ಮಾತೃಇಲಾಖೆಗೆ ಬರಲು ಎಎನ್‌ಎಫ್‌ ಸಿಬ್ಬಂದಿ ಸಜ್ಜು

ನಕ್ಸಲ್‌ ಚಟುವಟಿಕೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ಈ ತೀರ್ಮಾನ

Team Udayavani, Apr 8, 2022, 4:13 PM IST

naxal

ಚಿಕ್ಕಮಗಳೂರು: ನಕ್ಸಲ್‌ ಪ್ರದೇಶಗಳೆಂದು ಗುರುತಿಸಿಕೊಂಡ ಪ್ರದೇಶಗಳಲ್ಲಿ ನಕ್ಸಲ್‌ ಚಟುವಟಿಕೆ ಕ್ಷೀಣಿಸಿದ್ದು ಈ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ದಳ ಸಂಖ್ಯೆಯಲ್ಲಿ ಕಡಿತಗೊಳಿಸಲು ಸರ್ಕಾರ ಮುಂದಾಗಿದ್ದು ನಕ್ಸಲ್‌ ನಿಗ್ರಹ ಪಡೆಯಲ್ಲಿದ್ದ ಸಿಬ್ಬಂದಿಗಳಲ್ಲಿ ಕೆಲವರು ಮಾತೃ ಇಲಾಖೆಗೆ ಮರಳಲು ಸಜ್ಜಾಗುತ್ತಿದ್ದಾರೆ.

ಈ ಹಿಂದೆ ಮಲೆನಾಡಿನ ಅರಣ್ಯದಂಚಿನಲ್ಲಿ ನಕ್ಸಲ್‌ ಚಟುವಟಿಕೆ ಕಾಣಿಸಿಕೊಂಡು ತೀವ್ರಗೊಳ್ಳುತ್ತಿದ್ದಂತೆ ಸರ್ಕಾರ 2005ರಲ್ಲಿ ನಕ್ಸಲ್‌ ನಿಗ್ರಹ ಪಡೆ ರಚಿಸಿತು. ಹಿರಿಯ ಐಪಿಎಸ್‌ ಅಧಿಕಾರಿ ಮಧುಕರ ಶೆಟ್ಟಿ ನಕ್ಸಲ್‌ ನಿಗ್ರಹ ಪಡೆಯ ಮೊದಲ ಎಸ್ಪಿಯಾಗಿ ನೇಮಕಗೊಂಡಿದ್ದರು.

ನಕ್ಸಲ್‌ ನಿಗ್ರಹ ಪಡೆಗೆ ಸಿವಿಲ್‌ ಪೊಲೀಸ್‌ ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಂಡು ಅವರಿಗೆ ವಿಶೇಷ ತರಬೇತಿ ನೀಡಿ ಕಾಡಿನಲ್ಲಿ ಕೂಬಿಂಗ್‌ ಕಾರ್ಯಾಚರಣೆ ನಡೆಸಲಾಗಿತ್ತು. ನಕ್ಸಲ್‌ ಚಟುವಟಿಕೆಗೆ ಕಡಿವಾಣ ಹಾಕಲು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯಲ್ಲಿ ಎಎನ್‌ಎಫ್‌ ತಂಡಗಳು ಕಾರ್ಯಾಚರಣೆ ಆರಂಭಿಸಿದವು.

ಮಲೆನಾಡಿನ ಕಾಡಂಚಿನಲ್ಲಿ ನಕ್ಸಲ್‌ ಚಟುವಟಿಕೆ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆ ಮೂರು ಜಿಲ್ಲೆಗಳಲ್ಲಿ 10 ಕ್ಯಾಂಪ್‌ಗ್ಳನ್ನು ತೆರೆಯಲಾಯಿತು. ಚಿಕ್ಕಮಗಳೂರು ಜಿಲ್ಲೆ ದ್ಯಾವಲಕೊಪ್ಪ, ಕಿಗ್ಗ, ಕೆರೆಕಟ್ಟೆ, ಜಯಪುರ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಹೆಬ್ರಿ ಸೇರಿದಂತೆ ಇತರೆಡೆಗಳಲ್ಲಿ ಕ್ಯಾಂಪ್‌ ಆರಂಭಗೊಂಡಿತು. ಪ್ರತೀ ಕ್ಯಾಂಪ್‌ನಲ್ಲಿ 30 ರಿಂದ 35 ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿತ್ತು. ಪೊಲೀಸ್‌ ವರಿಷ್ಠಾಧಿಕಾರಿಯನ್ನು ನೇಮಿಸಲಾಗುತ್ತಿತ್ತು. ನಕ್ಸಲ್‌ ನಿಗ್ರಹ ಪಡೆ ಮಲೆನಾಡಿನ ಕಾಡಂಚಿನಲ್ಲಿ ಕಾರ್ಯಾಚರಣೆಗೆ ಇಳಿದ ಮೇಲೆ ಹಲವೆಡೆ ನಕ್ಸಲರು ಮತ್ತು ಎಎನ್‌ ಎಫ್‌ ತಂಡಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಅನೇಕ ನಕ್ಸಲರು ನಕ್ಸಲ್‌ ನಿಗ್ರಹ ಪಡೆಯ ಗುಂಡೇಟಿಗೆ ಪ್ರಾಣ ಕಳೆದುಕೊಂಡಿದ್ದಾರೆ.

ಜಿಲ್ಲೆಯ ಮೆಣಸಿನಹಾಡ್ಯ ಒಡೆಯರ ಮಠದಲ್ಲಿ 2007ರ ಜು.10 ರಂದು ಓರ್ವ ನಕ್ಸಲ್‌ ಸೇರಿದಂತೆ ನಾಲ್ವರು ಎಎನ್‌ ಎಫ್‌ ತಂಡಕ್ಕೆ ಬಲಿಯಾದರು. 2008 ನ. 20 ರಂದು ಹೊರನಾಡು ಸಮೀಪದ ಮಾವಿನಹೊಲದಲ್ಲಿ ನಕ್ಸಲ್‌ ಹೊಸ ತಂಡ ರಚನೆಯಾಗಿದ್ದು, ಮೂವರು ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡರು.

ದಿನದಿಂದ ದಿನಕ್ಕೆ ನಕ್ಸಲ್‌ ನಿಗ್ರಹ ದಳದ ಕೂಬಿಂಗ್‌ ಕಾರ್ಯಾಚರಣೆ ಬಿರುಸುಗೊಳ್ಳುತ್ತಿದ್ದಂತೆ ನಕ್ಸಲ್‌ ಚಟುವಟಿಕೆ ನಿಧಾನವಾಗಿ ಕ್ಷೀಣಿಸಲು ಆರಂಭಿಸಿದ್ದು, ಮಲೆನಾಡಿನ ಕಾಡಂಚಿನಲ್ಲಿದ್ದ ನಕ್ಸಲರು ಕೇರಳದತ್ತ ಮುಖ ಮಾಡಿದರು. ಮಲೆನಾಡು ಭಾಗದಲ್ಲಿ ನಕ್ಸಲ್‌ ಚಟುವಟಿಕೆ ಕ್ಷೀಣಿಸುತ್ತಿದ್ದಂತೆ ನಕ್ಸಲ್‌ ನಿಗ್ರಹ ತಂಡದ ಸಂಖ್ಯೆಯನ್ನು ಕಡಿತಗೊಳಿಸಲು ಸರ್ಕಾರ ಚಿಂತಿಸಿದೆ. 10 ತಂಡಗಳ ಸಂಖ್ಯೆಯನ್ನು 5 ತಂಡಕ್ಕೆ ಇಳಿಸಲು ಮುಂದಾಗಿದ್ದು, ಸಿಬ್ಬಂದಿ ಮಾತೃ ಇಲಾಖೆಗೆ ಮರಳಲಾರಂಭಿಸಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.