ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ
Team Udayavani, May 20, 2022, 4:06 PM IST
ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಇಂದೂ ಮುಂದುವರಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿದ್ದು, ಗಾಳಿಯ ರಭಸಕ್ಕೆ ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ನಡೆದಿದೆ.
ಸರ್ಕಾರಿ ಬಸ್ ಮೂಡಿಗೆರೆಯಿಂದ-ಚಿಕ್ಕಮಗಳೂರಿಗೆ ಸಂಚಾರ ನಡೆಸುತ್ತಿತ್ತು. ಕುದುರೆಗುಂಡಿ ಬಳಿ ಬಂದಾಗ ವಿದ್ಯುತ್ ಕಂಬ ಮುರಿದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಮುರಿದ ಕಂಬ ಬಸ್ ಮೇಲೆ ಬೀಳದೆ ಇದ್ದಿದ್ದು ಮತ್ತು ಈ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಾಹ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಇದನ್ನೂ ಓದಿ:ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ
ಬಸ್ಸಿನಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.