ಅಕ್ಕಿ ಮಾರಿದರೆ ಪಡಿತರ ಚೀಟಿ ರದ್ದು: ರೇಣುಕಾಪ್ರಸಾದ್‌

Team Udayavani, Apr 13, 2020, 6:11 PM IST

13-April-38

ಎನ್‌.ಆರ್‌.ಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಎಸಿ ರೇಣುಕಾಪ್ರಸಾದ್‌ ಅಧ್ಯಕ್ಷತೆಯಲ್ಲಿ  ಅಧಿಕಾರಿಗಳ ಸಭೆ ನಡೆಯಿತು

ಎನ್‌.ಆರ್‌.ಪುರ: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪಡಿತರದಾರರಿಗೆ ಎರಡು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸುತ್ತಿದ್ದು, ಪಡಿತರದಾರರೇನಾದರೂ ಅಕ್ಕಿ ಮಾರಾಟ ಮಾಡಿದರೆ ಅಂತಹ ಪಡಿತರದಾರರ ಕಾರ್ಡನ್ನು ರದ್ದು ಪಡಿಸಲು ಮುಂದಾಗುವಂತೆ ತಹಶೀಲ್ದಾರ್‌ ಎಚ್‌.ಎಸ್‌.ಪರಮೇಶ್‌ಗೆ ಎಸಿ ರೇಣುಕಾಪ್ರಸಾದ್‌ ಸೂಚಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕೋವಿಡ್ ಸೋಂಕು ತಡೆಗಟ್ಟುವ ಸಭೆಯಲ್ಲಿ ಮಾತನಾಡಿದ ಅವರು, ಪಡಿತರದಾರರ ಅಕ್ಕಿಯನ್ನು ಪಡೆಯುವ ಅಂಗಡಿಗಳ ಮಾಲೀಕರಿಗೂ ಎಚ್ಚರಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಸರ್ಕಾರದಿಂದ ವಿತರಿಸುವ ಪಡಿತರ ಮಾರಾಟವಾಗಬಾರದು ಎಂದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರದಾರರು ಜಾಸ್ತಿ ಇದ್ದಲ್ಲಿ ಆಯಾ ಗ್ರಾಮಗಳ ಪಡಿತರದಾರರ ಪಟ್ಟಿ ತಯಾರು ಮಾಡಿಕೊಂಡು ಗೂಡ್ಸ್‌ ವಾಹನದಲ್ಲಿ ಪಡಿತರ ಒಯ್ದು ಗ್ರಾಮದ ಒಂದು ಭಾಗದಲ್ಲಿ ನಿಂತು ವಿತರಿಸಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕೆಲ ಅಂಗಡಿಗಳಲ್ಲಿ ಪೆಟ್ರೋಲ್‌, ಮದ್ಯ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ, ಕಳ್ಳಭಟ್ಟಿ ತಯಾರಿಕೆಗೆ ಕಡಿವಾಣ ಹಾಕಬೇಕು. ಪೊಲೀಸ್‌ ಹಾಗೂ ಅಬಕಾರಿ ಇಲಾಖೆಯವರು ಈ ಬಗ್ಗೆ ಗಮನಹರಿಸಬೇಕೆಂದರು. ವೈದ್ಯರು ಮುಂದಿನ ಸಾಲಿನ ಯೋಧರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ವೈದ್ಯರೊಂದಿಗೆ ಎಲ್ಲಾ ಇಲಾಖಾ ಧಿಕಾರಿಗಳೂ ಕೈಜೋಡಿಸಬೇಕು ಎಂದರು.

ಬೇಕರಿಗಳಲ್ಲಿ ಕೇವಲ ಬ್ರೆಡ್‌, ಸ್ವೀಟ್ಸ್‌, ಬಿಸ್ಕೆಟ್ಸ್‌, ಬನ್‌ ಗಳನ್ನು ಮಾತ್ರ ಮಾರಾಟ ಮಾಡಬೇಕು. ಯಾವುದೇ ರೀತಿಯ ಕರಿದ ತಿಂಡಿಗಳನ್ನು ಮಾರುವಂತಿಲ್ಲ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯಿಂದ ಬೇರೆ ರಾಜ್ಯದಿಂದ ಬಂದವರ ಮಾಹಿತಿ ಕಲೆ ಹಾಕಿ ಅಂತಹವರ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿ, ಮನೆಯಿಂದ ಹೊರಗಡೆ ತಿರುಗಾಡದಂತೆ ಎಚ್ಚರಿಕೆ ನೀಡಬೇಕೆಂದು ಸೂಚಿಸಿದರು.

ಪ.ಪಂ. ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿಸಬೇಕೆಂದರು. ತಾಲೂಕು ಆಡಳಿತ ವೈದ್ಯಾ ಧಿಕಾರಿ ಡಾ|ವೀರಪ್ರಸಾದ್‌ ಮಾತನಾಡಿ 1215 ಜನ ಹೋಂ ಕ್ವಾರಂಟೈನ್‌ನಲ್ಲಿದ್ದು, ಅದರಲ್ಲಿ 169 ಜನ ಅವ ಧಿಯನ್ನು ಮುಗಿಸಿದ್ದಾರೆ. 1046 ಜನ
ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ತಾಲೂಕಿಗೆ ಹೊರ ಜಿಲ್ಲೆಯಿಂದ ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಅಂತಹವರ ಆರೋಗ್ಯ ತಪಾಸಣೆ ಮಾಡಿ, ಹೋಂ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್‌ ಪರಮೇಶ್‌, ತಾ.ಪಂ. ಇಒ ನಯನ, ಸಿಪಿಐ ಸುರೇಶ್‌, ಶಿರಸ್ತೇದಾರ್‌ ನಾಗೇಂದ್ರನಾಯ್ಕ, ಮೆಸ್ಕಾಂ ಎಇಇ ಗೌತಮ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

3 ಹುಲಿ ಮರಿಗಳಿಗೆ ತಾಯಿಯಾದ ನಾಯಿ-ವಿಡಿಯೋ ವೈರಲ್

ಈ 3 ಹುಲಿ ಮರಿಗಳಿಗೆ ನಾಯಿಯೇ “ತಾಯಿ’!-ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dfsdfdsf

ಅಜ್ಜಂಪುರ: ಸಿಡಿಲು ಬಡಿದು 18 ಕುರಿಗಳು ಸಾವು

unit

ರೈತರ ನೆರವಿಗಾಗಿ 11 ಶೀಥಲೀಕರಣ ಘಟಕ ಆರಂಭ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

mango

ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣಿನ ರಾಜ

ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ

ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.