ಪುಲ್ವಾಮಾ ವೀರಯೋಧರಿಗೆ ನುಡಿ ನಮನ

ಯೋಧನ ಮನಸ್ಸಿನಲ್ಲಿ ದೇಶ ಕಾಯುವ ಯೋಚನೆ ಮಾತ್ರ ಸುಳಿದಾಡುತ್ತೆ: ಸುಂದ್ರೇಶ್‌

Team Udayavani, Feb 15, 2020, 12:54 PM IST

ಮೂಡಿಗೆರೆ: ಪಟ್ಟಣದ ಚೈತನ್ಯ ಮಿನಿ ಹಾಲ್‌ನಲ್ಲಿ ಹರಿ ಓಂ ಸೇವಾ ಸಂಘದಿಂದ ಪುಲ್ವಾಮ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರಿಗೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

ಮೂಡಿಗೆರೆ: ಕಳೆದ ವರ್ಷ ಫೆ.14ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ 40 ಸೈನಿಕರಿಗೆ ಪಟ್ಟಣದಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪಟ್ಟಣದ ಚೈತನ್ಯ ಮಿನಿ ಹಾಲ್‌ನಲ್ಲಿ ಹರಿ ಓಂ ಸೇವಾ ಸಂಘದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಯೋಧರ ಸಂಘದ ಅಧ್ಯಕ್ಷ ಮಗ್ಗಲಮಕ್ಕಿ ಸುಂದ್ರೇಶ್‌, ಯಾವುದೇ ಯೋಧ ತನ್ನ ಜೀವನದ ಎಲ್ಲಾ ಆಸೆಗಳನ್ನು ಬಿಟ್ಟು ಸೇನೆಗೆ ಸೇರುತ್ತಾನೆ. ಹೊರಗಿನ ಪ್ರಪಂಚದ ಅರಿವು ಆತನಿಗೆ ಇರುವುದಿಲ್ಲ. ಸರಿಯಾದ ಸಮಯಕ್ಕೆ ಊಟ-ಉಪಚಾರದ ಮಾತುಗಳು ಕೇಳಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬ ಯೋಧನ ಮನಸ್ಸಿನಲ್ಲಿ ದೇಶ ಕಾಯುವ ಯೋಚನೆ ಮಾತ್ರ ಸುಳಿದಾಡುತ್ತಿರುತ್ತದೆ ಎಂದರು.

ಗಡಿಯಲ್ಲಿ ಗುಂಡಿನ ದಾಳಿ ಇಲ್ಲದ ದಿನಗಳನ್ನು ಕಾಣಲು ಸಾಧ್ಯವಿಲ್ಲ. ಯಾವುದಾದರೂ ಯೋಧನಿಗೆ ಅನಾಹುತಗಳಾದಲ್ಲಿ ಮಾತ್ರ ಹೊರಗಿನ ಪ್ರಪಂಚಕ್ಕೆ ತಿಳಿಯುತ್ತದೆಯೇ ಹೊರತು ಬೇರೆ ಯಾವ ಮಾಹಿತಿಗಳೂ ಹೊರಗಿನ ಪ್ರಪಂಚಕ್ಕೆ ತಿಳಿಯುವುದಿಲ್ಲ. ಸೈನಿಕರಿಗೆ ಜನರು ನೀಡುವ ಗೌರವ ಯುವಕರಿಗೆ ಸೇನೆಗೆ ಸೇರಲು ಹುಮ್ಮಸ್ಸು ನೀಡುತ್ತದೆ. ಇದು ಹೀಗೆಯೇ ಮುಂದುವರೆಯಲಿ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಣಚೂರ್‌ ವಿನೋದ್‌ ಅವರು, ಹಲವು ರಾಜಕೀಯ ಪಕ್ಷಗಳು ವೀರಯೋಧರ ಸಾವಿನ ವಿಚಾರಗಳನ್ನು ರಾಜಕೀಯ ಚಟುವಟಿಕೆಗಳಿಗೆ ವಸ್ತುಗಳನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಯಾವುದೇ ಕುಟುಂಬ ತಮ್ಮ ಮನೆಯ ಸದಸ್ಯನೊಬ್ಬನನ್ನು ಕಾಣದ ಊರಿಗೆ ಅದರಲ್ಲೂ ಸೇನೆಗೆ ಕಳುಹಿಸಿಕೊಡುವಾಗ ಅನುಭವಿಸುವ ನೋವಿನ ಬೆಲೆ ಇಂತಹವರಿಗೆ ಅರ್ಥವಾಗುವುದಿಲ್ಲ. ಅದರಲ್ಲೂ ತಮ್ಮ ಮನೆಯ ಸದಸ್ಯ ವೀರ ಮರಣ ಹೊಂದಿದ ವಿಚಾರ ತಿಳಿದಾಗ ನೋವಿನ ಪ್ರಮಾಣ ಹೆಚ್ಚಾಗಿ ಇರುತ್ತದೆ. ದಯವಿಟ್ಟು ಸಾವಿನಲ್ಲಿ ರಾಜಕಾರಣ ಮಾಡುವುದನ್ನು ನಿಲ್ಲಿಸಿ, ಸೈನಿಕರ ಕುಟುಂಬಕ್ಕೆ ಬೆಲೆ ನೀಡುವ ಅಭ್ಯಾಸವನ್ನು ರಾಜಕೀಯ ನಾಯಕರು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ 40 ಜನ ಯೋಧರ ಹೆಸರುಗಳನ್ನು ಹೇಳಿ ಅವರ ಸೇವೆಯನ್ನು ಸ್ಮರಿಸಲಾಯಿತು. ನಿಧನರಾದ ಯೋಧರ ಕುಟುಂಬಗಳ ಇಂದಿನ ಪರಿಸ್ಥಿತಿ ಅವಲೋಕಿಸಲಾಯಿತು. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ನಮನ ಸಲ್ಲಿಸಿ, ಮೌನಾಚರಣೆ ಆಚರಿಸಲಾಯಿತು. ನಿವೃತ್ತ ಯೋಧರಾದ ಮಗ್ಗಲಮಕ್ಕಿಯ ಎಂ.ಡಿ.ಉಮೇಶ್‌, ಕೆಲ್ಲೂರು ರಾಜಶೇಖರ್‌ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಣಚೂರು ಆನಂದ್‌ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂಬಳಕಾಯಿಯಲ್ಲಿ ಸಿಹಿಕುಂಬಳ, ಬೂದು ಕುಂಬಳ ಎಂಬ ಎರಡು ವಿಧಗಳಿವೆ. ಅದರಲ್ಲಿ ಚೀನಿಕಾಯಿ ಎಂದು ಕರೆಯಲ್ಪಡುವ ಸಿಹಿಗುಂಬಳವನ್ನು ತರಕಾರಿಯಾಗಷ್ಟೇ ಅಲ್ಲದೆ, ಮನೆ...

  • ಏಕಾದಶಿ, ಸಂಕಷ್ಟಹರ ಚತುರ್ಥಿ, ಅಂತ ದೇವರ ಹೆಸರಿನಲ್ಲಿ ಉಪವಾಸ ಮಾಡುವವರಿದ್ದಾರೆ. ಹಾಗೆ ತಿಂಗಳಿಗೊಮ್ಮೆ ಉಪವಾಸ ಮಾಡುವುದು ಆರೋಗ್ಯಕ್ಕೆ ಕೂಡಾ ಒಳ್ಳೆಯದು. ಹಾಗೆಯೇ,...

  • ಹಿಂದಿನ ಕಾಲದಲ್ಲಿ ಮೆಹಂದಿ ಗಿಡವನ್ನು ಅರೆದು ಬಹುತೇಕ ಎಲ್ಲ ಸಂದರ್ಭದಲ್ಲಿಯೂ ಒಂದೇ ಡಿಸೈನ್‌ ಮಾಡುತ್ತಿದ್ದರಂತೆ. ಆದರೆ ಕಾಲಕ್ರಮೇಣ ಮೆಹೆಂದಿ ಕೊನ್‌ ಪರಿಕಲ್ಪನೆ...

  • ಮಜೂರು - ಮಲ್ಲಾರು ಅವಳಿ ಗ್ರಾಮಗಳ ಕಾರ್ಯ ವ್ಯಾಪ್ತಿಯ ಹೈನುಗಾರರ ಬೆಳವಣಿಗೆಯ ಉದ್ದೇಶವನ್ನು ಇಟ್ಟುಕೊಂಡು ದ. ಕ. ಹಾಲು ಒಕ್ಕೂಟದ ಅಧೀನದಲ್ಲಿ 1989 ಮೇ 5ರಂದು ಮಜೂರು...

  • ಗುಣಮಟ್ಟದ ಹಾಲು, ಗರಿಷ್ಠ ಕೃತಕ ಗರ್ಭಧಾರಣೆ, ಹೆಚ್ಚು ಹಾಲು ಸಂಗ್ರಹದಲ್ಲಿ ಉತ್ತಮ ಸಾಧನೆ ಮಾಡಿ, ಅವಿಭಜಿತ ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಮಂಗಳೂರಿನಿಂದ...