ಇಂದು ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ
Team Udayavani, Jan 21, 2022, 9:29 PM IST
ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಚುನಾವಣೆ ಜ.21ರಂದು ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ “ಎ’ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ “ಬಿ’ಗೆ ಮೀಸಲಾಗಿದೆ.
ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿ ಸುವ ಮೂಲಕ ಸರಳ ಬಹುಮತ ಪಡೆದಿದ್ದು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೂ ನಾಮಪತ್ರ ಸ್ವೀಕರಿಸಲು ಸಮಯ ನಿಗ ದಿ ಮಾಡಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಚುನಾವಣೆ ಆರಂಭವಾಗಲಿದ್ದು, 1 ಗಂಟೆಯಿಂದ 5 ನಿಮಿಷಗಳ ನಾಮ ಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. 1 ಗಂಟೆ 5ನಿಮಿಷದಿಂದ 1 ಗಂಟೆ 10 ನಿಮಿಷದವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಲಾಗಿದೆ. 1 ಗಂಟೆ 10 ನಿಮಿಷದ ಬಳಿಕ ಚುನಾವಣೆ ಅವಶ್ಯವಿದ್ದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಧಿಕಾರಿಯಾಗಿ ಹಿರಿಯ ಉಪವಿಭಾಗಾ ಧಿಕಾರಿ ಡಾ| ಎಚ್. ಎಲ್. ನಾಗರಾಜ್ ಕಾರ್ಯ ನಿರ್ವಹಿಸಲಿದ್ದಾರೆ.