ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ
Team Udayavani, Nov 25, 2020, 3:46 PM IST
ಚಿಕ್ಕಮಗಳೂರು: ಬೀಗರ ಊಟಕ್ಕೆ ಆಗಮಿಸಿ ಕೆರೆಗೆ ಈಜಲು ಹೋದ ಐವರು ಯುವಕರು ನೀರುಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಬುಧವಾರ ನಡೆದಿದೆ. ಓರ್ವನ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರು ನಾಪತ್ತೆಯಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕು ವಸ್ತಾರೆಯ ಹಿರೇಕೆರೆಯಲ್ಲಿ ಈ ಘಟನೆ ನಡೆದಿದ್ದು ಐವರು ಯುವಕರಲ್ಲಿ ಇಬ್ಬರು ಸ್ಥಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ.
ರಘು (22), ದಿಲೀಪ್ (24), ಸಂದೀಪ್ (23), ದೀಪಕ್ (25) ಸುದೀಪ್ (22) ನೀರುಪಾಲಾದ ಯುವಕರು. ಇವರಲ್ಲಿ ಸಂದೀಪ್ ಎಂಬಾತನ ಮೃತದೇಹ ಪತ್ತೆಯಾಗಿದ್ದು, ನಾಲ್ವರ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ
ಮೂವರು ವಸ್ತಾರೆ ಗ್ರಾಮದಲ್ಲಿ ಬೀಗರ ಊಟಕ್ಕೆಂದು ಬಂದಿದ್ದರು. ನಂತರ ಸ್ಥಳೀಯರೊಂದಿಗೆ ಹಿರೇಕೆರೆಗೆ ಈಜಲು ತೆರಳಿದ್ದರು.
ಸ್ಥಳದಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸುತ್ತಿದ್ದು ಬೋಟ್ ಬಳಸಿ ನಾಪತ್ತೆಯಾದವರಿಗಾಗಿ ಶೋಧ ನಡೆಯುತ್ತಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ