ಕೇಂದ್ರದಿಂದ ತುಘಲಕ್‌ ದರ್ಬಾರ್‌


Team Udayavani, Mar 9, 2021, 1:09 PM IST

ಕೇಂದ್ರದಿಂದ ತುಘಲಕ್‌ ದರ್ಬಾರ್‌

ಕೊಟ್ಟಿಗೆಹಾರ: ಮೋದಿ ಸರ್ಕಾರದಿಂದ ಆಧುನಿಕ ತುಘಲಕ್‌ ದರ್ಬಾರಿನ ಆಡಳಿತ ನಡೆಸಲಾಗುತ್ತಿದ್ದುಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಸುಧಿಧೀರ್‌ ಕುಮಾರ್‌ ಮುರೋಳಿ ಹೇಳಿದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ  ನೀತಿ ಖಂಡಿಸಿ ಬಣಕಲ್‌ ಹೋಬಳಿಕಾಂಗ್ರೆಸ್‌ ಘಟಕದ ವತಿಯಿಂದ ಸೋಮವಾರ ಬಣಕಲ್‌ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರ ಇಂಧನದ ದರ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕಾಫಿನಾಡು ಭಾಗದಲ್ಲಿ ನೆರೆಬಂದು ಜನರು ಸಂತ್ರಸ್ತರಾದರು.

ಆದರೆ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಆಗಲಿ, ಸಿ.ಟಿ.ರವಿ ಆಗಲಿ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಇದು ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಬೆಲೆ ಏರಿಕೆ ಇಳಿಸಿ ಜನಪರ ಕೆಲಸವನ್ನು ಬಿಜೆಪಿ ಮಾಡಬೇಕು. ಇಲ್ಲವಾದರೆ ಜನರು ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಡಳಿತದಿಂದ ಇಳಿಸುವ ಕೆಲಸ ಮಾಡಲಿದ್ದಾರೆ ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಕೆ.ಪಿ. ಅಂಶುಮಂತ್‌ ಮಾತನಾಡಿ, ಸರ್ಕಾರದ ದುರಾಡಳಿತದ ವಿರುದ್ಧ ದ್ವನಿ ಎತ್ತಿದರೆ ದೇಶದ್ರೋಹಿಗಳೆಂದು ಬಿಂಬಿಸುವ ಕೆಲಸ ಮಾಡಲಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಿನಬಳಕೆ ವಸ್ತುಗಳು, ಅಡುಗೆ ಅನಿಲ, ಪಟ್ರೋಲ್‌, ಡಿಸೇಲ್‌ ಬೆಲೆ ನಿರಂತರವಾಗಿ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕು ನಾಶ ಮಾಡಲಾಗುತ್ತಿದೆ ಎಂದರು.

ರಾಜ್ಯ ಮಹಿಳಾ ಕಾಂಗ್ರೆಸ್‌ ಕಾರ್ಯದರ್ಶಿ ನಯನ ಮೋಟಮ್ಮ ಮಾತನಾಡಿ, ಬಿಜೆಪಿಯು ಜನಪರಸರ್ಕಾರವಾಗದೇ ಬೆಲೆ ಏರಿಸಿ ಜನವಿರೋಧಿ  ಕೆಲಸಮಾಡುತ್ತಿದೆ. ಕೃಷಿಕರು, ಕಾಫಿ ಬೆಳೆಗಾರರು, ರೈತರು, ಕಾರ್ಮಿಕ ವರ್ಗದವರ ಸಂಕಷ್ಟವನ್ನು ಅರಿತುಕೊಳ್ಳದೆಬದುಕಿನ ಜೊತೆ ಆಟವಾಡುತ್ತಿದೆ. ಮುಂದೆಯೂ ಬಿಜೆಪಿ ಸರ್ಕಾರಕ್ಕೆ ಎಚ್ಚರವಾಗುವವರೆಗೂ ಕಾಂಗ್ರೆಸ್‌ ಪ್ರತಿಭಟನೆ ಮುಂದುವರಿಸಲಿದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಂದ್ರ ಗೌಡ, ಬಣಕಲ್‌ ಹೋಬಳಿ ಘಟಕದ ಅಧ್ಯಕ್ಷ ಟಿ.ಎಂ. ಸುಬ್ರಹ್ಮಣ್ಯ ಮಾತನಾಡಿದರು.

ಈ ಸಂದರ್ಭದಲ್ಲಿ ಬಾಳೂರು ಹೋಬಳಿ ಘಟಕದ ಅಧ್ಯಕ ಬಿ.ಜಿ.ಶ್ರೀನಾಥ್‌, ಎಂ.ವಿ. ಚೆನ್ನಕೇಶವಗೌಡ, ಪ್ರಭಾಕರ್‌ ಬಿನ್ನಡಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೆಲ್ವಿನ್‌ ಲಸ್ರಾದೊ, ಎಸ್‌.ಟಿ. ಬ್ಲಾಕ್‌ ಅಧ್ಯಕ್ಷ ಹರೀಶ್‌, ಅಭಿಲಕ್ಷ್ಮಣ್‌ ಗೌಡ, ಕೆ.ಆರ್‌.ಸುಂದರೇಶ್‌,ಎಂ.ಡಿ. ಮುನಾವರ್‌, ಕಾಂಗ್ರೆಸ್‌ ಮುಖಂಡರಾದ ಬಿ.ಎ. ಉಮ್ಮರ್‌, ಸಬ್ಲಿ ದೇವರಾಜ್‌, ವೆಂಕಟೇಶ್‌, ಮನೋಜ್‌, ಸಿ.ಎಸ್‌. ವಿನಯ್‌, ಮನೋಹರ್‌, ಅಹ್ಮದ್‌ ಬಾವಾ, ಸುರೇಂದ್ರ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.