ಶಿಕ್ಷಣ ಸಚಿವರು-ಕಾರ್ಯದರ್ಶಿ ವಜಾಕ್ಕೆ ಒತ್ತಾಯ

Team Udayavani, Nov 26, 2019, 12:12 PM IST

cm-tdy-2

ಶೃಂಗೇರಿ: ದಲಿತರ ಮೇಲೆ ದೌರ್ಜನ್ಯ ಎಸಗಿ, ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಶಿಕ್ಷಣ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್‌ ಹಾಗೂ ಕೆ.ಎಸ್‌.ಮಣಿ ಅವರನ್ನು ಅಮಾನತು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕಿ ಸುಮಾ ಆಗ್ರಹಿಸಿದರು.

ಅಂಬೇಡ್ಕರ್‌ ಮಾತ್ರ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ತಾಲೂಕು ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ದಲಿತ ವಿರೋಧಿ ಬಿಜೆಪಿ ಸರ್ಕಾರದ ಶಿಕ್ಷಣ ಮಂತ್ರಿ ಸುರೇಶ್‌ಕುಮಾರ್‌ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು. ದಸಂಸ ಜಿಲ್ಲಾ ಸಂಚಾಲಕ ಕೆ.ಪಿ.ರಾಜರತ್ನಂ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷ ಕಳೆದರೂ ದಲಿತರ ಮೇಲೆ ದೌರ್ಜನ್ಯ, ದಬ್ಟಾಳಿಕೆ ಮುಂದುವರೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದಿರುವುದು ಬಂಡವಾಳಶಾಹಿ ಬಿಜೆಪಿ ಸರಕಾರ ಆರೆಸೆಸ್ಸ್ ನವರನ್ನು ಮೆಚ್ಚಿಸುವ ಕುತಂತ್ರದಿಂದ ಅಪಚಾರವೆಸಗಿ ದಲಿತರ ಭಾವನೆ ಧಕ್ಕೆ ತಂದಿದೆ ಎಂದರು.

ದೇಶದ 333 ಬ್ಯಾಂಕುಗಳನ್ನು ರಾಷ್ಟ್ರೀಕೃತ ಮಾಡಿದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಎಲ್ಲರಿಗೂ ಸಮಬಾಳು, ಸಮಾನ ಅವಕಾಶ, ಉದ್ಯೋಗ ಮತ್ತು ವಸತಿ ನೀಡುತ್ತೇವೆ ಎಂದು ಹೇಳಿ ಅಧಿ ಕಾರಕ್ಕೆ ಬಂದು ವಿಫಲರಾಗಿದ್ದಾರೆ. ಇತ್ತೀಚೆಗೆ ಎನ್‌ ಆರ್‌ಸಿಇ ಗುಪ್ತ ಕಾರ್ಯಸೂಚಿಯಾಗಿದೆ. ಬಿಎಸ್‌ಎನ್‌ಎಲ್‌ ಸಂಸ್ಥೆ ಈಗಾಗಲೇ ದಿವಾಳಿಯಾಗಿರುವುದು ಇವರ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ.ಆರೆಸೆಸ್ಸ್ ಬೇರೆ ಬೇರೆ ರಾಜ್ಯದಲ್ಲಿ ಅಧಿಕಾರಿಗಳನ್ನು ಹೊಡೆದು ಸಾಯಿಸುತ್ತಿದ್ದಾರೆ. ಇದು ರಾಜ್ಯಕ್ಕೂ ಬರಲಿದೆ. ಚುನಾವಣೆಯಲ್ಲಿ ಇವಿಎಂನಿಂದ ವಂಚಿಸಲಾಗುತ್ತಿದೆ. ಹಳೇ ಮಾದರಿಯಲ್ಲಿ ಚುನಾವಣೆ ನಡೆಸಬೇಕು. ತಾನು ಹೇಳಿದಂತೆ ಕೇಳುವ ಹೆಬ್ಬೆಟ್ಟು ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿ ಜನರಿಗೆ ವಂಚಿಸಿದ್ದಾರೆ ಎಂದರು.

ತಾಲೂಕು ಸಂಚಾಲಕಿ ಚಂದ್ರಾವತಿ ಮಾತನಾಡಿ, ಬೆಟ್ಟಗೆರೆ ಗ್ರಾಮದ ಶುಂಠಿಹಕ್ಲು ದಲಿತ ಕಾಲೋನಿ ನಿವಾಸಿಗಳಿಗೆ ಸ.ನಂ. 180 ರಲ್ಲಿ ಎರಡು ಎಕರೆ ಭೂಮಿಯನ್ನು ಮನೆ ನಿರ್ಮಿಸಲು ಲೇಔಟ್‌ ವ್ಯವಸ್ಥೆ ಮಾಡಬೇಕು. ಎಲ್ಲಾ ಬಡಜನರಿಗೆ ಅಂಬೇಡ್ಕರ್‌, ಬಸವ, ವಸತಿ, ಆಶ್ರಯಮನೆ ಪಡೆದ ಫಲಾನುಭವಿಗಳಿಗೆ ಹಂತ ಹಂತವಾಗಿ ಮಾಡಿದ ಕೆಲಸಗಳಿಗೆ ಹಣ ಬಿಡುಗಡೆ ಮಾಡಬೇಕು. ತಾಲೂಕಿನಲ್ಲಿ ಫಾರಂ ನಂ.50,53,5 ಹಾಗೂ 94 ಸಿ ಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕೆಂದರು. ಮನವಿ ಪತ್ರ ಕಂದಾಯ ಇಲಾಖಾ ಅಧಿಕಾರಿ ಪ್ರವೀಣ್‌ ಅವರಿಗೆ ಸಲ್ಲಿಸಲಾಯಿತು. ಸಮಿತಿಯ ಶ್ರೀನಿವಾಸ, ಮಂಜಪ್ಪ, ಗೋಪಾಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.