ಕೇಂದ್ರದಿಂದ ರೈತರ ಮೇಲೆ ದಬ್ಬಾಳಿಕೆ
ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರದ ಗಾಂಧಿ ಪಾರ್ಕ್‌ನ ಗಾಂ ಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಯಿತು.
Team Udayavani, Jan 31, 2021, 5:01 PM IST
ಚಿಕ್ಕಮಗಳೂರು: ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ರೈತರ ಮೇಲೆ ದಬ್ಟಾಳಿಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರದ ಗಾಂ ಧಿ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ಶನಿವಾರ ನಗರದಲ್ಲಿ ಸಮಾವೇಶಗೊಂಡ ರೈತ ಮುಖಂಡರು ಗಾಂ ಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹುತಾತ್ಮರ
ದಿನಾಚರಣೆ ಅಂಗವಾಗಿ ಒಂದು ನಿಮಿಷ ಹುತಾತ್ಮರಿಗೆ ಮೌನಾಚರಣೆ ನಡೆಸಿದರು. ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ ಮುಖಂಡರು ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ
ಘೋಷಣೆ ಕೂಗಿದರು.
ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಬಂಡವಾಳಶಾಹಿಗಳ
ಅಣತಿಯಂತೆ ಸರ್ಕಾರ ನಡೆಸುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಅಂಬಾನಿ- ಅದಾನಿಗಳಿಗೆ ಶರಣಾಗಿರುವುದರಿಂದ
ಅವರ ಸಂಪತ್ತು ವೃದ್ಧಿಗೆ ಪೂರಕವಾಗಿರುವ ಕಾನೂನನ್ನೇ ಜಾರಿ ಮಾಡುತ್ತಾ ದೇಶದ ರೈತರು, ಕಾರ್ಮಿಕರು ಸೇರಿದಂತೆ ಜನಸಾಮಾನ್ಯರ ಬದುಕಿಗೆ ಮಾರಕವಾಗಿರುವ ಆಡಳಿತ ನೀಡುತ್ತಿದೆ ಎಂದರು.
ಸರ್ಕಾರ ಕೂಡಲೇ ರೈತರ ಪಾಲಿಗೆ ಮರಣ ಶಾಸನವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕು. ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಸಂವಿಧಾನ ಸಂರಕ್ಷಣಾ ಸಮಿತಿಯ ಸಂಚಾಲಕ ಗೌಸ್ ಮೊಹಿದ್ದೀನ್, ರೈತಸಂಘದ ಕೃಷ್ಣೇಗೌಡ, ನಿರಂಜನ್ ಮೂರ್ತಿ, ರಾಜಪ್ಪ, ಉಗ್ಗೇಗೌಡ,
ಉಮೇಶ್, ಕರವೇ ಮೂಡಿಗೆರೆ ತಾಲೂಕು ಅಧ್ಯಕ್ಷ ಪ್ರಸನ್ನ, ಸಂವಿಧಾನ ಸಂರಕ್ಷಣಾ ಸಮಿತಿಯ ಕೃಷ್ಣಮೂರ್ತಿ, ಆಪ್ ಪಕ್ಷದ ಡಾ| ಸುಂದರ್‌ಗೌಡ, ದಸಂಸ ಮುಖಂಡ ಗಣೇಶ್, ಇಲಿಯಾಸ್ ಅಹ್ಮದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ