ಆರ್ಥಿಕ ಗಣತಿಗೆ ಮೊಬೈಲ್‌ ಆ್ಯಪ್‌

Team Udayavani, Jan 3, 2020, 3:18 PM IST

cm-tdy-1

ಚಿಕ್ಕಮಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್‌ ಮೊಬೈಲ್‌ ಆ್ಯಪ್‌ ಮೂಲಕ ಆರ್ಥಿಕ ಗಣತಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು.

ನಗರದ ಜಿಲ್ಲಾ ಪಂಚಾಯತ್‌ ಕಚೇರಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಗುರುವಾರ ನಡೆದ ಗಣತಿದಾರರ ಕಾರ್ಯಾಗಾರದಲ್ಲಿ ಮೊಬೈಲ್‌ ಆ್ಯಪ್‌ ತಂತ್ರಾಂಶ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಭಾರತ ಸರ್ಕಾರ ಈಗಾಗಲೇ 6 ಆರ್ಥಿಕ ಗಣತಿಗಳನ್ನು ಪೂರೈಸಿದೆ. 7ನೇ ಆರ್ಥಿಕ ಗಣತಿಯನ್ನು ವಿಶೇಷವಾಗಿ ಪ್ರಾರಂಭಿಸುವ ಉದ್ದೇಶದಿಂದ ಮೊಬೈಲ್‌ ಆ್ಯಪ್‌ ತಂತ್ರಾಂಶದ ಮೂಲಕ ಗಣತಿ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಣತಿಗೆ ಚಾಲನೆ ಸಿಕ್ಕಿದ್ದು, ಕಾರಣಾಂತರಗಳಿಂದ ನಮ್ಮ ಜಿಲ್ಲೆಯಲ್ಲಿ 6 ತಿಂಗಳು ವಿಳಂಬವಾಗಿದೆ. ಸದ್ಯ ಗಣತಿ ಕಾರ್ಯವನ್ನು ಮಾ.15ರ ಒಳಗೆ ಸಂಪೂರ್ಣಗೊಳಿಸಬೇಕಿದೆ. ಇದೊಂದು ಕೇವಲ ಆರ್ಥಿಕ ಸಮೀಕ್ಷೆಯಾಗಿದ್ದು, ಜಿಲ್ಲೆಯ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ವಲಯದ ವ್ಯಕ್ತಿಗಳ ಆದಾಯ ಮತ್ತು ಉದ್ಯಮ ಪಟ್ಟಿಗಳ ಕುರಿತು ಮಾಹಿತಿ ಕಲೆಹಾಕಬೇಕಿದೆ ಎಂದರು.

ಇದೊಂದು ಮಹತ್ವದ ಗಣತಿ ಕಾರ್ಯವಾಗಿದ್ದು, ಗಣತಿದಾರರು ಮನೆ ಮನೆಗೆ ತೆರಳಿ ದತ್ತಾಂಶಗಳನ್ನು ಸರಿಯಾದ ರೀತಿಯಲ್ಲಿ ಕಲೆಹಾಕಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಾಮಾನ್ಯ ಸೇವಾ ಕೇಂದ್ರದಡಿಯಲ್ಲಿ ಗಣತಿದಾರರನ್ನು ನೇಮಿಸಲಾಗಿದ್ದು, ಜಿಲ್ಲೆಯಲ್ಲಿರುವ ಒಟ್ಟು 1117 ಗ್ರಾಮಗಳಲ್ಲಿ ಹಾಗೂ 9 ನಗರ ಪ್ರದೇಶಗಳ ವ್ಯಾಪ್ತಿಯಲ್ಲಿನ ಮನೆ, ಉದ್ಯಮಗಳಲ್ಲಿನ ಆರ್ಥಿಕ ದತ್ತಾಂಶಗಳನ್ನು ಮೊಬೈಲ್‌ ಆ್ಯಪ್‌ ಮೂಲಕ ಸಂಗ್ರಹಿಸುವಂತೆ  ತಿಳಿಸಿದರು.

ಈ ವೇಳೆ ಮನೆಗಳಿಗೆ ಭೇಟಿ ನೀಡುವ ಗಣತಿದಾರರಿಗೆ ಸಾರ್ವಜನಿಕರು ಅಗತ್ಯ ಮಾಹಿತಿ ನೀಡುವುದರ ಮೂಲಕ ಸಹಕರಿಸುವಂತೆ ಕೋರಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಯೋಜನಾಧಿಕಾರಿ ಹನುಮಂತಪ್ಪ, ಜಿಲ್ಲಾ ಸಾಂಖೀಕ ಸಂಗ್ರಹಣಾಧಿಕಾರಿ ಕರೇಗೌಡ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಜು ಮತ್ತು ಪಿಎಸ್‌ಐ ರಮ್ಯಾ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.