ಪ್ರವಾಸಿ ತಾಣಗಳ ಅಭಿವೃದ್ಧಿಗೆ 150 ಕೋಟಿ ಅನುದಾನ


Team Udayavani, Feb 3, 2020, 12:40 PM IST

3-Febrauary-10

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ಕಳೆದ ಸಾಲಿನ 65 ಕಾಮಗಾರಿಗಳಿಗೆ ಸರ್ಕಾರ ಮಂಜೂರು ಮಾಡಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮ ಟೆಂಡರ್‌ ಕರೆದು ಕಾಮಗಾರಿ ಕೆೃಗೆತ್ತಿಕೊಳ್ಳಬೇಕಾಗಿದ್ದು, 150 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯ, ಯಾತ್ರಿ ನಿವಾಸ ನಿರ್ಮಾಣ, ಡಾರ್ಮೆಟರಿ, ಕುಡಿಯುವ ನೀರು, ಶೌಚಾಲಯ, ವಾಹನ ಪಾರ್ಕಿಂಗ್‌, ನಾಮಫಲಕ ಅಳವಡಿಕೆ, ಕೂಡು ರಸ್ತೆ ಅಭಿವೃದ್ಧಿಗೆ ಮುಂದಾಗಲಿದೆ.

ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಿರೇಮಗಳೂರು ದೇವಾಲಯ, ಬೋಳರಾಮೇಶ್ವರ ದೇವಾಲಯ, ಮುಳ್ಳಯ್ಯನಗಿರಿ ಪ್ರದೇಶದಲ್ಲಿರುವ ಹೊನ್ನಮ್ಮನಹಳ್ಳ, ಮಾಣಿಕ್ಯಧಾರ, ಕವಿಗಲ್‌ಗ‌ಂಡಿ ನಗರದ ಬಸವನಹಳ್ಳಿ ಕೆರೆ ಅಭಿವೃದ್ಧಿಪಡಿಸಿ ಕೆರೆಯ ಏರಿ ಸುತ್ತ ಫೆನ್ಸಿಂಗ್‌ ಅಳವಡಿಕೆ, ವಾಕಿಂಗ್‌ ಪಾಥ್‌ ನಿರ್ಮಿಸಿ ನಗರಕ್ಕೆ ಆಗಮಿಸುವ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ದೋಣಿ ವಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಕೋಟೆಕೆರೆ, ಹಿರೇಕೊಳಲೆ ಕೆರೆ, ಮೂಗ್ತಿಹಳ್ಳಿ ಕೆರೆ, ಆಜಾದ್‌ ರಸ್ತೆ, ಬೆಳವಾಡಿ ವೀರನಾರಾಯಣ ದೇವಾಲಯ, ಖಾಂಡ್ಯ ದೇವಾಲಯ, ಬಾಳೆಹೊನ್ನೂರು, ಶೃಂಗೇರಿಯ ಸಿರಿಮನೆ ಜಲಪಾತ, ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗ, ತರೀಕೆರೆಯ ಅಕ್ಕನಾಗಲಾಂಬಿಕೆ ಗದ್ದುಗೆ, ಸೊಲ್ಲಾಪುರ, ಕಡೂರಿನ ಸಖರಾಯಪಟ್ಟಣ, ಕವಿಲಕ್ಷೀಶನ ದೇವನೂರು ಸೇರಿದಂತೆ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮುಂದಾಗಿದ್ದಾರೆ.

ಮೊದಲ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, 15 ದಿನದೊಳಗೆ 150 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ ಎಂದು ತಿಳಿದು ಬಂದಿದೆ. ಟೆಂಡರ್‌ ಮೂಲಕ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿವೆ. ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಆತಿಥ್ಯ ನೀಡಲು 350 ಹೋಂಸ್ಟೇಗಳು ಸರ್ಕಾರದ ಅನುಮತಿ ಪಡೆದು ಕಾರ್ಯ ನಿರ್ವಹಿಸುತ್ತಿದ್ದು, ಚಿಕ್ಕಮಗಳೂರು ತಾಲೂಕಿನಲ್ಲಿ ಹೆಚ್ಚು ಹೋಂಸ್ಟೇಗಳಿದ್ದು ಎರಡನೇ ಸ್ಥಾನ ಮೂಡಿಗೆರೆ ಪಡೆದುಕೊಂಡಿದೆ. 2019ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 72.ಲಕ್ಷ ದೇಶಿ ಹಾಗೂ ವಿದೇಶಿಯರು ಯಾತ್ರಾಸ್ಥಳ ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಶೃಂಗೇರಿಗೆ 39.30 ಲಕ್ಷ, ಹೊರನಾಡು 22.17 ಲಕ್ಷ, ಕಳಸ 4.63ಲಕ್ಷ, ದತ್ತಪೀಠ 3.52ಲಕ್ಷ, ಕೆಮ್ಮಣ್ಣುಗುಂಡಿಗೆ ಕೆಮ್ಮಣ್ಣುಗುಂಡಿ 1.54 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಜೂನ್‌, ಆಗಸ್ಟ್‌, ಸೆಪ್ಪೆಂಬರ್‌ ತಿಂಗಳಲ್ಲಿ ಜಿಲ್ಲಾದ್ಯಂತ ಭಾರೀ ಮಳೆಯಿಂದ ಪ್ರವಾಸಿಗ ಸಂಖ್ಯೆ ಸ್ವಲ್ಪಮಟ್ಟಿಗೆ ಇಳಿಮುಖವಾಗಿದ್ದು, ಶೃಂಗೇರಿಗೆ ಜೂನ್‌ ತಿಂಗಳಲ್ಲಿ 1.65 ಲಕ್ಷ, ಕಳಸಕ್ಕೆ 1.50 ಲಕ್ಷ ಜೂನ್‌ 10ಸಾವಿರ ಕಡಿಮೆ ಪ್ರವಾಸಿಗರು ಆಗಮನವಾಗಿದೆ.

ಹೊರನಾಡಿಗೆ ಡಿಸೆಂಬರ್‌ನಲ್ಲಿ 5ಲಕ್ಷ, ಆಗಸ್ಟ್‌ನಲ್ಲಿ 75 ಸಾವಿರ, ಬಾಳೆಹೊನ್ನೂರಿಗೆ ಡಿಸೆಂಬರ್‌ ತಿಂಗಳಿನಲ್ಲಿ ಅಧಿಕ 1.20 ಲಕ್ಷ, ಹೊರನಾಡಿಗೆ ಅಧಿಕ 15ಸಾವಿರ ಭಕ್ತರು  ಡಿಸೆಂಬರ್‌ನಲ್ಲಿ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.