ಬಂಜಾರ ಸಮುದಾಯದ ಏಳಿಗೆಗೆ ಬದ್ಧ; ಶಾಸಕ ಪಿ.ರಾಜೀವ್‌

ಸಂವಾದ ಕಾರ್ಯಕ್ರಮಗಳು ಪ್ರಜಾಪ್ರಭುತ್ವದ ಶಕ್ತಿಯಾಗಿದೆ.

Team Udayavani, Jun 7, 2022, 6:07 PM IST

ಬಂಜಾರ ಸಮುದಾಯದ ಏಳಿಗೆಗೆ ಬದ್ಧ; ಶಾಸಕ ಪಿ.ರಾಜೀವ್‌

ಚಿಕ್ಕಮಗಳೂರು: ಬಂಜಾರ ಸಮುದಾಯವನ್ನು ಸಮಾಜದಲ್ಲಿ ಒಗ್ಗೂಡಿಸುವ ಚಿಂತನೆ ಹಾಗೂ ಪ್ರಯತ್ನ ನಿರಂತರವಾಗಿರಲಿದೆ. ಸಮುದಾಯದ ಅಸ್ತಿತ್ವವನ್ನು ಬಲಗೊಳಿಸುವ ಮೂಲಕ ಅದರ ಏಳಿಗೆಗೆ ಬದ್ಧನಾಗಿದ್ದೇನೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ.ರಾಜೀವ್‌ ಹೇಳಿದರು.

ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ “ಸಾಮಾಜಿಕ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಬಂಜಾರ ಸಮುದಾಯದ 22ಲಕ್ಷ ಜನರಿದ್ದು, ಶೇ.99ರಷ್ಟು ಜನ ಹಿಂದುಳಿದಿದ್ದಾರೆ. ಸಮುದಾಯದ ರಾಜಕೀಯ ಅಸ್ತಿತ್ವ ಬಲಗೊಳಿಸುವ ಕಾರ್ಯ
ಅವಶ್ಯಕವಾಗಿದ್ದು, ಸಮುದಾಯದ ರಾಜಕೀಯ ಸಂವೇದನಾಶೀಲತೆಯನ್ನು ಗುರುತಿಸಿ ರಾಜಕೀಯ ಜಾಗೃತಿ ಮೂಡಿಸುವ ಪ್ರಯೋಗಗಳನ್ನು ಮಾಡುವ ಮೂಲಕ ಸಮುದಾಯದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದಲ್ಲಿ ಸಮುದಾಯದ ಸುಸ್ಥಿರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಸಮುದಾಯದವರು ಜೀವನೋಪಾಯಕ್ಕೆ ರಾಜ್ಯದ ವಿವಿಧ ಭಾಗಗಳಿಗೆ ಗುಳೆ ಹೋಗುತ್ತಿದ್ದು ಅವರಿಗಾಗಿ ರಾಜ್ಯದ ನಾನಾ ಭಾಗದಲ್ಲಿ ಋತುಮಾನ ಶಾಲೆಗಳನ್ನು ಆರಂಭಿಸಲಾಗಿದೆ. ನಿಗಮದ ಅನುದಾನವನ್ನು ಕೇವಲ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಸೀಮಿತವಾಗಿರಿಸದೆ, ಸಮುದಾಯ ಭವನ, ಶಾಲೆ, ಗ್ರಂಥಾಲಯ ಹಾಗೂ ಸಮಾಜಕ್ಕೆ ಪೂರಕವಾಗುವ ಕಾರ್ಯಗಳಿಗೆ ಹೆಚ್ಚು ಉಪಯೋಗಿಸಬೇಕು ಎಂದರು.

ರೈತ ಉತ್ಪಾದಕ ಸಂಸ್ಥೆಗಳಲ್ಲಿ (ಎಫ್‌ಪಿಒ) ರೈತರು ಬೀಜ ಮತ್ತು ರಸಗೊಬ್ಬರವನ್ನು ನೇರವಾಗಿ ಕಾರ್ಖಾನೆಗಳಿಂದ ಖರೀದಿಸಬಹುದಾಗಿದೆ. ಬಂಜಾರ ಸಮುದಾಯದವರು ಎಫ್‌ಪಿಒಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ನಿಗಮದಿಂದಲೂ ಪ್ರತಿ ಎಫ್‌ಪಿಒಗೆ 15 ಲಕ್ಷ ರೂ. ಅನುದಾನವನ್ನು ನೀಡಲಾಗುತ್ತಿದೆ ಎಂದರು. ಬಂಜಾರ ಸಮುದಾಯದ ಕಲಾ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಗತ್ತಿಗೆ ತೋರಿಸುವ ಸಲುವಾಗಿ ಹಂಪಿ ಮತ್ತು ಗೋವಾ ರಸ್ತೆ ಮಾರ್ಗದಲ್ಲಿರುವ ಬಹದ್ದೂರು ಬಂದಾ ಎಂಬ ತಾಂಡಾವನ್ನು ಎಕೋ ತಾಂಡಾ ಹಳ್ಳಿಯಾಗಿ ಮಾರ್ಪಡಿಸಿ ವಿದೇಶಿಯರಿಗೆ ಸ್ಥಳೀಯ ಊಟದ ರುಚಿ ಮತ್ತು ಸಂಸ್ಕೃತಿಯನ್ನು ಪರಿಚಯ ಮಾಡಿಸುವ ಪ್ರವಾಸ ತಾಣವನ್ನಾಗಿ ಮಾಡುವ ಆಶಯವಿದ್ದು, ಸದ್ಯದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದರು.

ನಿಗಮಕ್ಕೆ ದೊರೆಯುವ 70 ಕೋಟಿ ರೂ. ಅನುದಾನದಲ್ಲಿ ರಾಜ್ಯದಲ್ಲಿರುವ 3300 ತಾಂಡಾಗಳಿಗೆ ತಲಾ 6 ರಿಂದ 7 ಲಕ್ಷ ದೊರೆಯಬಹುದು. ಇದರಿಂದ ಅಭಿವೃದ್ಧಿ ಕಾರ್ಯಗಳು ನಿಯಮಿತವಾಗಿರಲಿದೆ. ಆದರೆ ಎಸ್‌.ಸಿ.ಪಿ. ಮತ್ತು ಟಿ.ಎಸ್‌.ಪಿ. ಯೋಜನೆಗೆ ಸರ್ಕಾರ ನೀಡುವ 29,000 ಕೋಟಿ ರೂ. ಹಣದಲ್ಲಿ ಬಂಜಾರ ಸಮುದಾಯದ ಪಾಲು ಇದೆ ಎಂಬುದನ್ನು ಅರಿತು ವಿವಿಧ ಉದ್ದಿಮೆಗಳಿಗೆ ನೀಡಲಾಗುವ ಸೌಲಭ್ಯಗಳನ್ನು ಸಮುದಾಯದವರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂವಾದದಲ್ಲಿ ಸಮುದಾಯದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಪಿ.ರಾಜೀವ್‌ ಸಮುದಾಯದ ಶ್ರೇಯೋಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಸಿ.ಟಿ. ರವಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಜನಪ್ರತಿನಿಧಿ ಗಳು ಹಾಗೂ ಜನ ಸಾಮಾನ್ಯರ ನಡುವಿನ ಚರ್ಚೆಗಳು ಹಾಗೂ ಸಂವಾದ ಕಾರ್ಯಕ್ರಮಗಳು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಈ ಸಂವಾದಗಳಿಗೆ ಜನ ಸಾಮಾನ್ಯರ ಸಮಸ್ಯೆಗಳನ್ನು ಗ್ರಹಿಸುವ ಶಕ್ತಿಯಿರುತ್ತದೆ ಎಂದರು.

ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಬಂಜಾರ ಭಾಷೆಯ ಏಳಿಗೆಗೆ ಬಂಜಾರ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗಿದ್ದು, ಸಮುದಾಯದ ಏಳಿಗೆಗೆ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದರು. ಕಡೂರು ಶಾಸಕ ಬೆಳ್ಳಿಪ್ರಕಾಶ್‌, ಜಿಲ್ಲೆಯ ಬಂಜಾರ ಸಮುದಾಯ ಸಂಘದ ಅಧ್ಯಕ್ಷ ಲಕ್ಷ್ಮಣನಾಯ್ಕ ಹಾಗೂ ಸಮುದಾಯದ ಇತರ  ಮುಖಂಡರು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.