ಸ್ಥಾಯಿ ಸಮಿತಿಗೆ ದೇವರಾಜು ಸಾರಥ್ಯ

Team Udayavani, Jul 30, 2019, 11:41 AM IST

cm-tdy-2

ಮೂಡಿಗೆರೆ: ತಾಪಂ ಸಭಾಂಗಣದಲ್ಲಿ ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎಲ್.ದೇವರಾಜು ಅವರನ್ನು ಜಿಪಂ ಹಾಗೂ ತಾಪಂ ಸದಸ್ಯರು ಅಭಿನಂದಿಸಿದರು.

ಮೂಡಿಗೆರೆ: ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಎಲ್.ದೇವರಾಜು ಸರ್ವಾನುಮತದಿಂದ ಆಯ್ಕೆಗೊಂಡರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಸುಂದರ್‌ ಕುಮಾರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ತಾಪಂ ಅಧ್ಯಕ್ಷ ಕೆ.ಸಿ.ರತನ್‌ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಪಕ್ರಿಯೆಯಲ್ಲಿ, ಬಣಕಲ್ ಹೋಬಳಿ ತ್ರಿಪುರ ತಾಪಂ ಕ್ಷೇತ್ರದ ಸದಸ್ಯ ಬಿ.ಎಲ್.ದೇವರಾಜು ಅವರನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ವೇಳೆ ತಾಪಂ ಅಧ್ಯಕ್ಷ ಕೆ.ಸಿ.ರತನ್‌ ಮಾತನಾಡಿ, ತಾಪಂ ಉಪಾಧ್ಯಕ್ಷೆಯಾಗಿದ್ದ ಸವಿತಾ ರಮೇಶ್‌, ಈ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಜು.22ರಂದು ಅಂಗೀಕಾರಗೊಂಡಿತ್ತು. ಜನರಿಂದ ನಾವು ಆರಿಸಿ ಬಂದಿದ್ದೇವೆ. ಜನರ ಕೆಲಸ ಮಾಡಬೇಕಾಗಿದ್ದು ನಮ್ಮ ಕರ್ತವ್ಯ. ತಾಲೂಕಿನಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳನ್ನು ತಾಪಂ ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸಬೇಕು. ಎಲ್ಲಾ ಸದಸ್ಯರು ಒಗ್ಗೂಡಿ ಕೆಲಸ ಮಾಡಿದ್ದರಿಂದ ಸಮಸ್ಯೆಗಳನ್ನು ತಕ್ಕಮಟ್ಟಿಗೆ ಬಗೆಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಾಪಂ ಮಾಜಿ ಉಪಾಧ್ಯಕ್ಷೆ ಸವಿತಾ ರಮೇಶ್‌, ಅಧಿಕಾರ ಶಾಶ್ವತವಲ್ಲ. ನಾವು ಅಧಿಕಾರದಲ್ಲಿದ್ದಾಗ ಏನು ಸಾಧಿಸಿದ್ದೇವೆ ಎಂಬುದು ಪ್ರಮುಖವಾಗಿರುತ್ತದೆ. ಗೃಹಿಣಿಯಾಗಿ ಮನೆಯಲ್ಲಿದ್ದ ತನ್ನನ್ನು ಬಿಜೆಪಿ ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ. ಗೆಲುವು ಪಡೆದ ನಂತರ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದೆ. ಇದಕ್ಕಾಗಿ ತಾನು ಚಿರಋಣಿಯಾಗಿರುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ತಾಪಂ ಮಾಜಿ ಉಪಾಧ್ಯಕ್ಷೆ ಸವಿತಾ ರಮೇಶ್‌, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುಂದರ್‌ ಕುಮಾರ್‌ ಹಾಗೂ ಮೂಡಿಗೆರೆಯಲ್ಲಿ ಸಹಾಯಕ ಕೃಷಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿ ಈಗ ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಯಾಗಿ ಬೆಳ್ತಂಗಡಿಗೆ ಬಡ್ತಿಗೊಂಡಿರುವ ಕುಮುದಾ ಅವರನ್ನು ಸನ್ಮಾನಿಸಲಾಯಿತು.

ನಂತರ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಬಿ.ಎಲ್.ದೇವರಾಜು ಅವರನ್ನು ಜಿಪಂ, ತಾಪಂ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಅಭಿನಂದಿಸಿದರು.

ಜಿಪಂ ಸದಸ್ಯರಾದ ಅಮಿತಾ ಮುತ್ತಪ್ಪ, ಸುಧಾ ಯೋಗೇಶ್‌, ಸದಸ್ಯರಾದ ವೀಣಾ ಉಮೇಶ್‌, ಭಾರತೀ ರವೀಂದ್ರ, ಪ್ರಮೀಳಾ, ತಾಪಂ ಕಾರ್ಯ ನಿರ್ವಹಣಾಧಿಕಾರಿ ವೆಂ.ವೆಂಕಟೇಶ್‌, ತೋಟಗಾರಿಕೆ ಇಲಾಖೆ ಸಹಾಯಕ ನಿದೇರ್ಶಕ ಅಮೀನ್‌ ಅಹಮ್ಮದ್‌, ಶಿಕ್ಷಣ ಇಲಾಖೆಯ ಗಣೇಶಪ್ಪ, ಬಿಜೆಪಿ ಮುಖಂಡರಾದ ಸುದರ್ಶನ್‌, ಪಂಚಾಕ್ಷರಿ, ಗಜೇಂದ್ರ ಕೊಟ್ಟಿಗೆಹಾರ, ಬಿ.ಎನ್‌.ಮುತ್ತಪ್ಪ, ಯೋಗೇಶ್‌ ಪೂಜಾರಿ, ಅಶ್ವತ್ಥ ಬೆಟ್ಟಗೆರೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.