ಕಾಡಾನೆ ಹಾವಳಿ ತಪ್ಪಿಸಲು ತಡೆಬೇಲಿ

Team Udayavani, Mar 15, 2022, 5:08 PM IST

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ತಡೆಗೆ ತಡೆಬೇಲಿ (ಹ್ಯಾಂಗಿಂಗ್‌ ಫೆನ್ಸ್‌) ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್‌. ಇ. ಕ್ರಾಂತಿ ತಿಳಿಸಿದರು. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಿಗೆರೆ ತಾಲೂಕಿನಲ್ಲಿ 10 ಕಿ.ಮೀ. ತಡೆಬೇಲಿ ನಿರ್ಮಿಸಲಾಗುತ್ತಿದೆ. ತತ್ಕೊಳದಲ್ಲಿ 4.5 ಕಿ.ಮೀ. ತಡೆಬೇಲಿ ನಿರ್ಮಿಸಿದ್ದು, ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಕೊಪ್ಪ ತಾಲೂಕಿನ ಮೇಗೂರಿನಲ್ಲಿ 5.5 ಕಿ.ಮೀ. ತಡೆಬೇಲಿ ಕಾರ್ಯ ಪೂರ್ಣಗೊಂಡಿದೆ ಎಂದರು.

ರೈತರು ಬೆಳೆದ ಬೆಳೆ, ಕಾಡುಪ್ರಾಣಿಗಳ ಹಾವಳಿಯಿಂದ ನಿರಂತರವಾಗಿ ನಾಶವಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಗುತ್ತಿಯಿಂದ 18 ಕುಟುಂಬಗಳು, ಬಿದಿರುತಳದಿಂದ 6 ಕುಟುಂಬಗಳು, ಮಸಗಲಿಯಿಂದ ಮೂರು ಕುಟುಂಬಗಳು ತಾವು ನೆಲೆಸಿರುವ ಕಂದಾಯ ಭೂಮಿಯಿಂದ ಸ್ವಯಂಪ್ರೇರಿತವಾಗಿ ಹೊರಬರಲು ನಿರ್ಧರಿಸಿದ್ದಾರೆ. ಸ್ವಯಂಪ್ರೇರಿತವಾಗಿ ಹೊರ ಬರುವವರಿಗೆ ಪರಿಹಾರ ನೀಡುವ ಸಂಬಂಧ ರಾಜ್ಯಕ್ಕೆ ಅನ್ವಯವಾಗುವ ಯೋಜನೆ ರೂಪಿಸಬೇಕಿದೆ. ಸಮಿತಿ ರಚನೆಯಾಗಬೇಕಿದೆ ಎಂದು ಹೇಳಿದರು.

ಕಾಡಿಗೆ ಬೆಂಕಿ ಬೀಳುವುದನ್ನು ತಡೆಗಟ್ಟಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬೆಂಕಿರೇಖೆಗಳನ್ನು ರಚಿಸಲಾಗಿದೆ. ಸಿಬ್ಬಂದಿಗಳನ್ನು ನೇಮಿಸಿ ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ. ಕಾಡಿಗೆ ಬೆಂಕಿ ಬಿದ್ದಿರುವುದನ್ನು ಗಮನಿಸಲು ಡ್ರೋಣ್‌ ಕ್ಯಾಮೆರಾ ಮತ್ತು ಬೈನಾಕ್ಯುಲರ್‌ ಬಳಸಲಾಗುತ್ತಿದೆ ಎಂದರು. ಚಿಕ್ಕಮಗಳೂರು, ಕಡೂರು ಮತ್ತು ಮೂಡಿಗೆರೆ ವಲಯಗಳಲ್ಲಿ ಬೆಂಕಿ ಬೀಳುವ 10 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಚಿಕ್ಕಮಗಳೂರಿನಲ್ಲಿ 3, ಕಡೂರಿನಲ್ಲಿ 3 ಹಾಗೂ ಮೂಡಿಗೆರೆ 1 ವಲಯವನ್ನು ಗುರುತಿಸಲಾಗಿದೆ. ಅರಣ್ಯ ಪ್ರದೇಶಕ್ಕೆ ಬೆಂಕಿ ಬೀಳುವುದನ್ನು ತಡೆಯಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕಾಡಿಗೆ ಸ್ವಾಭಾವಿಕವಾಗಿ ಬೆಂಕಿ ಬೀಳುವ ಸಾಧ್ಯತೆ ಕಡಿಮೆ ಇದ್ದು, ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಇತ್ತೀಚೆಗೆ ಸಿಂದಿಗೆರೆಯಲ್ಲಿ ಕಾಡಿಗೆ ಬೆಂಕಿ ಹಚ್ಚಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇತ್ತೀಚೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿ, ಸಿಂದಿಗೆರೆ ಮತ್ತು ಬಾಳೂರು ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಕಾಡಿಗೆ ಬೆಂಕಿ ಹಚ್ಚದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಮಸಗಲಿ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 185 ಕುಟುಂಬಗಳಲ್ಲಿ 109 ಕುಟುಂಬಗಳು ಬೇರೆಡೆ ಮನೆ ಮತ್ತು ಜಮೀನು ಹೊಂದಿದ್ದಾರೆ. ನಿವೇಶನ ರಹಿತ 39 ಕುಟುಂಬಗಳಿಗೆ ನಗರದ ಇಂದಾವರ ಗ್ರಾಮದಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ – ಎನ್‌.ಇ. ಕ್ರಾಂತಿ ಉಪ ಅರಣ್ಯ ಸಂರಕ್ಷಣಾಧಿಕಾರಿ

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.