ಈಡಿಗ ಸಮುದಾಯ ಒಗ್ಗೂಡಲಿ


Team Udayavani, Nov 30, 2021, 4:35 PM IST

ಈಡಿಗ ಸಮುದಾಯ ಒಗ್ಗೂಡಲಿ

ಚಿಕ್ಕಮಗಳೂರು: ರಾಜ್ಯದಲ್ಲಿ ಈಡಿಗ ಸಮುದಾಯ 26 ಉಪ ಪಂಗಡಗಳಾಗಿ ಹಂಚಿ ಹರಿದು ಹೋಗಿದ್ದು, ಈ ಎಲ್ಲಾ ಉಪ ಪಂಗಡಗಳು ಒಟ್ಟುಗೂಡಿದಾಗ ಸಮುದಾಯಕ್ಕೆ ಶಕ್ತಿ ಬರಲಿದೆ. ಸಮುದಾಯ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಬಲಿಷ್ಟಗೊಳ್ಳಲಿದೆ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷ ಡಾ| ಎಂ.ತಿಮ್ಮೇಗೌಡ ಹೇಳಿದರು.

ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಬ್ರಹ್ಮಶ್ರೀ ನಾರಾಯಣಗುರು ಸಮಾಜಸೇವಾ ಸಂಘಗಳ ಒಕ್ಕೂಟ, ಜಿಲ್ಲಾ ಆರ್ಯ ಈಡಿಗ ಸಂಘ, ಜಿಲ್ಲಾ ಬಿಲ್ಲವ ಸೇವಾ ಸಂಘ, ಶ್ರೀ ನಾರಾಯಣ ಗುರು ಸಮಿತಿ ವತಿಯಿಂದ ಆಯೋಜಿಸಿದ್ದ ಸಮಾಜ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಮುಂಬರುವ ಬಜೆಟ್‌ನಲ್ಲಿ ಆರ್ಯ ಈಡಿಗ ನಿಗಮ ಮಂಡಳಿ ಘೋಷಣೆ ಮಾಡುವ ಭರವಸೆ ಇದ್ದು ಹೆಚ್ಚಿನ ಅನುದಾನ ನಿರೀಕ್ಷೆ ಇದೆ. ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಭವರಸೆ ನೀಡಿದರು.

ಜಿಲ್ಲೆಯಲ್ಲಿ 1 ಲಕ್ಷಕ್ಕೂ ಅಧಿ ಕ ಸಂಖ್ಯೆಯಲ್ಲಿ ಸಮುದಾಯದ ಜನರು ಇದ್ದಾರೆ. ಆದರೆ, ರಾಜಕೀಯವಾಗಿ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ. ಉಪ ಪಂಗಡಗಳಲ್ಲಿ ಹಂಚಿ ಹರಿದು ಹೋಗಿರುವ ನಮ್ಮ ಸಮುದಾಯ ಒಗ್ಗೂಡಿ ನಾವೆಲ್ಲರೂ ಒಂದೇ ಪಂಗಡ ಎಂದು ನಮ್ಮ ಶಕ್ತಿ ಪ್ರದರ್ಶಿಸಬೇಕು. ಆಗ ನಾವು ದೊಡ್ಡ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದರು. ಸರ್ಕಾರ ನಮ್ಮ ಕುಲ ಕಸುಬು ಕಿತ್ತುಕೊಂಡು ಒಳ್ಳೆಯ ಕೆಲಸ ಮಾಡಿದೆ. ಇಂದು ಸಮುದಾಯ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗಿದೆ. ವಿದ್ಯೆ ಸೊತ್ತಾಗಿದ್ದು, ಎಲ್ಲರೂ ಶಿಕ್ಷಣ ಪಡೆದುಕೊಳ್ಳುವ ಮೂಲಕ ಉನ್ನತ ಸ್ಥಾನವನ್ನು ಅಲಂಕರಿಸಬೇಕು. ಈ ನಿಟ್ಟಿನಲ್ಲಿ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಮುಂದಿನ ದಿನಗಳಲ್ಲಿ ಪ್ರತೀ ತಾಲೂಕು ಕೇಂದ್ರಗಳಲ್ಲಿ ವಿದ್ಯಾಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿ ಅಲ್ಲಿ ಸಮಾವೇಶ ಮಾಡುವ ಮೂಲಕ ಸಮುದಾಯವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದರು. ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು 150 ವರ್ಷಗಳ ಹಿಂದೆ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಶೋಷಣೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ನಾರಾಯಣ ಗುರುಗಳ ತತ್ವ-ಸಿದ್ಧಾಂತಗಳನ್ನು ಜೀವಂತ ವಾಗಿರಿಸಿಕೊಳ್ಳುವ ಮೂಲಕ ವರ್ಗರಹಿತ ಸಮಾಜ ಕಟ್ಟುವ ಶಕ್ತಿ ಯುವಜನತೆಯ ಮುಂದಿದೆ. ಈ ನಿಟ್ಟಿನಲ್ಲಿ ಯುವಸಮುದಾಯ ಮುಂದಾಗಬೇಕು ಎಂದು ತಿಳಿಸಿದರು.

ರಾಮನಗರ ಜಿಲ್ಲೆ ಮಾಗಡಿ ತಾಲೂಕು ಸೊಲ್ಲೂರಿನ ಆರ್ಯ ಈಡಿಗ ಮಹಾಸಂಸ್ಥಾನದಲ್ಲಿ 2020ರ ಫೆ.2ರಂದು ನಿಯೋಜಿತ ಪೀಠಾರೋಹಣ ಕಾರ್ಯಕ್ರಮ ನಡೆಯಲಿದ್ದು ಮುಂದೆ ಸೊಲ್ಲೂರು ದೊಡ್ಡ ಶಕ್ತಿಕೇಂದ್ರವಾಗಿ ಹೊರಹೊಮ್ಮಲಿ. ಈ ನಿಟ್ಟಿನಲ್ಲಿ ಸಮುದಾಯ ಬಲಿಷ್ಟ ಸಮುದಾಯವಾಗಿ ಬೆಳೆಯಲಿ ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಚಿಕ್ಕಮಗಳೂರಿನಲ್ಲಿ ಆರ್ಯ ಈಡಿಗ ಸಂಘಟನೆ ಬಲಪಡಿಸುವ ಮೂಲಕ ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಮುಂದೆ ಬರಬೇಕು. ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದರೆ ಹಿಂದಿನ ಮಹನೀಯರ ನಿಸ್ವಾರ್ಥ ಸೇವೆ ತಿಳಿಯುತ್ತದೆ ಎಂದರು.

ಇದೇ ಸಂದರ್ಭದಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಸೊಲೂರಿನ ನಿಯೋಜಿತ ಸ್ವಾಮೀಜಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜಸೇವಾ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್‌.ಎಂ. ಸತೀಶ್‌ ಅಧ್ಯಕ್ಷತೆ ವಹಿಸಿದ್ದರು. ನಿಯೋಜಿತ ಸ್ವಾಮೀಜಿ ಅವರಿಗೆ ಮಹಿಳೆಯರಿಂದ ಪಾದಪೂಜೆ ನೆರವೇರಿಸಲಾಯಿತು. ಬಿ. ರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್ಯ ಈಡಿಗ ಬಿಲ್ಲವ ಸಮುದಾಯದ ಮುಖಂಡರಾದ ಪಿ.ಆರ್‌. ಸದಾಶಿವ, ದುಷ್ಯಂತ್‌, ಕೆ.ಸಿ. ಶಾಂತಕುಮಾರ್‌, ಎಂ.ಕೃಷ್ಣಪ್ಪ, ಕೆ.ರಾಜು. ಕೆ. ಚಂದ್ರಶೇಖರ್‌, ಪುಷ್ಪಲತಾ, ಪುಷ್ಪಾಂಜಲಿ, ಶಶಿಕಲಾ ಸೇರಿದಂತೆ ಅನೇಕರು ಇದ್ದರು. ವಾಸು ಪೂಜಾರಿ ಸ್ವಾಗತಿಸಿದರು. ಲೀಲಾವತಿ ರತ್ನಾಕರ ನಿರೂಪಿಸಿದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.