ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ

ಜ.19 ರಂದು 5 ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೇ ಲಸಿಕೆ ಹಾಕಿಸಿ: ಡಿಸಿ ಡಾ| ಬಗಾದಿ ಗೌತಮ್‌

Team Udayavani, Jan 12, 2020, 4:12 PM IST

12-Janauary-22

ಚಿಕ್ಕಮಗಳೂರು: ಪಲ್ಸ್‌ ಪೋಲಿಯೋ ಕಾರ್ಯಕ್ರಮ ಜ.19 ರಂದು ನಡೆಯಲಿದ್ದು, 5 ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿ ಅನುಷ್ಠಾನ, ಇಂದ್ರಧನುಷ್‌ ಅಭಿಯಾನ ಹಾಗೂ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2011ರ ನಂತರ ನಮ್ಮ ದೇಶದಲ್ಲಿ ಪೋಲಿಯೋ ರೋಗ ಸಂಪೂರ್ಣ ನಿರ್ಮೂಲನೆಯಾಗಿದೆ.
ಯಾವುದೇ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ನಮ್ಮ ನೆರೆಯ ದೇಶಗಳಾದ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದಲ್ಲಿ ಪೋಲಿಯೋ ವೈರಾಣುಗಳು ಕಂಡು ಬಂದಿರುವ ಹಿನ್ನೆಲೆ ನಮ್ಮಲ್ಲಿ ಎಚ್ಚರ ವಹಿಸುವುದು ತೀರಾ ಅಗತ್ಯವಾಗಿದೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ 2007ರಲ್ಲಿ ಪೋಲಿಯೋ ರೋಗಾಣುವಿನಿಂದ ಬಾಧಿತವಾಗಿರುವ ಪ್ರಕರಣಗಳು ಕಂಡು ಬಂದಿಲ್ಲ. ಆದರೆ, ಹೊರ ದೇಶಗಳಿಂದ ವಲಸೆ ಬಂದಿರುವುದರಿಂದ ವೈರಾಣುಗಳು ಹರಡುವ ಸಾಧ್ಯತೆ ಇದೆ. ಅದನ್ನು ತಡೆಯಲು ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾದ್ಯಂತ 5 ವರ್ಷದೊಳಗಿನ 84,804
ಮಕ್ಕಳನ್ನು ಗುರುತಿಸಲಾಗಿದೆ. ಅಲ್ಲದೇ, ಹೊರ ಜಿಲ್ಲೆಗಳಿಂದ ಬರುವ ಮಕ್ಕಳಿಗೆ ಲಸಿಕೆ ಹಾಕಿಸಲು ರೈಲ್ವೆ ಹಾಗೂ ಬಸ್‌ ನಿಲ್ದಾಣಗಳಲ್ಲಿ ಬೂತ್‌ಗಳನ್ನು ತೆರೆದು ಲಸಿಕೆಗಳನ್ನು ತಪ್ಪದೇ ಹಾಕಬೇಕು ಎಂದರು.

ಪಲ್ಸ್‌ ಪೋಲಿಯೋ ಕಾರ್ಯಕ್ರಮ 3 ದಿನಗಳ ಕಾಲ ನಡೆಯಲಿದ್ದು, ಮೊದಲನೆಯ ದಿನ ಬೂತ್‌ ಗಳಲ್ಲಿ ಲಸಿಕೆ ಹಾಕಲಿದ್ದು, ನಂತರ 2ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು ಎಂದು ಹೇಳಿದರು. ಲಸಿಕೆಗಳ ದಾಸ್ತಾನಿಗೆ ಅಗತ್ಯವಿರುವ ಕೋಲ್ಡ್‌ ಸ್ಟೋರೇಜ್‌ಗಳನ್ನು ಬಳಸಬೇಕು. ಇವುಗಳಿಗೆ ನಿರಂತರ ವಿದ್ಯುತ್‌ತ್ಛಕ್ತಿ ಸೌಲಭ್ಯವನ್ನು ಕಲ್ಪಿಸಲು ಮೆಸ್ಕಾಂ ಅಧಿಕಾರಿಗಳು ಕ್ರಮ ವಹಿಸಬೇಕು. ಕಾರ್ಯಕ್ರಮದ ಅನುಷ್ಠಾನಕ್ಕೆ ಅಗತ್ಯವಿರುವ ವಾಹನ ಸೌಲಭ್ಯಗಳನ್ನು ಸಹ ಕಲ್ಪಿಸಬೇಕು ಎಂದರು.

ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ವರ್ಷದಲ್ಲಿ 2 ಬಾರಿ ನಡೆಯಲಿದ್ದು,
ಮೊದಲನೆ ಹಂತ ಫೆ.10 ರಂದು ಚಾಲನೆಯಾಗಲಿದೆ. ಒಂದರಿಂದ 19 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣಾ ಗುಳಿಗೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಈ ಹಿಂದೆ ನಡೆದ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ಕೆಲವು ಖಾಸಗಿ ಶಾಲೆಗಳು
ಸಹಕಾರ ನೀಡದೇ ಇರುವ ಬಗ್ಗೆ ಕೇಳಿ ಬಂದಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದೇ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು. ಮಾತ್ರೆಗಳನ್ನು ಊಟದ ನಂತರದಲ್ಲಿಯೇ ನೀಡಬೇಕು. 5 ವರ್ಷದೊಳಗಿನ ಮಕ್ಕಳಿಗೆ ಗುಳಿಗೆಯನ್ನು ಇಡಿಯಾಗಿ ನೀಡಿದರೆ ಅವರಿಗೆ ತೊಂದರೆಯುಂಟಾಗುವ ಸಾಧ್ಯತೆ ಇರುವುದರಿಂದ ಬದಲಿ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಕಾರ್ಯಕ್ರಮದ ಬಗ್ಗೆ ಶಾಲಾ ಶಿಕ್ಷಕರಿಗೆ ತರಬೇತಿ ನೀಡುವುದು ಅಗತ್ಯವಿದೆ ಎಂದರು.

ರೋಗ ನಿರೋಧಕ ಚುಚ್ಚು ಮದ್ದುಗಳನ್ನು 6 ವರ್ಷಗಳೊಳಗಿನ ಮಕ್ಕಳಿಗೆ ನೀಡಲಾಗುತ್ತಿದ್ದು,
ಇವುಗಳಿಂದ ವಂಚಿತರಾದವರಿಗೆ ಚುಚ್ಚುಮದ್ದು ನೀಡಲು ಇಂದ್ರಧನುಷ್‌ ಅಭಿಯಾನ
ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಇದನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಪ್ರಭು, ಜಿಲ್ಲಾ ಸರ್ಜನ್‌ ಕುಮಾರ್‌ ನಾಯಕ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರಪ್ಪ ಶಿರೋಳ್ಕರ್‌ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.