ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

Team Udayavani, May 8, 2024, 1:25 PM IST

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಬಿಸಿಲ ಝಳದಿಂದ ರೋಸಿ ಹೋಗಿದ್ದ ಕಾಫಿನಾಡಿನ ಜನರಿಗೆ ಮಳೆ ತಂಪೆರೆದಿದೆ. ಕಾಫಿನಾಡಿನ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಸಿರು ಹಾಸಿಗೆ ಹೊಂದಿರುವ ಕಾಫಿನಾಡು ಬೇಸಿಗೆಯಲ್ಲಿ ಎಷ್ಟೇ ಬಿಸಿಲಿದ್ದರೂ ಜಿಲ್ಲಾದ್ಯಂತ ಉಷ್ಣಾಂಶದ ಪ್ರಮಾಣ 30 ಡಿಗ್ರಿಗಿಂತ ಹೆಚ್ಚು ಇರುತ್ತಿರಲಿಲ್ಲ. ಆದರೆ ಈ ಬಾರಿ ಏಪ್ರಿಲ್‌ ತಿಂಗಳಲ್ಲಿ ತಾಪಮಾನದ ಪ್ರಮಾಣ 40 ಡಿಗ್ರಿ ಮೀರಿತ್ತು. ಪರಿಣಾಮ ಬಿಸಿಲ ಧಗೆಯಿಂದ ಜನರು ನಲುಗಿ ಹೋಗಿದ್ದರು. ಬಿಸಿಲ ತಾಪದಿಂದಾಗಿ ಶಾಲಾ ಮಕ್ಕಳು ಕೂಡ ರಜೆಯ ಸವಿ ಅನುಭವಿಸಲೂ ಸಾಧ್ಯವಾಗಿರಲಿಲ್ಲ.

ಬಿರು ಬಿಸಿಲ ಕಾರಣಕ್ಕೆ ಮಕ್ಕಳು ಜ್ವರ, ಆಯಾಸದಂತಹ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುವಂತಾಗಿತ್ತು. ಬಯಲು ಭಾಗ ಹಾಗೂ ಮಲೆನಾಡು ಭಾಗದ ಕೃಷಿಕರು ತಮ್ಮ ಹೊಲಗದ್ದೆಗಳಲ್ಲಿ ಬೆಳೆದ ಬೆಳೆ ಸಂರಕ್ಷಣೆಗೆ ಹರಸಾಹಸಪಡುವಂತಾಗಿತ್ತು. ಮಲೆನಾಡು ಭಾಗದಲ್ಲಿ ಕಾಫಿ, ಅಡಕೆ ತೋಟಗಳಿಗೆ ನೀರು ಹಾಯಿಸಲೂ ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲಾದ್ಯಂತ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿತ್ತು.

ಕಳೆದ ಮೂರು ದಿನಗಳಿಂದ ಜಿಲ್ಲಾದ್ಯಂತ ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತಾದರೂ ಮಳೆಯ ಸಿಂಚನವಾಗದ ಪರಿಣಾಮ ಸಾರ್ವಜನಿಕರು, ರೈತರಲ್ಲಿ ನಿರಾಶೆ ಮನೆ ಮಾಡಿತ್ತು. ಆದರೆ ಮಂಗಳವಾರ ಮಧ್ಯಾಹ್ನ ಜಿಲ್ಲೆಯ
ಅಲ್ಲಲ್ಲಿ ಮಳೆಯ ಹನಿಗಳು ಉದುರಲಾರಂಭಿಸಿದ್ದು, ನೋಡ ನೋಡುತ್ತಿದ್ದಂತೆ ಗುಡುಗು, ಸಿಡಿಲು, ಗಾಳಿಯೊಂದಿಗೆ ಸುಮಾರು 2 ಗಂಟೆಗಳ ಮಳೆ ಭೋರ್ಗರೆಯಿತು.

ಮಂಗಳವಾರ ಮಧ್ಯಾಹ್ನ 2ಕ್ಕೆ ಚಿಕ್ಕಮಗಳೂರು ನಗರ ಹಾಗೂ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಆಲಿಕಲ್ಲುಗಳೊಂದಿಗೆ ಭೋರ್ಗರೆದ ಮಳೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಜನಜೀವನ ಅಸ್ತವ್ಯಸ್ತಗೊಳಿಸಿತು. ರಸ್ತೆಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ವಾಹನಗಳ ಸಂಚಾರವೂ ಸ್ತಬ್ಧಗೊಂಡಿತ್ತು. ಮಳೆಯ ಆರ್ಭಟದೊಂದಿಗೆ ಭಾರೀ ಗಾಳಿ ಹಾಗೂ
ಸಿಡಿಲಿನ ಹೊಡೆತಕ್ಕೆ ಅಲ್ಲಲ್ಲಿ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಸಾರ್ವಜನಿಕರು, ಜಾನುವಾರುಗಳ ಪ್ರಾಣಕ್ಕೆ ಹಾನಿಯಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದರೆ, ಬಯಲು ಭಾಗದ ಕಡೂರು, ತರೀಕೆರೆ ತಾಲೂಕುಗಳ ವ್ಯಾಪ್ತಿಯ ಅಲ್ಲಲ್ಲಿ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಮಂಗಳವಾರ ಸುರಿದ ಮಳೆಯಿಂದಾಗಿ ಸದ್ಯ ಕಾಫಿನಾಡಿನಾದ್ಯಂತ ವಾತಾವರಣವೇ ಬದಲಾಗಿದ್ದು, ಎಲ್ಲೆಡೆ ತಂಪಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ  ನೀಡಿದೆ. ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರು, ಕಾಫಿ, ಅಡಕೆ ಬೆಳೆಗಾರರು ಕೃಷಿ ಚಟುವಟಿಕೆಗೆ ಸಿದ್ಧತೆಗೆ ಮುಂದಾಗಿದ್ದಾರೆ. ಒಟ್ಟಾರೆ ಬಿಸಿಲಿನಿಂದ ರೋಸಿ ಹೋಗಿದ್ದ ಕಾಫಿನಾಡಿನ ಜನ ಸದ್ಯ ಸುರಿದ ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Chikkamagaluru: ಪೆಟ್ರೋಲ್-ಡಿಸೇಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

2022ರಲ್ಲಿ ಲ್ಯಾಪ್ ಟಾಪ್ ಕಳವು ಮಾಡಿದ ಪ್ರಕರಣ: ಮಂಗಳೂರು ಮೂಲದ ಆರೋಪಿ ಬಂಧನ

Laptop ಕಳವು ಮಾಡಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಮ್ ಖರೀದಿಸಿ ಸಿಕ್ಕಿಬಿದ್ದ

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

Elephant: ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಕಂಗಾಲಾದ ಪ್ರಯಾಣಿಕರು

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.