ಕೋವಿಡ್ ಗೆ ಬಲಿಯಾದ ವೃದ್ಧೆಯ ಸಂಪರ್ಕದಲ್ಲಿದ್ದಾರೆ 36 ಮಂದಿ


Team Udayavani, Jun 20, 2020, 11:33 AM IST

20-January-03

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಮಗಳೂರು: ಕೋವಿಡ್ ಸೋಂಕು ತಗುಲಿ ಕೋವಿಡ್‌-19 ಆಸ್ಪತ್ರೆಯಲ್ಲಿ ಮೃತಪಟ್ಟ ಅಜ್ಜಂಪುರ ತಾಲೂಕಿನ ಡಣಾಯಕಾಪುರ ಗ್ರಾಮದ 72 ವರ್ಷದ ವೃದ್ಧೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 36 ಮಂದಿಯನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಕೆ. ಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವೃದ್ಧೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿರುವ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಕೋವಿಡ್ ಸೋಂಕು ತಗುಲಿರುವ ಸಾಧ್ಯತೆ ಇದೆ. ವೃದ್ಧೆಯ ಸಂಪರ್ಕಕ್ಕೆ ಬಂದಿದ್ದ 36 ಮಂದಿಯಲ್ಲಿ 12 ಮಂದಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನವರೆಂದು ಗುರುತಿಸಲಾಗಿದೆ. ಇವರ ವಿವರವನ್ನು ದಾವಣಗೆರೆ ಜಿಲ್ಲಾಡಳಿತಕ್ಕೆ ಈಗಾಗಲೇ ಕಳಿಸಿಕೊಡಲಾಗಿದೆ. ಉಳಿದಂತೆ 24 ಮಂದಿ ಜಿಲ್ಲೆಯವರಾಗಿದ್ದು, ಬೀರೂರಿನ 12 ಮಂದಿ, ಅಜ್ಜಂಪುರದವರು 8 ಮಂದಿ ಇದ್ದಾರೆ. ನಾಲ್ಕು ಮಂದಿ ವೃದ್ಧೆಯ ಮಕ್ಕಳು ಸೊಸೆಯಂದಿರಾಗಿದ್ದಾರೆ ಎಂದರು.

ಕೋವಿಡ್ ಸೋಂಕಿನಿಂದ ಮೃತಪಟ್ಟ ವೃದ್ಧೆ ಚನ್ನಗಿರಿ ತಾಲೂಕಿನ ಮಗಳ ಮನೆಯಿಂದ ಅಜ್ಜಂಪುರ ತಾಲೂಕು ಡಣಾಯಕಪುರ ಗ್ರಾಮಕ್ಕೆ ಬಂದ ಬಳಿಕ ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿತ್ತು. ಕುಟುಂಬದವರು ವೃದ್ಧೆಯನ್ನು ಬೀರೂರು, ಅಜ್ಜಂಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಮೃತ ವೃದ್ಧೆಯ ಪ್ರಾಥಮಿಕ ಸಂಪರ್ಕಗಳಲ್ಲಿ 20 ಮಂದಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯಾಗಿದ್ದಾರೆಂದು ತಿಳಿಸಿದರು.

ಈಗಾಗಲೇ 24 ಮಂದಿಯ ಪ್ರಾಥಮಿಕ ಸಂಪರ್ಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಮೃತ ವೃದ್ಧೆಯ ಮಗನಲ್ಲಿ ಕೋವಿಡ್ ಸೋಂಕಿರುವುದು ಗುರುವಾರ ಪ್ರಯೋಗಾಲಯದಿಂದ ಬಂದ ವರದಿಯಿಂದ ಬೆಳಕಿಗೆ ಬಂದಿದೆ. ಆತನನ್ನು ನಗರದಲ್ಲಿ ತೆರೆಯಲಾಗಿರುವ ಕೋವಿಡ್‌ -19 ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ವೃದ್ಧೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ವೃದ್ಧೆಯ ಮಗನಲ್ಲಿ ಕೊರೊನಾ ಸೋಂಕಿರುವುದು ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ. ಆತನ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮೃತಪಟ್ಟ ವೃದ್ಧೆ ವಾಸವಿರುವ ಗ್ರಾಮವನ್ನು ಸೀಲ್‌ಡೌನ್‌ ಮಾಡಿಲ್ಲವೆಂದು ಅಪರ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.