ಸಿ.ಟಿ ರವಿಗೆ ಶಾಕ್; ಬಿಜೆಪಿಗೆ ಗುಡ್ ಬೈ ಹೇಳಿದ ಲಿಂಗಾಯತ ಮುಖಂಡ ತಮ್ಮಯ್ಯ
Team Udayavani, Feb 16, 2023, 2:49 PM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಸ್ವಕ್ಷೇತ್ರದಲ್ಲೇ ಆಘಾತ ಎದುರಾಗಿದ್ದು, ಆಪ್ತ ವಲಯದಲ್ಲಿದ್ದ ಲಿಂಗಾಯತ ಮುಖಂಡ ಎಚ್.ಡಿ ತಮ್ಮಯ್ಯ ಅವರು ಬಿಜೆಪಿ ತೊರೆದಿದ್ದಾರೆ.
ಚುನಾವಣೆಗೂ ಮುನ್ನವೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಎಚ್.ಡಿ ತಮ್ಮಯ್ಯ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ತಿಂಗಳ ಹಿಂದೆಯೇ ಎಚ್.ಡಿ.ತಮ್ಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಕೇಳಿದ್ದರು. ಸಿ.ಟಿ.ರವಿ ಬದಲಿಗೆ ತನಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ತಮ್ಮಯ್ಯ ಕೇಳಿದ್ದರು.
ಇದನ್ನೂ ಓದಿ:ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 12 ಚೀತಾಗಳು; ಮೂರು ವರ್ಷಗಳ ಪ್ರಯತ್ನದ ಫಲ
ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಅವರು ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅವರಿಗೆ ರವಾನಿಸಿದ್ದಾರೆ. ಲಿಂಗಾಯತ ಮತಗಳೇ ನಿರ್ಣಾಯಕವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮುಖಂಡರೊಬ್ಬರ ಈ ನಡೆಯಿಂದ ಬಿಜೆಪಿಗೆ ಯಾವ ರೀತಿಯ ಹೊಡೆತ ಬೀಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ