಾಗದಲ್ಲಿ ಕೊರೊನಾ ಭಯ ಕಾಡುತ್ತಿದೆ. ಆರೋಗ್ಯ ಇಲಾಖೆಯವರು ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಜೊತೆಗೆ ಮಲೆನಾಡು ಭಾಗಕ್ಕೆ ವಿಶೇಷ ಅನುದಾನ ತಂದು ಮೂಡಿಗೆರೆಯ ಎಂ.ಜೆ. ಎಂ. ಆಸ್ಪತ್ರೆಗೆ ಮತ್ತುಗೋಣಿಬೀಡು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಇನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಕಟ್ಟಡ ಬಾಡಿಗೆ ಇರುವ ಕಚೇರಿಗಳ ಬಾಡಿಗೆ ಪರಿಷ್ಕರಿಸಿ 20-21ನೇ ಸಾಲಿನ ವಿವಿಧ ಇಲಾಖೆಯ ಕ್ರಿಯಾ ಯೋಜನೆಗೆ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ಸದಸ್ಯರಾದ ಜಸಂತಾ ಅನಿಲ್‌ ಕುಮಾರ್‌, ಚಂದ್ರಮ್ಮ, ಹಿರಿಗಯ್ಯ ಇದ್ದರು.

Ad

ಟಾಪ್ ನ್ಯೂಸ್

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ckm

Chikkamagaluru: ವಿದ್ಯುತ್ ಶಾಕ್ ನಿಂದ ಮೆಸ್ಕಾಂ ಸಿಬ್ಬಂದಿ ಸ್ಥಿತಿ ಗಂಭೀರ

22

Chikkamagaluru: ಬೆಳೆಗಳಿಗೀಗ ಕೊಳೆ ಬಾಧೆ ಭೀತಿ!

ಚಿಕ್ಕಮಗಳೂರು ಜಿಲ್ಲೆಗೆ ಶರಣ್ ಪಂಪ್ ವೆಲ್ ಗೆ ನಿರ್ಬಂಧ… ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಗೆ ಶರಣ್ ಪಂಪ್ ವೆಲ್ ಗೆ ನಿರ್ಬಂಧ… ಜಿಲ್ಲಾಡಳಿತದ ವಿರುದ್ಧ ಆಕ್ರೋಶ

14

Chikkamagaluru: ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ

9-sharan

Chikkamagaluru: ಹಿಂದೂ ಮುಖಂಡ ಶರಣ್ ಪಂಪ್ ವೆಲ್ 30 ದಿನ ಕಾಫಿನಾಡಿಗೆ ನಿರ್ಬಂಧ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.