Chikkamagaluru: ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಇಬ್ಬರ ದುರ್ಮರಣ
Team Udayavani, Sep 6, 2023, 7:08 PM IST
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅವಘಡ ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ಬುಧವಾರ ನಡೆದಿದೆ.
ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಿರಂಜನ್ (42) ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದು, ರತ್ನಮ್ಮ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಚಿಕ್ಕಮಗಳೂರಿನಿಂದ ಕಡೂರಿನ ಕಡೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದು ನಿರಂಜನ್ ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.
ಗಂಭೀರವಾಗಿ ಗಾಯಗೊಂಡ ರತ್ನಮ್ಮ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ