ಬಿಜೆಪಿಯವರ ಗೊಡ್ಡು ಬೆದರಿಕೆಗೆ ಹೆದರಲ್ಲ: ಡಿ.ಕೆ. ಶಿವಕುಮಾರ್
Team Udayavani, Nov 29, 2022, 11:43 PM IST
ಚಿಕ್ಕಮಗಳೂರು/ಮೂಡಿಗೆರೆ: ರಾಜ್ಯ ಸರಕಾರ ಆದಾಯ ತೆರಿಗೆ, ಕೇಂದ್ರದ ಜಾರಿ ನಿರ್ದೇಶನಾಲಯ (ಇ.ಡಿ.) ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮುಖಂಡರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ನಾವು ಪಕ್ಷಕ್ಕಾಗಿ ಪ್ರಾಣ ಬಿಡುತ್ತೇವೆ ಹೊರತು, ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮೂಡಿಗೆರೆಯಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಡಬಲ್ ಎಂಜಿನ್ ಸರಕಾರ ಜನರ ಬದುಕು ಕಟ್ಟುವ ಕೆಲಸ ಮಾಡಿಲ್ಲ. ಮೂರು ವರ್ಷಗಳಿಂದ ಆಡಳಿತದಲ್ಲಿರುವ ರಾಜ್ಯ ಸರಕಾರ ಜನರ ಜೀವನ ಬದಲಾವಣೆ ಮಾಡುವ ಕಾರ್ಯಕ್ರಮ ಕೈಗೊಳ್ಳದೆ ಪ್ರತೀನಿತ್ಯ ಜನರ ಜೇಬಿಗೆ ಕನ್ನಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಬಿಜೆಪಿಗರ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ?
ಸರಕಾರದ ದುರಾಡಳಿತ ದಿಂದ ಜನರು ಬೇಸತ್ತು ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷದ ನಾಯಕರು ಮತ್ತು ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿ ಮುಖಂಡರ ಮನೆ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿಕೆಶಿ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ವಿಜಯಪುರ: ಶೀಲ ಸಂಕಿಸಿ ಪತ್ನಿ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ