Udayavni Special

ಮತದಾನ ಮಾಡಲು ಆಲಸ್ಯ ಬೇಡ: ಸತ್ಯಭಾಮಾ


Team Udayavani, May 7, 2018, 5:33 PM IST

chikk-1.jpg

ಚಿಕ್ಕಮಗಳೂರು: ಮತದಾನ ಮಾಡಲು ಆಲಸ್ಯ ಮಾಡದೇ ಇದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅರಿತು ಮತಗಟ್ಟೆಗಳ ಕಡೆ ಪ್ರತಿಯೊಬ್ಬ ಮತದಾರರು ತಮ್ಮ ಹೆಜ್ಜೆಗಳನ್ನು ಇಡಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಸಿ. ಸತ್ಯಭಾಮಾ ಹೇಳಿದರು.

ನಗರದ ನೇತಾಜಿ ಸುಭಾಷ್‌ ಚಂದ್ರಬೋಸ್‌ ಆಟದ ಮೈದಾನದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಮೂಡಿಸುವ ಬೈಕ್‌ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೇ 12 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು ಅಂದು ತಮಗೆಲ್ಲರಿಗೂ ಸಾಂವಿಧಾನಿಕವಾಗಿ ನೀಡಿರುವ ಹಕ್ಕಾದ ಮತದಾನವನ್ನು ಕರ್ತವ್ಯವೆಂದು ಭಾವಿಸಿ ಮತದಾನ ಮಾಡಬೇಕು ಎಂದರು. 

ಮತದಾನ ಪವಿತ್ರವಾದುದು. ಮತದಾರರು ಆಮಿಷಗಳಿಗೆ ಬಲಿಯಾಗಬಾರದು. ನಾಡಿನ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಕಡಿಮೆ  ತದಾನವಾಗಿರುವುದು ನಾವು ಕಾಣಬಹುದಾಗಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 78 ರಷ್ಟು ಮತದಾನವಾಗಿತ್ತು. ಗ್ರಾಮೀಣ ಭಾಗದಲ್ಲಿ ಶೇ. 85ಕ್ಕೂ ಹೆಚ್ಚು ಮತದಾನವಾದರೆ, ನಗರ ಪ್ರದೇಶದಲ್ಲಿ ಶೇ. 68ರಷ್ಟು ಮಾತ್ರ ಮತದಾನವಾಗಿತ್ತು. ಈ ಬಾರಿ ಚುನಾವಣೆಯಲ್ಲಿ ಶೇ. 95ಕ್ಕೂ ಹೆಚ್ಚು ಮತದಾನವಾಗುವ ನಿರೀಕ್ಷೆ ಇದೆ ಎಂದರು.

ಇದೇ ಸಂದರ್ಭದಲ್ಲಿ ಜಾಥಾಕ್ಕೆ ಆಗಮಿಸಿದ್ದವರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕ್ರೀಡಾ ಪಟುಗಳು ನಗರದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿಯ ಘೋಷಣೆಗಳನ್ನು ಕೂಗುವುದರೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಸಿ. ಬಸವರಾಜಯ್ಯ, ಜಿಲ್ಲಾ ಆಯುಷ್‌ ಅಧಿಕಾರಿ ಗೀತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಜುಳಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ನೆಹರು ಯುವ ಕೇಂದ್ರದ ವ್ಯವಸ್ಥಾಪಕ ಮಂಜುನಾಥ್‌ ರಾವ್‌ ಇದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Capitals-New-01

ಚೇಸಿಂಗ್ ನಲ್ಲಿ ಮುಗ್ಗರಿಸಿದ ಡೆಲ್ಲಿ ; ಸನ್ ರೈಸರ್ಸ್ ಗೆ 15 ರನ್ ಜಯ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಫ್ರೆಂಚ್‌ ಓಪನ್‌-2020; ಮುಗುರುಜಾ 3 ಗಂಟೆ ಹೋರಾಟ

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಕಾರ್ತಿಕ್‌ ಬಳಗಕ್ಕೆ ಕಾದಿದೆ ರಾಜಸ್ಥಾನ್‌ ಟೆಸ್ಟ್‌

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ

ಬೇರ್ ಸ್ಟೋ ಫಿಪ್ಟೀ ; ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ; ಡೆಲ್ಲಿಗೆ 163 ರನ್ ಟಾರ್ಗೆಟ್

ಬೇರ್ ಸ್ಟೋ ಫಿಪ್ಟೀ ; ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ; ಡೆಲ್ಲಿಗೆ 163 ರನ್ ಟಾರ್ಗೆಟ್

ಚಾಮರಾಜನಗರ: ಮಂಗಳವಾರ 99 ಕೋವಿಡ್ ಪ್ರಕರಣಗಳು ಪತ್ತೆ, ನಾಲ್ವರು ಸಾವು

ಚಾಮರಾಜನಗರ: ಮಂಗಳವಾರ 99 ಕೋವಿಡ್ ಪ್ರಕರಣಗಳು ಪತ್ತೆ, ನಾಲ್ವರು ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಬಂದ್‌ಗೆ ಉತ್ತಮ ಬೆಂ”ಬಲ’

ರಾಜ್ಯ ಬಂದ್‌ಗೆ ಉತ್ತಮ ಬೆಂ”ಬಲ’

ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ  ಕಲಿಸಿ

ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ ಕಲಿಸಿ

cm-tdy-1

ಮಲೆನಾಡಿನ ಜೀವನಾಡಿಗೆ ಮತ್ತೆ ಮರು ಜೀವ

ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?

ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ



ಹೊಸ ಸೇರ್ಪಡೆ

ಕೊಡವೇತರ ವಿವಾಹ ಕೊಡವ ಸಮಿತಿ ಮಹತ್ವದ ನಿರ್ಣಯ

ಕೊಡವೇತರ ವಿವಾಹ ಕೊಡವ ಸಮಿತಿ ಮಹತ್ವದ ನಿರ್ಣಯ

ಶಾಲೆ ಆರಂಭದ ಗೊಂದಲ ನಿವಾರಿಸಿ: ಶಾಸಕ ಖಾದರ್‌

ಶಾಲೆ ಆರಂಭದ ಗೊಂದಲ ನಿವಾರಿಸಿ: ಶಾಸಕ ಖಾದರ್‌

ಕಾರವಾರ-ಬೆಂಗಳೂರು; ರೈಲಿಗೆ ಪ್ರಯಾಣಿಕರ ಕೊರತೆ !

ಕಾರವಾರ-ಬೆಂಗಳೂರು; ರೈಲಿಗೆ ಪ್ರಯಾಣಿಕರ ಕೊರತೆ !

ಹೈದರಾಬಾದ್‌ಗೆ ಕೆಎಸ್‌ಆರ್‌ಟಿಸಿ ಸುಖಾಸೀನ ಬಸ್‌

ಹೈದರಾಬಾದ್‌ಗೆ ಕೆಎಸ್‌ಆರ್‌ಟಿಸಿ ಸುಖಾಸೀನ ಬಸ್‌

“ರೈತರ ಬೆಳೆ ಸಾಗಾಟ ವೆಚ್ಚ ತಗ್ಗಿಸಲು ನಿರಂತರ ಸೇವೆ’

“ರೈತರ ಬೆಳೆ ಸಾಗಾಟ ವೆಚ್ಚ ತಗ್ಗಿಸಲು ನಿರಂತರ ಸೇವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.