Chikkamagaluru: ಪೊಲೀಸರಿಂದ ರಸ್ತೆತಡೆ ನಡೆಸಿ ಪ್ರತಿಭಟನೆ

ವಕೀಲರು ಮತ್ತು ಪೊಲೀಸರ ನಡುವಿನ ವಿವಾದ ಹಿನ್ನೆಲೆ

Team Udayavani, Dec 2, 2023, 10:38 PM IST

chikChikkamagaluru: ಪೊಲೀಸರಿಂದ ರಸ್ತೆತಡೆ ನಡೆಸಿ ಪ್ರತಿಭಟನೆ

ಚಿಕ್ಕಮಗಳೂರು: ನಗರದಲ್ಲಿ ವಕೀಲರು ಮತ್ತು ಪೊಲೀಸರ ನಡುವಿನ ವಿವಾದ ತಾರಕಕ್ಕೇರುತ್ತಿದ್ದು, ಶನಿವಾರ ಆರು ಠಾಣೆಗಳ ಪೊಲೀಸ್‌ ಸಿಬ್ಬಂದಿ ಕರ್ತವ್ಯ ಸ್ಥಗಿತಗೊಳಿಸಿ ಮೌನ ಪ್ರತಿಭಟನೆ ಬಳಿಕ ರಸ್ತೆ ತಡೆ ನಡೆಸಿದರು.

ಹೆಲ್ಮೆಟ್‌ ಧರಿಸದ ವಕೀಲನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಪಿಎಸ್‌ಐ ಸೇರಿ ಆರು ಸಿಬ್ಬಂದಿಗಳ ಅಮಾನತು ಹಿನ್ನೆಲೆಯಲ್ಲಿ ಆರು ಪೊಲೀಸ್‌ ಠಾಣೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರು ನಗರ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿ ಅಸಮಾಧಾನ ಹೊರಹಾಕಿದರು.

ಮಂಗಳೂರಿನಿಂದ ಧಾವಿಸಿದ ಐಜಿಪಿ ಡಾ|ಚಂದ್ರಗುಪ್ತ ಅವರಿಗೂ ಮುತ್ತಿಗೆ ಹಾಕಿದರು. ಅಮಾನತುಗೊಂಡಿರುವ ಪೊಲೀಸರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸಾರ್ವಜನಿಕರಿಗೆ ರಕ್ಷಣೆ ನೀಡುತ್ತಿರುವ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ವಿಕ್ರಮ್‌ ಅಮಟೆ ಮುಂದೆ ಅಳಲು ತೋಡಿಕೊಂಡರು.

ಹೆಲ್ಮೆಟ್‌ ವಿಚಾರಕ್ಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ವಕೀಲ ಪ್ರೀತಮ್‌ ಠಾಣೆಯ ಬಳಿ ಪೊಲೀಸ್‌ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅವರ ಬೆಂಬಲಕ್ಕೆ ಬಂದ ವಕೀಲರ ಗುಂಪು ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದೆ. ಪೊಲೀಸರು ತಮ್ಮ ಕರ್ತವ್ಯ ಪಾಲಿಸಿದ್ದಕ್ಕೆ ಅಮಾನತು ಶಿಕ್ಷೆ ನೀಡಲಾಗಿದೆ. ಜನರಿಗೆ ರಕ್ಷಣೆ ನೀಡಲು ಸಾಧ್ಯವಾಗದ ಸ್ಥಳದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಜನರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಠಾಣೆ ಬಳಿ ಗುಂಪು ಸೇರಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ ವಕೀಲರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಎಸ್ಪಿ ಡಾ|ಅಮಟೆ ಪ್ರತಿಕ್ರಿಯಿಸಿ, ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನಿರಪರಾ ಧಿಗಳಿಗೆ ಕಾನೂನಿನ ರಕ್ಷಣೆ ಸಿಗಲಿದೆ ಎಂದು ಭರವಸೆ ನೀಡಿದರು. ಪೊಲೀಸರು ಕರ್ತವ್ಯಕ್ಕೆ ಮರಳಬೇಕು ಎಂದೂ ಸೂಚಿಸಿದರು. ಆದರೆ, ಇಷ್ಟಕ್ಕೆ ಸುಮ್ಮನಾಗದ ಪೊಲೀಸ್‌ ಸಿಬ್ಬಂದಿ ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದ ನಗರ ಪೊಲೀಸ್‌ ಠಾಣೆ ಬಳಿಯಿಂದ ಹನುಮಂತಪ್ಪ ವೃತ್ತಕ್ಕೆ ತೆರಳಿ ರಸ್ತೆ ತಡೆ ನಡೆಸಿದರು. ಪೊಲೀಸ್‌ ಸಿಬ್ಬಂದಿಗಳ ಪ್ರತಿಭಟನೆ ವಿಚಾರ ಎಲ್ಲೆಡೆ ಹಬ್ಬುತ್ತಿದ್ದಂತೆ ಮತ್ತಷ್ಟು ಸಿಬ್ಬಂದಿ ಜತೆಗೂಡಿದರು.

ಇದಕ್ಕೂ ಮುನ್ನ ಬೆಳಗ್ಗೆ ಪೊಲೀಸರ ಕುಟುಂಬಸ್ಥರು ನಗರ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ನಡುವೆ, ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪೊಲೀಸ್‌ ಸಿಬ್ಬಂದಿ ಗುರುಪ್ರಸಾದ್‌ ಎಂಬವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.