ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿದ ಯುವಕ-ಯುವತಿ: ಕಾರಣ ನಿಗೂಢ
Team Udayavani, Dec 20, 2022, 10:06 PM IST
ಚಿಕ್ಕಮಗಳೂರು: ಯುವಕ-ಯುವತಿ ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿದ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ.
ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಮೇಲ್ನೋಟಕ್ಕೆ ಇಬ್ಬರು ಪ್ರೇಮಿಗಳಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಇದನ್ನೂ ಓದಿ: ಹಾಲಿಗೆ ಪ್ರೋತ್ಸಾಹಧನ ಹೆಚ್ಚಿಸುವ ಪ್ರಸ್ತಾವ ಇಲ್ಲ:ಸಚಿವ ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!