Chikkamagaluru: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು
Team Udayavani, Nov 27, 2023, 7:55 AM IST
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಅಭಿಷೇಕ್ (27) ಎಂದು ಗುರುತಿಸಲಾಗಿದೆ.
ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿತ್ತು. ಅದೇ ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ನ.26ರ ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ.
ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಕೂಡ ತೀವ್ರವಾದ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್