ದತ್ತಭಕ್ತರಿಂದ ಬೃಹತ್‌ ಶೋಭಾಯಾತ್ರೆ

Team Udayavani, Dec 22, 2018, 4:58 PM IST

chikk.jpg

ಚಿಕ್ಕಮಗಳೂರು: ದತ್ತಜಯಂತಿ ಉತ್ಸವದ ಅಂಗವಾಗಿ ನಗರದಲ್ಲಿ ಶುಕ್ರವಾರ ಗುರು ದತ್ತಾತ್ರೇಯರ ವಿಗ್ರಹದೊಂದಿಗೆ ದತ್ತಮಾಲಾಧಾರಿಗಳ ಬೃಹತ್‌ ಶೋಭಾಯಾತ್ರೆ ನಡೆಯಿತು.

ನಗರದ ಕಾಮಧೇನು ಗಣಪತಿ ದೇವಾಲಯದಿಂದ ಆರಂಭವಾದ ಶೋಭಾಯಾತ್ರೆಗೆ ಶಾಸಕ ಸಿ.ಟಿ. ರವಿ, ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್‌, ಭಜರಂಗದಳ ಜಿಲ್ಲಾ ಸಂಚಾಲಕ ತುಡಕೂರು ಮಂಜು ಚಾಲನೆ ನೀಡಿದರು. ಬಳಿಕ ಕೆಇಬಿ ವೃತ್ತದ ಮೂಲಕ ಮೆರವಣಿಗೆಯಲ್ಲಿ ತೆರಳಿದ ಮಾಲಾಧಾರಿಗಳು ಬಸವನಹಳ್ಳಿ ಮುಖ್ಯ ರಸ್ತೆಯಿಂದ ಹನುಮಂತಪ್ಪ ವೃತ್ತಕ್ಕೆ ಆಗಮಿಸಿದರು. 

ಶೋಭಾಯಾತ್ರೆ ಸಂಚರಿಸಿದ ಮಾರ್ಗದ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ನಿಂತು ಮೆರವಣಿಗೆಯನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದರು. ಸಾಕಷ್ಟು ಜನ ಕಟ್ಟಡಗಳ ಮೇಲೆ ನಿಂತು ಶೋಭಾಯಾತ್ರೆ ವೀಕ್ಷಿಸಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದರು.

ಚಂಡೆ, ವೀರಭದ್ರ ಕುಣಿತ, ಡೊಳ್ಳುಕುಣಿತ, ಕೀಲು ಕುದುರೆ, ವಿವಿಧವಾದ್ಯಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದ್ದವು. ಗ್ರಾಮೀಣ ಪ್ರದೇಶದ ದೇವರ ಅಡ್ಡೆಗಳನ್ನು ಹೊತ್ತು ಸಾಗಿದ್ದು ಈ ಬಾರಿಯ ವಿಶೇಷವಾಗಿತ್ತು. ವಾದ್ಯಗೋಷ್ಠಿಗೆ ತಕ್ಕಂತೆ ಮಾಲಾಧಾರಿಗಳು ನೃತ್ಯ ಮಾಡಿದರು. ಮತ್ತೆ ಕೆಲವು ಯುವಕರು ಬೃಹದಾಕಾರದ ಕೇಸರಿ ಧ್ವಜ ಮತ್ತು ಭಗವಾಧ್ವಜಗಳನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಮಹಿಳೆಯರ ಕುಣಿತ: ಕೇವಲ ಯುವಕರು ಮಾತ್ರವಲ್ಲದೆ ಈ ಬಾರಿ ಮಹಿಳೆಯರೂ ಸಹ ಹಿಂದೂ ಪರ ಘೋಷಣೆ ಕೂಗಿ, ಭಜನೆ ಮಾಡುತ್ತ ಕುಣಿದರು. ಪಲ್ಲವಿ ಸಿ.ಟಿ.ರವಿ, ನಗರಸಭಾ ಸದಸ್ಯರಾದ ಕವಿತಾಶೇಖರ್‌, ವನಿತಾ, ವೀಣಾ ಶೆಟ್ಟಿ ಇತರರು ಘೋಷಣೆ ಕೂಗಿ ಕುಣಿಯುತ್ತಿದ್ದರು. ಸಂಘಟನೆಗಳ ಮುಖಂಡರು, ಶೋಭಾಯಾತ್ರೆಯಲ್ಲಿ ಆಗಮಿಸಿದ ಮಾಲಾಧಾರಿಗಳು ಸರತಿ ಸಾಲನ್ನು ಬಿಟ್ಟು ಹೋಗದಂತೆ ತಡೆಯುತ್ತಿದ್ದರು.

ರಸ್ತೆಯಲ್ಲಿ ಕುಳಿತು ಭಜನೆ : ಶೋಭಾಯಾತ್ರೆ ಬಸವನಹಳ್ಳಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದಾಗ ಗಣಪತಿ ದೇವಾಲಯದ ಮುಂಭಾಗದಲ್ಲಿ ಭಜರಂಗದಳ ಜಿಲ್ಲಾ ಸಂಚಾಲಕ ತುಡಕೂರು ಮಂಜು ಹಾಗೂ ಇತರ ದತ್ತಮಾಲಾದಾರಿಗಳು ರಸ್ತೆಯ ಮೇಲೆ ಕುಳಿತು ಹಿಂದೂಪರ ಘೋಷಣೆ ಕೂಗಲಾರಂಭಿಸಿದರು. ಆಗ ಸ್ಥಳಕ್ಕೆ ಆಗಮಿಸಿದ ಶಾಸಕ ಸಿ.ಟಿ.ರವಿ ಸಹ ಅವರುಗಳೊಂದಿಗೆ ರಸ್ತೆಯ ಮೇಲೆ
ಕುಳಿತು ಹಿಂದೂ ಪರ ಘೋಷಣೆಗಳನ್ನು ಕೂಗಿದರಲ್ಲದೆ, ಕೆಲಕಾಲ ಅಲ್ಲಿಯೇ ಕುಳಿತು ಭಜನೆ ಮಾಡಿದರು.

ಶೋಭಾಯಾತ್ರೆಯಲ್ಲಿ ಶಾಸಕ ಸಿ.ಟಿ.ರವಿ, ಸಂಸದೆ ಶೋಭಕರಂದ್ಲಾಜೆ, ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌.ಜೀವರಾಜ್‌, ಬಜರಂಗದಳ ದಕ್ಷಿಣ ಪ್ರಾಂಥ ಸಹ ಸಂಚಾಲಕ ರಘು ಸಕಲೇಶಪುರ, ಜಿಲ್ಲಾ ಸಂಚಾಲಕ ತುಡಕೂರು ಮಂಜು, ವಿಶ್ವಹಿಂದೂ ಪರಿಷತ್‌ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್‌, ಮುಖಂಡರುಗಳಾದ ಯೋಗೀಶ್‌ರಾಜ್‌ಅರಸ್‌, ರಾಜಪ್ಪ, ಪ್ರೇಮ್‌ಕಿರಣ್‌ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.