ಗ್ರಾಪಂ ಚುನಾವಣೆ: 137 ನಾಮಪತ್ರ
Team Udayavani, Dec 9, 2020, 4:07 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಗ್ರಾಪಂ ಚುನಾವಣೆ ನಾಮಪತ್ರ ಸಲ್ಲಿಕೆ ಸೋಮವಾರದಿಂದ ಆರಂಭವಾಗಿದ್ದು, ಮಂಗಳವಾರ ಜಿಲ್ಲೆಯಲ್ಲಿ 137 ನಾಮಪತ್ರ ಸಲ್ಲಿಕೆಯಾಗಿದೆ.
ಅಜ್ಜಂಪುರ ತಾಲೂಕಿನಲ್ಲಿ 2, ಚಿಕ್ಕಮಗಳೂರು ತಾಲೂಕಿನಲ್ಲಿ 53, ಕಡೂರು ತಾಲೂಕಿನಲ್ಲಿ 28, ಕೊಪ್ಪ ತಾಲೂಕಿನಲ್ಲಿ 17, ಮೂಡಿಗೆರೆ ತಾಲೂಕಿನಲ್ಲಿ 19, ನರಸಿಂಹರಾಜಪುರ ತಾಲೂಕಿನಲ್ಲಿ 2, ಶೃಂಗೇರಿ ತಾಲೂಕಿನಲ್ಲಿ 3 ಹಾಗೂ ತರೀಕೆರೆ ತಾಲೂಕಿನಲ್ಲಿ 13 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆ ಮೊದಲ ದಿನ ನರಸಿಂಹರಾಜಪುರ ತಾಲೂಕಿನಲ್ಲಿ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿರಲಿಲ್ಲ, ಮಂಗಳವಾರ ತಾಲೂಕಿನಲ್ಲಿ 2 ನಾಮಪತ್ರ ಸಲ್ಲಿಕೆಯಾಗಿವೆ. ಸೋಮವಾರ ಮತ್ತು ಮಂಗಳವಾರ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 273 ನಾಮಪತ್ರ ಸಲ್ಲಿಕೆಯಾಗಿವೆ.
ತರೀಕೆರೆ: 13 ನಾಮಪತ್ರ ಸಲ್ಲಿಕೆ :
ತರೀಕೆರೆ: 25 ಗ್ರಾಪಂಗಳಿಗೆ ನಡೆಯುತ್ತಿರುವ ಚುನಾವಣೆಯ ಎರಡನೇ ದಿನವಾದ ಮಂಗಳವಾರ 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಲಕ್ಕವಳ್ಳಿ 2, ಮುಡಗೋಡು 1, ಮಳಲಿ ಚೆನ್ನೇನಹಳ್ಳಿ 2, ದೋರನಾಳು 2, ಬೆಟ್ಟದಹಳ್ಳಿ 3, ಲಿಂಗದಹಳ್ಳಿ, ಹಾದಿಕೆರೆ ಮತ್ತು ಅಮೃತಾಪುರ ಗ್ರಾಪಂಗಳಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸೋಮವಾರ 18 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಡಿ. 11 ಕೊನೆಯ ದಿನವಾಗಿದೆ. 273 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅವ ಧಿ ಮುಗಿಯದ ಹಿನ್ನಲೆಯಲ್ಲಿ ಕೆಂಚಿಕೊಪ್ಪ ಗ್ರಾಪಂ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾಧಿಕಾರಿ ಸಿ.ಜಿ. ಗೀತಾ ತಿಳಿಸಿದ್ದಾರೆ.
ಶೃಂಗೇರಿ: 3 ನಾಮಪತ್ರ :
ಶೃಂಗೇರಿ: ಎರಡನೇ ದಿನ ಗ್ರಾಪಂ ಚುನಾವಣೆಗೆ ತಾಲೂಕಿನಲ್ಲಿ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೆಣಸೆ ಗ್ರಾಪಂ 2, ವಿದ್ಯಾರಣ್ಯಪುರ ಗ್ರಾಪಂ 1 ನಾಮಪತ್ರ ಸಲ್ಲಿಕೆಯಾಗಿದೆ. ತಾಲೂಕಿನಲ್ಲಿ ಇದುವರೆಗೆ 5 ನಾಮಪತ್ರ ಸಲ್ಲಿಕೆಯಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಮಂಗಳೂರು ಪೊಲೀಸರ ಭರ್ಜರಿ ಬೇಟೆ: 44 ಕೆಜಿ ಗಾಂಜಾ ವಶ, ಏಳು ಆರೋಪಿಗಳ ಬಂಧನ
ಹೊಸ ಸೇರ್ಪಡೆ
ನೂರು ಕಡೆಗಳಲ್ಲಿ ಇನ್ಸ್ಪೆಕ್ಟರ್ ವಿಕ್ರಂ ಕಟೌಟ್ಸ್
ಜ.27 ಕ್ಕೆ ಶ್ರೀಲಂಕಾ ತಲುಪಲಿದೆ ಭಾರತದ ಕೋವಿಡ್ ಲಸಿಕೆ
ಈ ಬಾರಿ ಸರಳ ಗಣರಾಜ್ಯೋತ್ಸವ ಆಚರಣೆ: ಮಾಣೆಕ್ ಶಾ ಮೈದಾನಕ್ಕೆ ಸಾರ್ವಜನಿಕ ಪ್ರವೇಶವಿಲ್ಲ
ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು: ಬಿಎಸ್ ವೈ
ಟ್ರೇಲರ್ನಲ್ಲಿ ‘ರಾಮಾರ್ಜುನ’ ಝಲಕ್: ಜ.29ಕ್ಕೆ ಥಿಯೇಟರ್ನಲ್ಲಿ ದರ್ಶನ