ಕಡೂರು ಸಾರ್ವಜನಿಕ ಆಸ್ಪತ್ರೆಗೆ ಸಂಸದ ಪ್ರಜ್ವಲ್‌ ರೇವಣ್ಣ ಭೇಟಿ

ಕೊರೊನಾ ಚಿಕಿತ್ಸೆಗಾಗಿ ಸಿದ್ಧಪಡಿಸಿರುವ ಐಸೋಲೇಷನ್‌ ವಾರ್ಡ್‌ ಪರಿಶೀಲನೆ | ಶಾಸಕ ಬೆಳ್ಳಿಪ್ರಕಾಶ್‌ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ

Team Udayavani, Apr 8, 2020, 3:52 PM IST

08-April-26

ಕಡೂರು: ತಾಪಂ ಸಭಾಂಗಣದಲ್ಲಿ ಶಾಸಕ ಬೆಳ್ಳಿಪ್ರಕಾಶ್‌ ಅಧ್ಯಕ್ಷತೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅಧಿಕಾರಿಗಳ ಸಭೆ ನಡೆಸಿದರು.

ಕಡೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರುನ ಮಂಗಳವಾರ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡಿ, ಕೊರೊನಾ ಚಿಕಿತ್ಸೆಗಾಗಿ ಸಿದ್ಧಪಡಿಸಿರುವ ಐಸೋಲೇಷನ್‌ ವಾರ್ಡ್‌ ಮತ್ತಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು. ನಂತರ ತಾಪಂ ಸಭಾಂಗಣದಲ್ಲಿ ಶಾಸಕ ಬೆಳ್ಳಿಪ್ರಕಾಶ್‌ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮಾಹಿತಿ ಪಡೆದರು.

ತಾಲ್ಲೂಕು ಆರೋಗ್ಯಾ ಧಿಕಾರಿ ಡಾ| ಹರೀಶ್‌ ಅವರಿಂದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರ ಪಡೆದ ಪ್ರಜ್ವಲ್‌, ಯಾವುದೇ ಕೊರತೆಯಿದ್ದರೂ ನನ್ನ ಗಮನಕ್ಕೆ ತನ್ನಿ. ಪಿಪಿಇ ಕಿಟ್‌ ಮತ್ತು ಎನ್‌-95 ಮಾಸ್ಕ್ಗಳ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಮಾತನಾಡುತ್ತೇನೆ ಎಂದರು. ಅಗತ್ಯ ವಸ್ತುಗಳು ಮತ್ತು ದಿನಬಳಕೆಯ ದಿನಸಿ ವಸ್ತುಗಳ ದರ ಪಟ್ಟಿಯನ್ನು ಅಂಗಡಿಗಳ ಮುಂದೆ ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು. ಈ ವಸ್ತುಗಳಿಗೆ ಯಾವುದೇ ನಿರ್ಬಂಧ ಇಲ್ಲದಿರುವುದರಿಂದ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಲೈಸೆನ್ಸ್‌ ರದ್ದುಪಡಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್‌ಗೆ ಸೂಚಿಸಿದರು.

ಎಪಿಎಂಸಿಯಲ್ಲಿ ತರಕಾರಿ, ಧಾನ್ಯ ಮಾರಾಟ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದರು. ಮುಂದಿನ ಸೋಮವಾರ ಎರಡೂವರೆ ಸಾವಿರ ಆಹಾರ ಪದಾರ್ಥ ಕಿಟ್‌ಗಳನ್ನು ಕಡೂರಿಗೆ ಕಳುಹಿಸಲಿದ್ದು, ಅಗತ್ಯವಿದ್ದವರಿಗೆ ಅದನ್ನು ನೀಡಲಾಗುವುದು. ಎರಡೂವರೆ ಸಾವಿರ ಲೀಟರ್‌ ಸ್ಯಾನಿಟೈಸರ್‌ ಮತ್ತು 2500 ಮಾಸ್ಕ್ಗಳನ್ನೂ ಇದರ ಜೊತೆ ಕಳುಹಿಸಲಿದ್ದೇನೆ. ಇವುಗಳನ್ನು ಎಲ್ಲ ಆಸ್ಪತ್ರೆಗಳಿಗೆ ಮತ್ತು ಅಗತ್ಯವಿದ್ದವರಿಗೆ ನೀಡುವಂತೆ ತಿಳಿಸಿದರು. ಕೊರೊನಾ ವಿರುದ್ಧದ ಹೋರಾಟದಲ್ಲಿ ನಿರಂತರ ದುಡಿಯುತ್ತಿರುವ ವೈದ್ಯಕೀಯ ಮತ್ತು ಪೊಲೀಸ್‌ ಸಿಬ್ಬಂದಿ ಹಾಗೂ ಇನ್ನಿತರ ಇಲಾಖಾ ಸಿಬ್ಬಂದಿಗೆ ಮತ್ತು ಶಾಸಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಶಾಸಕ ಬೆಳ್ಳಿಪ್ರಕಾಶ್‌ ಅವರ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದಕ್ಕಾಗಿ ಶಾಸಕರಿಗೆ ಮತ್ತು ವೈದ್ಯಕೀಯ ಸಿಬ್ಬಂ ದಿಗೆ ಅಭಿನಂದಿಸುತ್ತೇನೆ ಎಂದರು. ಶಾಸಕ ಬೆಳ್ಳಿ ಪ್ರಕಾಶ್‌ ಮಾತನಾಡಿ, ಕೊರೊನಾ ಹೆಚ್ಚಾಗುವುದಕ್ಕೆ ಮುಂಚೆಯೇ ಕಡೂರಿನಲ್ಲಿ ಹೋಟೆಲ್‌ ಮತ್ತು ಬೇಕರಿಗಳನ್ನು ಮುಚ್ಚಲಾಗಿತ್ತು. ಮಾಂಸದಂಗಡಿಗಳನ್ನು ತೆಗೆಯಬಹುದೆಂದಿದ್ದರೂ ಸ್ಥಿತಿಗತಿಯನ್ನಾಧರಿಸಿ ಸ್ಥಳೀಯ ಆಡಳಿತ ಮಾಂಸದಂಗಡಿ, ಬೇಕರಿ ತೆಗೆಯಲು ಅನುಮತಿ ನೀಡಲಿಲ್ಲ. ಕೊರೊನಾ ತಡೆಯುವ ನಿಟ್ಟಿನಲ್ಲಿ ನಿರಂತರವಾಗಿ ಅ ಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಕಾರ್ಯ ನಿರ್ವಹಿಸಲಾಗುತ್ತಿದೆ.ಇದಕ್ಕೆ ಜನರ ಸಹಕಾರ ಮುಖ್ಯವಾಗಿದೆ ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌. ಧರ್ಮೇಗೌಡ, ಉಪವಿಭಾಗಾ ಧಿಕಾರಿ ರೇಣುಕಾ ಪ್ರಸಾದ್‌, ತಹಶೀಲ್ದಾರ್‌ ಜೆ.ಉಮೇಶ್‌, ಡಿವೈಎಸ್‌ಪಿ ರೇಣುಕಾಪ್ರಸಾದ್‌, ಜಿಪಂ ಸದಸ್ಯ ಕೆ.ಆರ್‌.ಮಹೇಶ್‌ ಒಡೆಯರ್‌, ತಾಪಂ ಇಒ ಡಾ.ದೇವರಾಜನಾಯ್ಕ, ಡಾ. ದೀಪಕ್‌, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್‌, ಬೀರೂರು ಸತ್ಯನಾರಾಯಣ, ಆಹಾರ ಇಲಾಖೆಯ ಪ್ರಸಾದ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.