ಚುನಾವಣೆ ಬಳಿಕ “ಲಿಂಗಾಯತ ಸಿಎಂ’ ನಿರ್ಧಾರ: Mallikarjun Kharge

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಕೇಂದ್ರದ ಮೌನವೇಕೆ?

Team Udayavani, Apr 25, 2023, 5:32 AM IST

ಚುನಾವಣೆ ಬಳಿಕ “ಲಿಂಗಾಯತ ಸಿಎಂ’ ನಿರ್ಧಾರ: Mallikarjun Kharge

ಚಿಕ್ಕಮಗಳೂರು: ಚುನಾವಣೆ ಫ‌ಲಿತಾಂಶದ ಬಳಿಕ ಪಕ್ಷದ ಚುನಾಯಿತ ಸದಸ್ಯರು ಮತ್ತು ಹೈಕಮಾಂಡ್‌ ಚರ್ಚಿಸಿ ದಲಿತ ಅಥವಾ ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಯಿಂದ ಈ ದೇಶ ಕಟ್ಟಲು ಸಾಧ್ಯವಿಲ್ಲ. ಧರ್ಮ ಬೇರೆ, ರಾಜಕಾರಣ ಬೇರೆ. ಕಾಂಗ್ರೆಸ್‌ ಲಿಂಗಾಯತ ಅಸ್ತ್ರ, ಸಿದ್ದರಾಮಯ್ಯ ಲಿಂಗಾಯತ ಮುಖ್ಯಮಂತ್ರಿ ಹೇಳಿಕೆ ನಿರಾಧಾರ. ನಮ್ಮ ಐಡಿಯಾಲಜಿ ಮತ್ತು ಸಿದ್ಧಾಂತ ಬಿಡುವುದಿಲ್ಲ. ಆದರ ಆಧಾರದ ಮೇಲೆ ಚುನಾವಣೆ ನಡೆಸುತ್ತೇವೆ. ಕಾಂಗ್ರೆಸ್‌ ಜಾತಿ, ಹಣಬಲದ ಆಧಾರದ ಮೇಲೆ ಯಾವತ್ತೂ ಟಿಕೆಟ್‌ ನೀಡಿಲ್ಲ. ಹಾಗಿದ್ದರೆ ನಾನು 9 ಬಾರಿ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್‌ ನೀಡಿದ್ದೇವೆ. ಎಲ್ಲರನ್ನೂ ಒಗ್ಗಟ್ಟಿನಿಂದ ತೆಗೆದುಕೊಂಡು ಹೋಗುತ್ತೇವೆ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಗುತ್ತಿಗೆದಾರರು, ಮಠಾ ಧೀಶರು ಸೇರಿದಂತೆ ಅನೇಕರು ಈ ಸರ್ಕಾರದಲ್ಲಿ ಕಾಮಗಾರಿ,  40 ಪರ್ಸೆಂಟ್‌ ಸರ್ಕಾರಕ್ಕೆ ಕೊಡಬೇಕೆಂದು ಪ್ರಧಾನಿ ಮೋದಿ, ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ ಹೋರಾಟ ಮಾಡಿ ಅಸೆಂಬ್ಲಿಯಲ್ಲಿ ಧ್ವನಿ ಎತ್ತಿದೆ. ಆದರೆ, ಕೇಂದ್ರ ಸರ್ಕಾರ ಏಕೆ ಗಮನ ಹರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕಳ್ಳ ಸರ್ಕಾರದ ಬಗ್ಗೆ ಸಾಕಾಗಿದೆ. ಎಂಎಲ್‌ಎಗಳನ್ನು ಕದ್ದುಕೊಂಡು ಹೋಗಿ ಸರ್ಕಾರ ರಚನೆ ಮಾಡುತ್ತಾರೆ. ಗೋವಾ ಸೇರಿದಂತೆ ಇತರೆಡೆಗಳಲ್ಲೂ ಕಳ್ಳ ಸರ್ಕಾರ ರಚನೆ ಮಾಡಿದ್ದಾರೆ. ಕಳ್ಳರ ಹಾವಳಿ ಜಾಸ್ತಿಯಾಗಿದ್ದು ಜನರು ಹುಷಾರಾಗಿರಬೇಕು. ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್‌ ಸರ್ಕಾರ ತರಬೇಕು.
ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.