ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದ ಗ್ರಾ.ಪಂ ಚುನಾವಣೆ ನಡೆಸುವಂತೆ ಆದೇಶ !
Team Udayavani, Dec 5, 2020, 7:57 PM IST
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಅಯೋಗದ ಅಧೀನ ಕಾರ್ಯದರ್ಶಿ ಎಂ.ಪಿ.ರಂಜಿತಾ ಆದೇಶ ಹೊರಡಿಸಿದ್ದಾರೆ.
ಹೀಗಾಗಿ ಡಿಸೆಂಬರ್ 22 ರಂದೇ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಈ ಮೊದಲು ಡಿಸೆಂಬರ್ 22 ಹಾಗೂ 27 ರಂದು ಚುನಾವಣೆ ನಡೆಸುವಂತೆ ಸೂಚಿಸಲಾಗಿತ್ತು.
ಡಿಸೆಂಬರ್ 27 ರಿಂದ 29 ರವರೆಗೆ ದತ್ತಜಯಂತಿಯ ನಡೆಯುವುದರಿಂದ, ಭದ್ರತೆ ನೀಡಲು ಕಷ್ಟವಾಗುವುದು ಎಂದು ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ 22ರ ಒಂದೇ ದಿನ, ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಅಯೋಗದ ಅಧೀನ ಕಾರ್ಯದರ್ಶಿ ಎಂ.ಪಿ.ರಂಜಿತಾ ಆದೇಶ ನೀಡಿದ್ದಾರೆ.
ಇದನ್ನೂ ಓದಿ: HDK ಬಿಜೆಪಿ ಜೊತೆ ಸೇರಿದ್ದರೆ ಸಿಎಂ ಆಗುತ್ತಿರಲಿಲ್ಲ; BSY ನಮ್ಮ ನಾಯಕ: ಅಶ್ವತ್ಥನಾರಾಯಣ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444