ಸಾರಿಗೆ ಬಸ್‌ ಸಂಚಾರ ಆರಂಭ: ವೀರೇಶ್‌

Team Udayavani, Jun 12, 2020, 3:25 PM IST

12-June-13

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಮಗಳೂರು: ಲಾಕ್‌ಡೌನ್‌ ಸಡಲಿಕೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ 267 ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭಿಸಿದ್ದು, ತಾಲೂಕು ಕೇಂದ್ರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬೇಡಿಕೆಗೆ ಅನುಗುಣವಾಗಿ ಬಸ್‌ ಸೇವೆ ಆರಂಭಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ಟಿ.ವೀರೇಶ್‌ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸೇವೆ ಪುನಃ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಬಸ್‌ ಸಂಚಾರ ಸೇವೆಯನ್ನು ಬುಧವಾರದಿಂದಲೇ ಆರಂಭಿಸಲಾಗಿದೆ ಎಂದರು. ಚಿಕ್ಕಮಗಳೂರು ವಿಭಾಗದ 540 ಬಸ್‌ಗಳ ಪೈಕಿ. 267 ಬಸ್‌ ಸಂಚಾರ ಆರಂಭಿಸಿವೆ. ಬೇಡಿಕೆ ಹೆಚ್ಚಿರುವ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್‌ ಸಂಚಾರ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಸಂಚಾರ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಧರ್ಮಸ್ಥಳಕ್ಕೆ ಮೂಡಿಗೆರೆಯಿಂದ ಚಾರ್ಮಾಡಿ ಘಾಟ್‌ ಮೂಲಕ ಎರಡು ಮಿನಿ ಬಸ್‌ ಸಂಚಾರ ಆರಂಭಿಸಿದ್ದು, ಮೂಡಿಗೆರೆ ಪಟ್ಟಣದಿಂದ ಸಕಲೇಶಪುರ, ಹುನಗುಂದ, ಹುಬ್ಬಳ್ಳಿ, ಬೆಳಗಾವಿ, ಹಾಸನ, ಶಿವಮೊಗ್ಗ, ಚಿತ್ರದುರ್ಗ ಸಂಪರ್ಕದ ಬಸ್‌ಗಳ ಸಂಚಾರವನ್ನೂ ಆರಂಭಿಸಲಾಗಿದೆ ಎಂದು ತಿಳಿಸಿದರು.

ಮಲೆನಾಡು ಭಾಗದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಬಾಳೆಹೊನ್ನೂರು ಪಟ್ಟಣವನ್ನು ಕೇಂದ್ರವಾಗಿರಿಸಿಕೊಂಡು ಶೃಂಗೇರಿ, ಕಳಸ, ಕೊಪ್ಪ, ಎನ್‌. ಆರ್‌.ಪುರ ಪಟ್ಟಣಗಳಿಗೆ ಬಸ್‌ಗಳ ಸಂಚಾರ ಆರಂಭಕ್ಕೆ ಕ್ರಮಕೈಗೊಳ್ಳಲಾಗಿದ್ದು, ಮಲೆನಾಡು ಭಾಗದಲ್ಲಿ ಖಾಸಗಿ ಬಸ್‌ಗಳ ಸಂಚಾರ ಇನ್ನೂ ಆರಂಭವಾಗದಿರುವುದರಿಂದ ಈ ಭಾಗದಲ್ಲಿ ಸರಕಾರಿ ಬಸ್‌ಗಳ ಸಂಚಾರಕ್ಕೆ ಕ್ರಮವಹಿಸಲಾಗಿದೆ. ಇದರಿಂದ ಮಲೆನಾಡಿನ ಗ್ರಾಮೀಣ ಜನರಿಗೆ ಅನುಕೂಲವಾಗಿದೆ ಎಂದರು.

ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಸ್‌ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಸ್‌ ಸಂಚಾರದಲ್ಲಿ ಪ್ರಯಾಣಿಕರ ಸಂಖ್ಯೆ 30ಕ್ಕೆ ಸರ್ಕಾರ ನಿಗದಿಪಡಿಸಿದ್ದು, 30 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬಸ್‌ ಸಂಚರಿಸುತ್ತಿದ್ದು ಹಂತ ಹಂತವಾಗಿ ಎಲ್ಲೆಡೆ ಬಸ್‌ ಸಂಚಾರ ಆರಂಭಿಸಲಾಗುವುದು.
.ಎಚ್‌.ಟಿ.ವಿರೇಶ್‌,
ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.