ಚುನಾವಣೆ ಬಹಿಷ್ಕಾರ: ಮನವೊಲಿಕೆ ಯತ್ನ ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ­

ಬಹಿಷ್ಕಾರ ಹಿಂಪಡೆಯಲು ಗ್ರಾಮಸ್ಥರ ನಕಾರ

Team Udayavani, Mar 26, 2021, 9:41 PM IST

ndfg

ಬಾಳೆಹೊನ್ನೂರು: ವಿವಿಧ ಮೂಲ ಸೌಕರ್ಯ ವಂಚಿತರಾದ ಬನ್ನೂರು ಗ್ರಾಪಂ ವ್ಯಾಪ್ತಿಯ ಶೆಟ್ಟಿಹಿತ್ಲು ಗ್ರಾಮಸ್ಥರು ಗ್ರಾಪಂ ಚುನಾವಣೆ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಬುಧವಾರ ಎನ್‌.ಆರ್‌. ಪುರ ತಹಶೀಲ್ದಾರ್‌ ರೇಣುಕಾ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಯತ್ನ ಮಾಡಿದರು.

ಚುನಾವಣೆ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಭೇಟಿ ನೀಡಿದ ತಹಶೀಲ್ದಾರ್‌ ಗ್ರಾಮಸ್ಥರು ಚುನಾವಣೆಯ ಬಹಿಷ್ಕಾರವನ್ನು ಹಿಂಪಡೆದು ಗ್ರಾಪಂ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಗ್ರಾಮಸ್ಥರು ತಹಶೀಲ್ದಾರ್‌ ಮನವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಳೆದ ಹಲವಾರು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಮನವಿ ಸಲ್ಲಿಸಿ, ವಿವಿಧ ಇಲಾಖೆಗಳ ಕಚೇರಿಗೆ ಅಲೆದರೂ ಇದುವರೆಗೆ ಹಕ್ಕುಪತ್ರ ಲಭಿಸಿಲ್ಲ. ಚುನಾವಣೆ ವೇಳೆ ಜನಪ್ರತಿನಿ  ಧಿಗಳು, ಅ ಧಿಕಾರಿಗಳು ಕೇವಲ ಭರವಸೆ ನೀಡಿ ತೆರಳುತ್ತಾರೆ. ನಂತರ ಇತ್ತ ಮುಖ ಮಾಡುವುದಿಲ್ಲ. ಫೆ.1ರಂದು ಆದಿವಾಸಿಗಳ ಕುಂದುಕೊರತೆ ಪರಿಶೀಲನಾ ಸಭೆಯಲ್ಲಿ ಎಲ್ಲಾ ಸಮಸ್ಯೆಗಳನ್ನು 15 ದಿನದಲ್ಲಿ ಬಗೆಹರಿಸುವುದಾಗಿ ತಿಳಿಸಿದ್ದರೂ ಸಹ ಇನ್ನೂ ಕೂಡ ಯಾವುದೂ ಬಗೆಹರಿದಿಲ್ಲ. ಈ ಬಾರಿಯ ಗ್ರಾಪಂ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವುದು ಖಚಿತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿದ ತಹಶೀಲ್ದಾರ್‌ ರೇಣುಕಾ ಇದೀಗ ಗ್ರಾಪಂ ಚುನಾವಣೆಯ ನೀತಿ ಸಂಹಿತೆ ಇರುವ ಕಾರಣ ಯಾವುದೇ ಭರವಸೆಯನ್ನೂ ನೀಡಲಾಗುವುದಿಲ್ಲ. ಚುನಾವಣೆ ಬಳಿಕ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಸಮಿತಿಯ ಜಂಟಿ ಸರ್ವೆ ನಡೆಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು. ವಿವಿಧ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ತಹಶೀಲ್ದಾರ್‌ ಭರವಸೆ ನೀಡಿದರೂ ಸಹ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಹಿಂಪಡೆಯಲು ಒಪ್ಪದಿದ್ದು, ಗ್ರಾಮಸ್ಥರು ಈ ಬಗ್ಗೆ ಸಭೆ ಸೇರಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರಾದ ಶ್ರೀಕಾಂತ್‌, ಶ್ರೀನಾಥ್‌, ರಾಮ, ಗೋವರ್ಧನ್‌, ಕೃಷ್ಣಪ್ಪ, ದೀಪಶ್ರೀ, ನಾಡಕಚೇರಿ ಉಪ ತಹಶೀಲ್ದಾರ್‌ ನಾಗೇಂದ್ರ, ಗ್ರಾಮ ಲೆಕ್ಕಿಗ ಶಿವಮೂರ್ತಿ, ಗ್ರಾಪಂ ಸಿಬ್ಬಂದಿ ರಾಜೇಶ್‌, ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಭಾಸ್ಕರ್‌ ವೆನಿಲ್ಲಾ, ಗ್ರಾಪಂ ಮಾಜಿ ಅಧ್ಯಕ್ಷ ಪ್ರಶಾಂತ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.