ಕ್ವಾರಂಟೈನ್‌ಗೆ ಕ್ರಮ ಕೈಗೊಳ್ಳಿ

ಬೇರೆ ಊರಿನ ಪ್ರಯಾಣಿಕರು-ಕಾರ್ಮಿಕರ ಮೇಲೆ ನಿಗಾವಹಿಸಿ

Team Udayavani, May 9, 2020, 12:50 PM IST

09-May-12

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಲಾಕ್‌ಡೌನ್‌ ಸಡಿಲಿಕೆ ಆಗಿರುವುದರಿಂದ ಜಿಲ್ಲೆಗೆ ಬರುವ ಹೊರದೇಶ, ಹೊರ ರಾಜ್ಯಗಳ ಪ್ರಯಾಣಿಕರು ಹಾಗೂ ಕಾರ್ಮಿಕರನ್ನು ಕ್ವಾರಂಟೈನ್‌ನಲ್ಲಿಸಿ ನಿಗಾವಹಿಸಿ ಜಿಲ್ಲೆಯನ್ನು ಹಸಿರು ವಲಯದಲ್ಲೇ ಇರಿಸಲು ಶ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೊರ ದೇಶ, ಹೊರ ರಾಜ್ಯ, ಹಾಗೂ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್‌ ನಲ್ಲಿ ಇರಿಸಲು ಕೈಗೊಳ್ಳುವ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಕೆಂಪು ವಲಯ ಹಾಗೂ ಸೋಂಕು ಹೆಚ್ಚಿರುವ ದೇಶಗಳಿಂದ ಬರುವಂತಹ ವ್ಯಕ್ತಿಗಳನ್ನು ನಗರದ ಬೀಕನಹಳ್ಳಿ ಹಾಗೂ ತೇಗೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪವಿತ್ರವನದ ಬಳಿಯ ಪೋಸ್ಟ್‌ ಮೆಟ್ರಿಕ್‌ ವಸತಿ ನಿಲಯಗಳಲ್ಲಿ ಇರಿಸಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಹೆಚ್ಚಿನ ಅಗತ್ಯವಿದ್ದಲ್ಲಿ ನಗರದ ಬೇಲೂರು ರಸೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಇರಿಸಲು ಕ್ರಮ ವಹಿಸಲಾಗುವುದು ಎಂದರು.

ಬೇರೆ ಬೇರೆ ಭಾಗಗಳಿಂದ ಬಂದವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಇರಿಸಿ ಕಾಲಕಾಲಕ್ಕೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಬೇಕು ಮುಖ್ಯವಾಗಿ ವಿದೇಶಗಳಿಂದ ಬಂದವರನ್ನು ಮೊದಲನೇ ದಿನದಿಂದ ಕ್ವಾರಂಟೈನ್‌ ಅವಧಿ ಮುಗಿಯುವವರೆಗೂ ತಪಾಸಣೆಗೆ  ಒಳಪಡಿಸಬೇಕು. ಜತೆಗೆ ಕ್ವಾರಂಟೈನ್‌ನಲ್ಲಿರುವವರು ತಪ್ಪಿಸಿಕೊಳ್ಳದಂತೆ ನಿಗಾವಹಿಸಬೇಕು. ಹಾಸ್ಟೆಲ್‌ ಕ್ವಾರಂಟೈನ್‌ ಮುಗಿದ ಬಳಿಕ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಯಾವುದೇ ತಾಲೂಕಿಗೆ ಸೋಂಕಿತ ಪ್ರದೇಶಗಳಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ನಗರದ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ತಪಾಸಣೆಗೆ ಒಳಪಡಿಸಬೇಕು. ಈ ವೇಳೆ ಯಾರೊಬ್ಬರು ಅಡ್ಡಿಪಡಿಸುವಂತಿಲ್ಲ ಎಂದ ಅವರು, ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸಂಬಂಧಿತ ಯಾವುದೇ ಪಾಸಿಟಿವ್‌ ಪ್ರಕರಣ ಕಂಡು ಬಂದಿಲ್ಲ, ಸದ್ಯ ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮವಹಿಸಿ ಜಿಲ್ಲೆ ಹಸಿರು ವಲಯದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಪಂ ಸಿಇಒ ಎಸ್‌.ಪೂವಿತಾ, ಎಸ್‌ಪಿ ಹರೀಶ್‌ ಪಾಂಡೆ, ಎಡಿಸಿ ಡಾ| ಕುಮಾರ್‌, ಉಪವಿಭಾಗಾಧಿಕಾರಿ ಡಾ| ಎಚ್‌.ಎಲ್‌.ನಾಗರಾಜ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.