KFD ಸೋಂಕಿಗೆ ಕಾಫಿನಾಡಲ್ಲಿ ಕಾರ್ಮಿಕ ಮಹಿಳೆ ಮೃತ್ಯು
Team Udayavani, Feb 28, 2024, 1:29 PM IST
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ಮಹಿಳೆಯನ್ನು ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಎಂದು ಗುರುತಿಸಲಾಗಿದೆ.
ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾ.ಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಾಗಿದ್ದು, ಕೆಲ ದಿನಗಳ ಹಿಂದೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕುರುತು ಕಳೆದ ಸೋಮವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು ಎನ್ನಲಾಗಿದ್ದು ವರದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿತ್ತು.
ಅರೋಗ್ಯ ಸಮಸ್ಯೆ ಉಲ್ಬಣಗೊಂಡ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊಟ್ರಮ್ಮ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ ಕೊಟ್ರಮ್ಮ ಅವರಿಗೆ ಕಾಡಿನಲ್ಲಿ ಸೌದೆ ತರಲು ಹೋಗಿರುವ ವೇಳೆ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದ್ದು. ಕೊಪ್ಪ ಹಾಗೂ ಎನ್.ಆರ್ ಪುರದಲ್ಲಿ ಮತ್ತೆ 6 ಮಂದಿಯಲ್ಲಿ ಸೋಂಕು ಇರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ: Reliance ಡಿಸ್ನೀ ವಿಲೀನದ ನಂತರ ಮಾಧ್ಯಮ ಸಂಸ್ಥೆಗೆ ನೀತಾ ಅಂಬಾನಿಗೆ ಅಧ್ಯಕ್ಷ ಹುದ್ದೆ: ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!