ಈ ಬಾರಿ ಶೈಕ್ಷಣಿಕ ವರ್ಷಾರಂಭಕ್ಕೂ ಬಿತ್ತು ಕೋವಿಡ್ ಕರಿನೆರಳು

Team Udayavani, May 30, 2020, 3:48 PM IST

30-May-14

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಜೂನ್‌ 1 ಶೈಕ್ಷಣಿಕ ವರ್ಷದ ಪ್ರಾರಂಭದ ದಿನ. ಕೋವಿಡ್ ಕರಿನೆರಳು ಶೈಕ್ಷಣಿಕ ವರ್ಷದ ಪ್ರಾರಂಭ ದಿನದ ಮೇಲೂ ತನ್ನ ಪ್ರಭಾವ ಬೀರಿದೆ. ತಳಿರು ತೋರಣಗಳಿಂದ ಮಧುಮಗಳಂತೆ ಸಿಂಗಾರಗೊಂಡು ನಗುಮೊಗ ದಿಂದ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಬೇಕಾಗಿದ್ದ ಶಾಲೆಗಳಿಗೆ ಬೀಗ ಬಿದ್ದಿವೆ.

ಎಲ್ಲವೂ ಎಂದಿನಂತೆ ಇದ್ದಿದ್ದರೆ ಮೇ ತಿಂಗಳ ಅಂತ್ಯದ ವೇಳೆಗೆ ಶಾಲೆಗಳು ಬಾಗಿಲು ತೆರೆದು ಶೈಕ್ಷಣಿಕ ಚಟುವಟಿಕೆಗೆ ಸಿದ್ಧತೆಗಳು ಭರದಿಂದ ಸಾಗಬೇಕಿತ್ತು. ವಿದ್ಯಾರ್ಥಿಗಳ ದಾಖಲಾತಿ, ಪಠ್ಯಪುಸ್ತಕ, ಸೈಕಲ್‌, ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿ ನಡೆಸಿಕೊಳ್ಳ ಬೇಕಿತ್ತು. ಆದರೆ, ಕೋವಿಡ್ ಮಾಹಾಮಾರಿ ಶೈಕ್ಷಣಿಕ ಕ್ಷೇತ್ರವನ್ನು ಎಡಬಿಡದೆ ಕಾಡುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ವನ್ನು ಕಿತ್ತುಕೊಂಡಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ಕಂಡು ಬರುತ್ತಿದ್ದಂತೆ ಇಡೀ ರಾಜ್ಯಾದ್ಯಂತ ಕಳೆದ ಎರಡು ತಿಂಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ನಾಲ್ಕನೇ ಹಂತದ ಲಾಕ್‌ಡೌನ್‌ ಗೆ ಸಡಲಿಕೆ ನೀಡಿದ್ದು ಸರ್ಕಾರ ಜುಲೈ ತಿಂಗಳಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಸುಳಿವು ನೀಡಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಜುಲೈ ತಿಂಗಳಿಂದ ಶಾಲೆಗಳು ಆರಂಭವಾಗುತ್ತೋ ಇಲ್ಲವೋ ಎಂಬುದನ್ನು ಕಾದುನೋಡಬೇಕಷ್ಟೇ.

ಕೋವಿಡ್ ರಾಜ್ಯಕ್ಕೆ ಕಾಲಿಡದಿದ್ದರೆ ಜೂ.1ಕ್ಕೆ ಜಿಲ್ಲೆಯ 1,44,828 ವಿದ್ಯಾರ್ಥಿ ಗಳು ತಮ್ಮ ಶೈಕ್ಷಣಿಕ ಜೀವನವನ್ನು ಆರಂಭಿಸಬೇಕಿತ್ತು. ವಿದ್ಯಾರ್ಥಿಗಳ ಸದ್ದುಗದ್ದಲದ ನಡುವೆ ಜಿಲ್ಲೆಯ 1,968 ಶಾಲೆಗಳಲ್ಲಿ ಪಾಠಪ್ರವಚನಗಳು ಪ್ರಾರಂಭಗೊಳ್ಳಬೇಕಿತ್ತು. ಕೊರೊನಾ ಎಲ್ಲಾ ಕ್ಷೇತ್ರಗಳ ಮೇಲು ತನ್ನ ವಕ್ರದೃಷ್ಟಿ ಬೀರಿ, ಶಾಲೆಗಳ ಆರಂಭದ ದಿನವನ್ನೇ ಕಸಿದುಕೊಂಡಿದೆ.

ಪಾಳುಕೊಂಪೆಯಾದ ಶಾಲೆಗಳು: ಕೋವಿಡ್ ಸೋಂಕು ಪ್ರಕರಣಗಳು ಕಂಡು ಬರುತ್ತಿದ್ದಂತೆ ಜಿಲ್ಲೆಯ ಶಾಲೆಗಳಲ್ಲಿ ಪಾಠ ಪ್ರವಚನಗಳನ್ನು ಸ್ಥಗಿತಗೊಳಿಸಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಯಿತು. ಈ ಮಧ್ಯೆ ಬೇಸಿಗೆ ರಜೆ ಇದ್ದಿದ್ದರಿಂದ ಕಳೆದೆರೆಡು ತಿಂಗಳಿಂದ ಶಾಲೆಗಳು ಸಂಪೂರ್ಣ ಬಂದ್‌ ಆಗಿವೆ. ಎಲ್ಲವೂ ಎಂದಿನಂತೆ ಇದ್ದಿದ್ದರೆ ಮೇ 28ರಿಂದ ಶಾಲೆಗಳು ಬಾಗಿಲು ತೆರೆದುಕೊಳ್ಳಬೇಕಾಗಿತ್ತು. ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ವಿದ್ಯಾರ್ಥಿಗಳ ದಾಖಲಾತಿ ನಡೆಸಬೇಕಿತ್ತು. ಕೋವಿಡ್ ಸೋಂಕು ಶೈಕ್ಷಣಿಕ ಕ್ಷೇತ್ರದ ಮೇಲೂ ತನ್ನ ಪ್ರಭಾವ ಬೀರಿದ್ದರಿಂದ ಶಾಲೆಗಳು ಸರಿಯಾದ ಸಮಯಕ್ಕೆ ಪ್ರಾರಂಭವಾಗದೆ ಪಾಳುಕೊಂಪೆಯಾಂತಾಗಿವೆ.

ಕೋವಿಡ್ ಸೋಂಕು ಹಿನ್ನೆಲೆಯಿಂದಾಗಿ ಜೂ. 1ಕ್ಕೆ ಶಾಲೆಗಳು ಬಾಗಿಲು ತೆರೆದುಕೊಳ್ಳುವ ಯಾವ ಲಕ್ಷಣಗಳಿಲ್ಲ. ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಶಾಲೆಗಳ ಆರಂಭದ ಬಗ್ಗೆ ಸುಳಿವು ನೀಡಿದೆಯಷ್ಟೇ. ಹಾಗಾಗಿ, ಜೂ.1ರಂದು ಶಾಲೆಗಳು ಶೃಂಗಾರಗೊಳ್ಳುವ ಭಾಗ್ಯ ಕಳೆದುಕೊಂಡಿವೆ.

ಸಂದೀಪ ಜಿ.ಎನ್‌, ಶೇಡ್ಗಾರ್‌

ಟಾಪ್ ನ್ಯೂಸ್

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೆ ದಂಡ

Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೂ ಬಿತ್ತು ದಂಡ

ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

Chikmagalur: ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

Chikkamagaluru: ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ

Chikkamagaluru: ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Tragedy: ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.