
‘ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ..’: ಶಾಸಕ ರಾಜೇಗೌಡ ಆಡಿಯೋ ವೈರಲ್
Team Udayavani, Jan 24, 2023, 9:59 AM IST

ಚಿಕ್ಕಮಗಳೂರು: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ
ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಪದಗಳಿಂದ ಹಿಂದೂಪರ ಸಂಘಟನೆಗಳನ್ನು, ಬಿಜೆಪಿಯನ್ನು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನಿಂದಿಸಿರುವ ಆಡಿಯೋವೊಂದು ವೈರಲ್ ಆಗಿದೆ.
ಇದನ್ನೂ ಓದಿ:ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಯಾಕಿಲ್ಲ? ಕೋಚ್ ದ್ರಾವಿಡ್ ಉತ್ತರ ನೋಡಿ
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ನಾಲಿಗೆ ಹರಿಬಿಟ್ಟಿದ್ದು, ಈ ಹಿಂದೆ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೊಗಳಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಅಯೋಧ್ಯೆ, ದತ್ತಪೀಠದ ಹೋರಾಟದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಕೇಸರಿ ಶಾಲು, ಕುಂಕುಮ ಹಾಕಿಕೊಂಡು ದತ್ತಮಾಲೆ ಹಾಕಿದರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಪರೋಕ್ಷವಾಗಿ ಹಿಂದೂ ಪರ ಸಂಘಟನೆ, ಬಿಜೆಪಿ ಪಕ್ಷದ ವಿರುದ್ದ ನಿಂದನೆ ಮಾಡಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಲೂಸ್ ಟಾಕ್ ವಿರುದ್ದ ಹಿಂದೂಪರ ಸಂಘಟನೆಯ ಕಾರ್ಯಕತರು ಕೆರಳಿದ್ದಾರೆ. ರಾಜೇಗೌಡರ ಹೇಳಿಕೆ ಖಂಡಿಸಿ ಜಿಲ್ಲಾದ್ಯಾಂತ ಪ್ರತಿಭಟನೆ ನಡೆಸಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು ಟಿ.ಡಿ.ರಾಜೇಗೌಡ ಬಹಿರಂಗ ಕ್ಷಮೆಯಾಚನೆಗೆ ಒತ್ತಾಯ ಮಾಡುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
