ಹೊರನಾಡಲ್ಲಿ ಪ್ರವಾಸಿಗರ ಸಂಖ್ಯೆ ವಿರಳ!

Team Udayavani, Mar 19, 2020, 2:49 PM IST

19-March-30

ಮೂಡಿಗೆರೆ: ಕೊರೊನಾ ವೈರಸ್‌ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕಳಸ ಹಾಗೂ ಹೊರನಾಡು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ತೀವ್ರ ಇಳಿಮುಖವಾಗಿದೆ.

ಸದಾ ಪ್ರವಾಸಿಗರು, ಭಕ್ತರಿಂದ ತುಂಬಿರುತ್ತಿದ್ದ ದೇವಾಲಯದ ಆವರಣ ಈಗ ಬಿಕೋ ಎನ್ನುತ್ತಿದೆ. ಕೊರೊನಾ ಸೋಂಕು ಕುರಿತು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಬರಲಾರಂಭಿಸುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪ್ರವಾಸಿ ತಾಣಗಳ ಭೇಟಿಗೆ ತಡೆ ನೀಡಿ ಆದೇಶ ಹೊರಡಿಸಿದ ನಂತರ ಕೇವಲ ಬೆರಳೆಣಿಕೆಯ ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಹಲವು ಭಾಗ ಸೇರಿದಂತೆ ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ತಮಿಳುನಾಡುಗಳಿಂದ ಆಗಮಿಸುತ್ತಿದ್ದ ಯಾತ್ರಾರ್ಥಿಗಳು ಇತ್ತ ಬರುತ್ತಿಲ್ಲ. ಇದರಿಂದ ಪ್ರವಾಸಿಗರನ್ನೇ ನಂಬಿಕೊಂಡಿದ್ದ ಈ ಭಾಗದ ಲಾಡ್ಜ್ ಗಳು, ಹೋಟೆಲ್‌ಗ‌ಳು, ಕಾಫೀ, ಟೀ ಶಾಪ್‌ ಗಳು, ಸಾಂಬಾರು ಪದಾರ್ಥ ಸೇರಿ ವಿವಿಧ ವಸ್ತು ಮಾರುವ ಅಂಗಡಿಗಳೆಲ್ಲ ವ್ಯಾಪಾರ ಇಲ್ಲದೆ ನಷ್ಟ ಅನುಭವಿಸುವಂತಾಗಿದೆ.

ಹಸಿವು ನೀಗಿಸಿ ಬಲ ತುಂಬುವ ಆದಿಶಕ್ತಾÂತ್ಮಕ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಪ್ರತಿನಿತ್ಯ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಅನ್ನಪ್ರವಾದ ಸೀÌಕರಿಸುತ್ತಿದ್ದರು. ಆದರೆ, ಈಗ ಕೇವಲ 900 ರಿಂದ 1200 ಜನರಿಗೆ ಮಾತ್ರ ಅನ್ನಸಂತರ್ಪಣೆ ಕಾರ್ಯ ನಡೆಯುತ್ತಿದೆ. ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಭಕ್ತಾದಿಗಳಲ್ಲಿ ಬಹುತೇಕರು ಸ್ಥಳೀಯರೇ ಆಗಿದ್ದು, ಹೊರಭಾಗದಿಂದ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗಿದೆ.

ಬಹುತೇಕ ಸರ್ಕಾರಿ ಬಸ್‌ಗಳ ಸಂಚಾರವನ್ನು ನಿಲ್ಲಿಸಲಾಗಿದ್ದು, ಕೆಲವೇ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಖಾಸಗಿ ವಾಹನವೇ ಪ್ರಮುಖ ಸಾರಿಗೆಯಾಗಿರುವುದರಿಂದ ಕ್ಷೇತ್ರದ ಭೇಟಿಗೆ ಯಾರೂ ಮುಂದಾಗುತ್ತಿಲ್ಲ. ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳ ಬಗ್ಗೆ ತೀವ್ರ ನಿಗಾ ವಹಿಸಿರುವ ದೇವಸ್ಥಾನ ಆಡಳಿತ ಮಂಡಳಿ, ಆರೋಗ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಜೊತೆಗೆ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಊಟೋಪಚಾರಗಳಲ್ಲಿ ಶುದ್ಧತೆ ಕಾಪಾಡಿಕೊಳ್ಳುವ ಜೊತೆಗೆ ಭಕ್ತಾದಿಗಳಿಗೆ ಸ್ವತ್ಛತೆ ಬಗ್ಗೆ ತಿಳಿಹೇಳಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತಾದಿಗಳಲ್ಲಿ ಕೊರೊನಾ ವೈರಸ್‌ನ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಗೆ ಸುದ್ದಿ ಮುಟ್ಟಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಆದೇಶಗಳಿಗೆ ಬೆಲೆ ಕೊಟ್ಟಿರುವ ಆಡಳಿತ ಮಂಡಳಿ ಅನಿವಾರ್ಯ ಸಂದರ್ಭಗಳ ಹೊರತಾಗಿ ಕ್ಷೇತ್ರ ದರ್ಶನ ಹಾಗೂ ಸಾರ್ವಜನಿಕ ಸಭೆ- ಸಮಾರಂಭಗಳಿಗೆ ನಿಷೇಧ ಹೇರಿದೆ.

ಮೂಡಿಗೆರೆ ತಾಲೂಕಿನಲ್ಲಿ ಸದ್ಯಕ್ಕೆ ಕೊರೊನಾ ಪ್ರಕರಣಗಳು ದಾಖಲಾಗಿಲ್ಲ. ಮೂಡಿಗೆರೆಯಲ್ಲಿರುವ ಸಹೋದರಿ ಮನೆಗೆ ಆಗಮಿಸಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಕೊರೊನಾ ಸೋಂಕು ಶಂಕೆಯಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯಕೀಯ ವರದಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲ ಎಂಬ ಸುದ್ದಿ ಬಂದ ನಂತರ ತಾಲೂಕಿನ ಜನ ನಿರಾಳರಾಗಿದ್ದರು. ಸಮಸ್ಯೆ ಬಂದ ಮೇಲೆ ಪರಿಹಾರ ಕಂಡುಕೊಳ್ಳುವ ಮೊದಲು ಸಮಸ್ಯೆಯೇ ಬಾರದಂತೆ ತಾಲೂಕಿನಾದ್ಯಂತ ಹೆಚ್ಚಿನ ಎಚ್ಚರ ವಹಿಸಲಾಗಿದೆ.

„ಸುಧೀರ್‌ ಮೊದಲಮನೆ

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.