ಒಡೆದ ಮನೆಯಾಗಿ ಮೂರು ಗುಂಪಾದ ಕಾಂಗ್ರೆಸ್: ಕಾರಜೋಳ
Team Udayavani, Feb 27, 2021, 3:41 PM IST
ಚಿಕ್ಕಮಗಳೂರು: ಕಾಂಗ್ರೆಸ್ ಒಡೆದ ಮನೆಯಾಗಿ ಮೂರು ಗುಂಪಾಗಿದೆ. ಸಿದ್ದರಾಮಯ್ಯರವರದ್ದು ಒಂದು ಗುಂಪು, ಡಿ.ಕೆ. ಶಿವಕುಮಾರ್ ಅವರದ್ದು ಒಂದು ಗುಂಪು, ಮಲ್ಲಿಕಾರ್ಜುನ್ ಖರ್ಗೆ ಅವರದ್ದು ಒಂದು ಗುಂಪು. ಈ ಮೂರು ಗುಂಪುಗಳ ನಡುವೆ 24 ಗಂಟೆಯೂ ಗುದ್ದಾಟ ನಡೆಯುತ್ತಿರುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮೂರು ಗುಂಪುಗಳ ಗುದ್ದಾಟ ಹೊಸದಲ್ಲ. ಈ ಗುದ್ದಾಟದಿಂದಲೇ ಕಾಂಗ್ರೆಸ್ ನೆಲಕಚ್ಚಿದೆ ಎಂದರು. 2006 ರಲ್ಲಿ ಬಿಜೆಪಿಯವರು ಜೆಡಿಎಸ್ ಸೇರಲು ಸಿದ್ಧರಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಡೀ ದೇಶವೇ ಬಿಜೆಪಿಯಾಗಿದೆ. 23 ರಾಜ್ಯಗಳಲ್ಲಿ ಅಧಿ ಕಾರದಲ್ಲಿದೆ. ಇಷ್ಟು ಸ್ಥಾನಗಳು ಕುಮಾರಸ್ವಾಮಿ ಅವರ ಆಶೀರ್ವಾದದಿಂದಲೇ ಬಂದಿದೆಯಾ ಎಂದು ಪ್ರಶ್ನಿಸಿದ ಅವರು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬಿಜೆಪಿ ಸದೃಢವಾಗಿದೆ. 2009ರಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿದ್ದರು.
ಇವತ್ತು ಕಾಂಗ್ರೆಸ್ ಮುಕ್ತಭಾರತವಾಗಿದೆ ಎಂದ ಅವರು ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು. ನನ್ನ ಮಗ ಎರಡೂವರೆ ತಿಂಗಳು ವೆಂಟಿಲೇಟರ್‌ನಲ್ಲಿದ್ದ. ವಿನಯ್ ಗುರೂಜಿಯವರು ಬೆಂಗಳೂರಿಗೆ ಬಂದು ನಿಮ್ಮ ಮಗನಿಗೆ ಏನೂ ಆಗೋದಿಲ್ಲ ಎಂದಿದ್ದರು. ನನ್ನ ಮಗ ಈಗ ಆರಾಮಾಗಿದ್ದಾನೆ. ಹಾಗಾಗಿ ಅವರ ದರ್ಶನಕ್ಕೆ ಹೋಗುತ್ತಿದ್ದೇನೆ. ಶನಿವಾರ ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿ ದರ್ಶನ ಪಡೆದುಕೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್ : ಪುತ್ತೂರು ಮೂಲದ ಇಬ್ಬರು ಪ್ರಾಣಾಪಾಯದಿಂದ ಪಾರು
ಮಲೆನಾಡಲ್ಲಿ ಮಳೆಯ ಅಬ್ಬರ : ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ, ಕಂಗಾಲಾದ ರೈತ
ಕೈ ಶಾಸಕರ ಆಪ್ತ ಸೇರಿ 250 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ಕೊಟ್ಟಿಗೆಹಾರ : ಮನೆಯ ಹಿಂಭಾಗದಲ್ಲೇ ನೇಣಿಗೆ ಶರಣಾದ ವ್ಯಕ್ತಿ, ಕಾರಣ ನಿಗೂಢ
ಚಿಕ್ಕಮಗಳೂರು: ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ಕಾರು
MUST WATCH
ಹೊಸ ಸೇರ್ಪಡೆ
ಜಪಾನ್ ಕಂಪನಿಗಳಿಗೆ ಹೂಡಿಕೆ ಹೆಚ್ಚಿಸಲು ಮನವಿ
ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ
ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬ ಇಲ್ಲದಿದ್ದರೂ, ಹಿಂದೂಗಳೇ ಸೇರಿ ಮೊಹರಂ ಹಬ್ಬ ಆಚರಿಸುತ್ತಾರೆ
ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ