Netravati Bridge ; ನದಿಗೆ ಹಾರಿ ಚಿಕ್ಕಮಗಳೂರಿನ ವ್ಯಕ್ತಿ ಆತ್ಮಹತ್ಯೆ

ಕೆಫೆ ಕಾಫಿ ಡೇ ಮಾಲಕ ಸಿದ್ದಾಥ್೯ ತವರೂರ ವ್ಯಾಪಾರಿ...ಮೂರು ವರ್ಷಗಳ ಬಳಿಕ ಮತ್ತೆ ಸುದ್ದಿಯಾದ ಸೇತುವೆ

Team Udayavani, Oct 30, 2023, 5:37 PM IST

1-sadsad

ಉಳ್ಳಾಲ/ಚಿಕ್ಕಮಗಳೂರು: ಕಳೆದ ಮೂರು ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಇದೀಗ ಮತ್ತೆ ವ್ಯಾಪಾರಿಯೊಬ್ಬರ ಆತ್ಮಹತ್ಯೆಯಿಂದ ಸುದ್ಧಿಯಾಗಿದೆ.  ಸೋಮವಾರ ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ (40 ) ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನಕುಮಾರ್ ತರಕಾರಿ, ಕೊತ್ತಂಬರಿ ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ಬೆಳಗ್ಗೆ ವ್ಯಾಪಾರದ ಹಣ ಬರಲು ಇದೆ, ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.

ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ತೆಗೆದು ಮಾಹಿತಿ ಹಂಚಿಕೊಂಡಿದ್ದು, ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿದೆ.

ಪ್ರಸನ್ನಕುಮಾರ್ ಉತ್ತಮ‌ ಆರ್ಥಿಕ ಹಿನ್ನಲೆ ಹೊಂದಿದ್ದು, ಇತ್ತೀಚೆಗೆ ಹೊಸ ಮನೆಯನ್ನು ಕಟ್ಟಿಸಿದ್ದರು ಎನ್ನಲಾಗಿದೆ. ಪ್ರಸನ್ನ ಕುಮಾರ್ ವಿವಾಹಿತರಾಗಿದ್ದು, ಇಬ್ಬರು ಚಿಕ್ಕ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದವರು ಎಂದು ತಿಳಿದುಬಂದಿದೆ.ಅವರು ನದಿಗೆ ಹಾರಿರುವುದಕ್ಕೆ ಕಾರಣ ತಿಳಿದುಬಂದಿಲ್ಲ, ಘಟನೆ ಅನುಮಾನಾಸ್ಪದವಾಗಿದೆ. ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯನ್ನು ಪ್ರತ್ಯಕ್ಷ ಕಂಡವರು ತತ್ ಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.

2019 ರಲ್ಲಿ ಕೆಫೆ ಕಾಫಿ ಡೇ ಮಾಲಕ ಸಿದ್ದಾಥ್೯ ಆತ್ಮಹತ್ಯೆ ನಂತರ ಸರಣಿ ಆತ್ಮಹತ್ಯೆಗಳೇ ನೇತ್ರಾವತಿ ಸೇತುವೆಯಲ್ಲಿ ನಡೆದಿತ್ತು.2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮುಡಾ ಅಭಿವೃದ್ಧಿ ಅನುದಾನದ ಮೂಲಕ ತಡೆಬೇಲಿ ಅಳವಡಿಸಲಾಯಿತು. ತದನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.