ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗಾ ವಹಿಸಲು ಸೂಚನೆ
Team Udayavani, Jul 10, 2021, 10:19 AM IST
ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ನಗರದ ಜಿಪಂ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೇಂದ್ರದಲ್ಲಿ ಮೂಲ ಸೌಲಭ್ಯವನ್ನು
ವ್ಯವಸ್ಥಿತವಾಗಿ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ತೆರಳುವ ಮಾರ್ಗನಕ್ಷೆ ಸಿದ್ಧಪಡಿಸಬೇಕು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರತೀ ಶೈಕ್ಷಣಿಕ ಬ್ಲಾಕ್‌ಗೆ ಒಂದೊಂದು ಆ್ಯಂಬುಲೆನ್ಸ್‌ಗಳನ್ನು ಮೀಸಲಿಡಬೇಕು ಎಂದು ಆರೋಗ್ಯ ಇಲಾಖೆ ಅಧಿ ಕಾರಿಗಳಿಗೆ ತಿಳಿಸಿದರು.
ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಎನ್-95 ಮಾಸ್ಕ್ ಮತ್ತು ಸ್ಯಾನಿಟೈಸರ್, ಪ್ರಥಮ ಚಿಕಿತ್ಸಾ ವ್ಯವಸ್ಥೆ ಸಿದ್ಧಪಡಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ನಿಗದಿತ ಸಮಯಕ್ಕೆ ಹಾಜರಾಗಬೇಕು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿರುವ ಪರೀûಾ ಕೇಂದ್ರಗಳಲ್ಲಿ ಹೆಚ್ಚಿನ ಆರೋಗ್ಯ ಕೌಂಟರ್‌ಗಳನ್ನು ತೆರೆಯುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಲ್ಲಿ ಕರ್ತವ್ಯ ನಿರ್ವಹಿಸುವನಿಬ್ಬಂದಿಗಳಿಗೆ ಕೋವಿಡ್ ವ್ಯಾಕ್ಸಿನ್ ನೀಡಿರುವಬಗ್ಗೆ ಮಾಹಿತಿ ಸಂಗ್ರಹಿಸಿ. ಯಾರು ವ್ಯಾಕ್ಸಿನ್ ಪಡೆದುಕೊಂಡಿಲ್ಲ ಅವರಿಗೆ ತುರ್ತು ವ್ಯಾಕ್ಸಿನ್ ನೀಡಲು ಮುಂದಾಗಬೇಕು ಎಂದು ಹೇಳಿದರು.
ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ದಿನಕ್ಕೂ ಮೊದಲು ಪರೀûಾ ಬರೆಯುವ ಕೊಠಡಿ ವಿವರಗಳನ್ನು ನೀಡಬೇಕು ಮತ್ತು ವ್ಯವಸ್ಥೆಯನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಎಲ್ಲಾ ಸಿಬ್ಬಂದಿಗಳಿಗೂ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಮತ್ತು ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ಮಾಹಿತಿ ರವಾನಿಸಬೇಕು. ಪರೀಕ್ಷಾ ಕರ್ತವ್ಯದಲ್ಲಿ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಪರೀಕ್ಷಾ ದಿನ ಮಾರ್ಗದ ಎಲ್ಲಾ ಬಸ್‌ಗಳನ್ನು ಚಲಿಸುವಂತೆ ನೋಡಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ತಿಳಿಸಿದರು. ಯಾವ ಮಾರ್ಗಕ್ಕೆ ಸಾರಿಗೆ ವ್ಯವಸ್ಥೆಯ ಅಗತ್ಯವಿದೆ ಎಂಬುದರ ಬಗ್ಗೆ ಕ್ರಿಯಾಯೋಜನೆ ರೂಪಿಸಿ ಸಾರಿಗೆ ಘಟಕಕ್ಕೆ ತುರ್ತಾಗಿ ಸಲ್ಲಿಸಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಎಚ್. ಮಾತನಾಡಿ, ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ತಾಲೂಕು ಉಪ ಖಜಾನೆಗೆ ಸಾಗಿಸಲು ಮತ್ತು ಉಪ ಖಜಾನೆಯಿಂದ ಪರೀûಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲು ಹಾಗೂ ಪರೀಕ್ಷಾ ಕೇಂದ್ರದಲ್ಲಿ ಶಿಸ್ತು ಪಾಲನೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ ಮಾತನಾಡಿ, ಪರೀಕ್ಷಾ ಕಾರ್ಯಕ್ಕೆ ಕೊಠಡಿಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ ಹಾಗೂ ವಿಶೇಷ ಕೊಠಡಿಗೂ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಡೆಸ್ಕಿಗೆ ಒಬ್ಬರಂತೆ ಮತ್ತು 6 ಅಡಿ ಅಂತರದಂತೆ ಆಸನ ವ್ಯವಸ್ಥೆ ಇರುವಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಸರ್ಜನ್ ಮೋಹನ್‌ಕುಮಾರ್,ಜಿಲ್ಲಾ ಆರೋಗ್ಯಾಧಿಕಾರಿ ಡಾ| ಉಮೇಶ್, ಜಿಪಂ ಉಪ ಕಾರ್ಯದರ್ಶಿ ನಾಗರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳ್ಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದು-ಡಿಕೆಶಿಗೆ ನಿದ್ದೆಯಲ್ಲೂ ಸೋಲಿನ ಭೀತಿ: ಸಚಿವ ಆರ್.ಅಶೋಕ್
ಆಲ್ದೂರು: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ… ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಮೊಬೈಲ್ನಲ್ಲೇ ಸಿಗಲಿದೆ ಕಂದಾಯ ದಾಖಲೆ ಪತ್ರ: ಸಚಿವ ಆರ್. ಅಶೋಕ್ ಭರವಸೆ
ಸೂಕ್ತ ದಾಖಲೆ ಕೊಟ್ಟರೆ ಅಧಿಕಾರಿಗಳು ಜೈಲಿಗೆ : ಚಿಕ್ಕಮಗಳೂರಿನಲ್ಲಿ ಆರ್.ಅಶೋಕ್