ಕೋವಿಡ್ ಪರೀಕ್ಷಾ ಕೇಂದ್ರ ಶೀಘ್ರ ಆರಂಭಿಸಿ

Team Udayavani, Jun 21, 2020, 6:26 PM IST

21-June-15

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್‌ ಪರೀಕ್ಷಾ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ| ಪ್ರಕಾಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌-19 ಸೋಂಕು ತಡೆಗೆ ವಿಧಿಸಲಾಗಿದ್ದ ಲಾಕ್‌ಡೌನ್‌ ಸಡಿಲಗೊಳಿಸಲಾಗಿದೆ. ಆದರೆ, ಸೋಂಕಿನ ಪ್ರಮಾಣ ದಿನೇ-ದಿನೇ ಹೆಚ್ಚುತ್ತಿದೆ. ಜನಸಾಮಾನ್ಯರು ಈ ಬಗ್ಗೆ ನಿರ್ಲಕ್ಷಿಸದೆ ಸೋಂಕಿನ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡು ಆರ್ಥಿಕ ನಷ್ಟ ಅನುಭವಿಸುವುದು ಸೇರಿದಂತೆ ಬಡವರಿಗೆ ಸರ್ಕಾರ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಸೇರಿದಂತೆ ನೀಡಲಾಗಿರುವ ಸವಲತ್ತುಗಳನ್ನು ಪ್ರತಿಶತ ನೂರರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ| ಕೆ.ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಈವರೆಗೆ 28 ಕೋವಿಡ್‌-19 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 72 ವರ್ಷದ ಒರ್ವ ವೃದ್ಧೆ ಮೃತಪಟ್ಟಿದ್ದಾರೆ. ಕೆಲವು ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯವಾಗಿ 8 ಪ್ರಕರಣಗಳು ಇವೆ ಎಂದು ತಿಳಿಸಿ, ಹೊರ ರಾಜ್ಯದಿಂದ ಬಂದ 223ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ 2,772 ಬೆಡ್‌ಗಳನ್ನು ಮೀಸಲಿಡಲಾಗಿದೆ ಎಂದು ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದರು.

ಜಿಪಂ ಸಿಇಒ ಎಸ್‌. ಪೂವಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಉಮೇಶ್‌, ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.