ಸಿದ್ಧಗಂಗಾ ಶ್ರೀಗಳ ಆದರ್ಶ ಪಾಲಿಸೋಣ: ಶಾಸಕ ಬೆಳ್ಳಿ ಪ್ರಕಾಶ್‌

Team Udayavani, Feb 5, 2020, 5:32 PM IST

5-Febrauary-27

ಕಡೂರು: ಸಿದ್ಧಗಂಗಾ ಕ್ಷೇತ್ರದ ಡಾ| ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣ, ಅನ್ನ, ವಸತಿ ನೀಡುವ ಮೂಲಕ ತ್ರಿವಿಧ ದಾಸೋಹಿ ಎಂದೇ ಪ್ರಸಿದ್ಧರಾಗಿದ್ದರು. ಶ್ರೀಗಳ ಇಂತಹ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್‌ ಹೇಳಿದರು.

ಪಟ್ಟಣದ ಎಪಿಎಂಸಿಯ ಶ್ರೀ ವಿನಾಯಕ ಸಗಟು ಮತ್ತು ಚಿಲ್ಲರೆ ತರಕಾರಿ ವರ್ತಕರ ಸಂಘ ವಾರದ ಸಂತೆಯ ದಿನವಾದ ಸೋಮವಾರ ಏರ್ಪಡಿಸಿದ್ದ ಸಿದ್ದಗಂಗಾ ಶ್ರೀಗಳ ಮೊದಲನೇ ವರ್ಷದ ಪುಣ್ಯಸ್ಮರಣೆ ಹಾಗೂ ಅನ್ನದಾಸೋಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ನಾಡಿನ ಲಕ್ಷಾಂತರ ಬಡವ, ದೀನ, ದಲಿತರ ಮಕ್ಕಳಿಗೆ ಅನ್ನ, ವಿದ್ಯೆ ನೀಡುವುದರ ಮೂಲಕ ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸಿದ ಶಿಲ್ಪಿ ಸಿದ್ಧಗಂಗಾ ಶ್ರೀಗಳು. ಇಂತಹ ಪರಮ ಪೂಜ್ಯರ ಸ್ಮರಣೆ ಕಾರ್ಯಕ್ರಮವನ್ನು ಯಾವುದೇ ಜಾತಿ, ಮತ ಭೇದವಿಲ್ಲದೆ ಸರ್ವರೂ ಒಂದೇ ಎಂಬ ಭಾವನೆಯಿಂದ ಏರ್ಪಡಿಸಿದ್ದು ಶ್ಲಾಘನೀಯ. ಎಪಿಎಂಸಿಯ ಚಿಲ್ಲರೆ ತರಕಾರಿ ವರ್ತಕರು ಸೇರಿ ಸಾವಿರಾರು ಜನರಿಗೆ ಅನ್ನದಾಸೋಹ ನೀಡುವುದರ ಮೂಲಕ ಸಿದ್ಧಗಂಗಾ ಶ್ರೀಗಳನ್ನು ಸ್ಮರಣೆ ಮಾಡಿರುವುದು ನಿಜಕ್ಕೂ ಸಂತಸ ತಂದಿದೆ ಎಂದರು.

ಪಟ್ಟಣದ ಅರಿವಿನ ಮನೆ ಸೌಹಾರ್ದ ಸಹಕಾರ ನಿಯಮಿತದ ಆಡಳಿತ ಮಂಡಳಿ ಸಹ ಇತ್ತೀಚೆಗೆ ಶ್ರೀಗಳ ಪುಣ್ಯಸ್ಮರಣೆ ಮಾಡಿ ಅನ್ನದಾಸೋಹ ನಡೆಸಿರುವುದು ಜನರಲ್ಲಿ ಗುರು, ಹಿರಿಯರ ಬಗ್ಗೆ ಭಕ್ತಿ ನೆಲೆಸಿದೆ ಎಂಬುದನ್ನು ತಿಳಿಸುತ್ತದೆ. ಇಂತಹ ಮಹಾ ಪುರುಷರ ಆದರ್ಶಗಳು ಮತ್ತು ದಾಸೋಹದ ಗುಣವನ್ನು ಪ್ರತಿಯೊಂದು ಗ್ರಾಮ ಮತ್ತು ಜನಾಂಗ ತಮ್ಮ ಹಿರಿಯರ, ಗುರುಗಳ ಸ್ಮರಣೆ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಕಡೂರು ಎಪಿಎಂಸಿ ಅಧ್ಯಕ್ಷ ಶಿವಕುಮಾರ್‌ ಮಾತನಾಡಿ, ಸಿದ್ಧಗಂಗಾ ಶ್ರೀಗಳ ದಾಸೋಹ ಪರಿಕಲ್ಪನೆ ನಿಜಕ್ಕೂ ಅದ್ಭುತವಾದದ್ದು. ಹಸಿದು ಬಂದವರಿಗೆ ಅನ್ನ ನೀಡಿದ ಮಹಾತ್ಮರು. ಇಂತಹ ಮಹಾತ್ಮರು ನಮ್ಮ ನಾಡಿನಲ್ಲಿ ಇರುವುದೇ ನಮ್ಮೆಲ್ಲರ ಪುಣ್ಯ. ಅವರ ಆದರ್ಶ, ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಅವರಿಗೆ ನಾವು ನೀಡುವ ಗುರು ಕಾಣಿಕೆಯಾಗಲಿದೆ ಎಂದರು.

ಶ್ರೀ ವಿನಾಯಕ ಸಗಟು ಮತ್ತು ಚಿಲ್ಲರೆ ತರಕಾರಿ ವರ್ತಕರ ಸಂಘದ 37 ಸದಸ್ಯರು ಸೇರಿ ನಡೆಸಿದ ಪುಣ್ಯಸ್ಮರಣೆ ಮತ್ತು ಅನ್ನದಾಸೋಹದಲ್ಲಿ ಸಾವಿರಾರು ಜನರಿಗೆ ಪ್ರಸಾದ ನೀಡಲಾಯಿತು. ಸಂಘದ ಮುಖಂಡರಾದ ಓಂಕಾರಮೂರ್ತಿ, ಸಿದ್ದೇಶ್‌, ಮಂಜುನಾಥ್‌, ರಮೇಶ್‌, ಸತೀಶ್‌, ರಘು, ಮಹಾಂತೇಶ್‌, ಆಸೀಫ್‌, ಅಕ್ರಂ ಭಾಷಾ, ದೇವರಾಜು, ರಾಜಪ್ಪ, ಜಯಕುಮಾರ್‌, ಲಿಂಗರಾಜು, ಚಂದ್ರು, ಮೇಣಪ್ಪ ಇತರರಿದ್ದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.