ಗುತ್ತಿಗೆದಾರನಿಂದಲಂಚಕ್ಕೆಬೇಡಿಕೆ;ಆರೋಪ

ತಾಪಂ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಕ್ರಮಕ್ಕೆ ಸದಸ್ಯರ ಆಗ್ರಹ

Team Udayavani, Jan 19, 2020, 1:19 PM IST

19-January-10

ಎನ್‌.ಆರ್‌.ಪುರ: ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕ ನೀಡಲು ಫಲಾನುಭವಿಗಳಿಂದ ಗುತ್ತಿಗೆದಾರರು ಹಣ ವಸೂಲಿ ಮಾಡುತ್ತಿರುವ ವಿಷಯದ ಬಗ್ಗೆ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

ಇಲ್ಲಿನ ಸಾಮರ್ಥಯ ಸೌಧದಲ್ಲಿ ಶನಿವಾರ ನಡೆದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಮೆಸ್ಕಾಂ ಇಲಾಖೆಯ ಸರದಿ ಬಂದಾಗ ವಿಷಯ ಪ್ರಸ್ತಾಪಿಸಿದ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌. ಎಂ.ನಾಗೇಶ್‌, ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಕೊರೆಸಿದ ಫಲಾನುಭವಿಗಳಿಗೆ ವಿದ್ಯುತ್‌ ಪರಿವರ್ತಕ ಅಳವಡಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕೆಂಬ ನಿಯಮವಿದ್ದರೂ ಕೆಲವು ಗುತ್ತಿಗೆದಾರರು ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿದರು. ಇದಕ್ಕೆ ಅಧ್ಯಕ್ಷೆ ಜಯಶ್ರೀಮೋಹನ್‌ ಸಹ ಧ್ವನಿಗೂಡಿಸಿದರು.

ಗುತ್ತಿಗೆದಾರರಿಗೆ ಸರ್ಕಾರವೇ ಹಣ ಕೂಡುತ್ತದೆ. ಫಲಾನುಭವಿಗಳಿಗೆ ಹಣ ನೀಡಬಾರದು ಎಂದು ಮೆಸ್ಕಾಂ ಇಂಜಿನಿಯರ್‌ ಮಾಹಿತಿ ನೀಡಿದರು.

ಗಂಗಾಕಲ್ಯಾಣ ಯೋಜನೆಗೆ ವಿದ್ಯುತ್‌ ಪರಿವರ್ತಕ ಅಳವಡಿಸದಿರುವ ಬಗ್ಗೆ ಪ್ರಶ್ನಿಸಿದಾಗ ಪ್ರಸ್ತುತ ವಿದ್ಯುತ್‌ ಪರಿವರ್ತಕ ಅಳವಡಿಸುವಂತಿಲ್ಲ ಎಂಬ ನಿಯಮವಿದೆ ಎಂದು ಎಂಜಿನಿಯರ್‌ ಉತ್ತರಿಸಿದರು. ಇದಕ್ಕೆ ಆಕ್ಷೇಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷರು, ಮೂರು ವರ್ಷದ ಹಿಂದೆ ಆಯ್ಕೆಯಾಗಿರುವ ಫಲಾನುಭವಿಗಳ ಕೊಳವೆ ಬಾವಿಗೆ ವಿದ್ಯುತ್‌ ಪರಿವರ್ತಕ ಅಳವಡಿಸಬೇಕೆಂದು ಆಗ್ರಹಿಸಿದರು. ಗಂಗಾ ಕಲ್ಯಾಣ ಯೋಜನೆಯ ಕಾಮಗಾರಿ ಗುತ್ತಿಗೆ ಪಡೆದವರು ಸರ್ಕಾರ ನಿಗಪಡಿಸಿದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನೋಟಿಸ್‌ ನೀಡಲು ಸಭೆ ತೀರ್ಮಾನಿಸಿತು.

ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ತೆಂಗಿನ ಸಸಿ ವಿತರಿಸುವುದರ ಬದಲು ಮುಂದಿನ ಕ್ರಿಯಾ ಯೋಜನೆಯಲ್ಲಿ ಟಾರ್ಪಲ್‌ ವಿತರಿಸುವಂತೆ ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿತು.

ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ಎಲ್ಲಾ ರೈತರು ಅರ್ಜಿ ಕೊಡಲೇಬೇಕೆಂಬ ನಿಯಮವಿಲ್ಲ. ಗ್ರಾಮದ ವ್ಯಾಪ್ತಿಯಲ್ಲಿ ಬೆಳೆ ನಾಶವಾದ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ ವರದಿ ನೀಡಿದರೂ ಸಹ ಪರಿಹಾರ ಬರುತ್ತದೆ. ಕಳೆದ ಬಾರಿ ಅರ್ಜಿಸಲ್ಲಿಸದೆ ಇರುವ ರೈತರಿಗೂ ಪರಿಹಾರ ಬಂದಿದೆ. ಕಳೆದ ಬಾರಿ 1,800 ಹೆಕ್ಟೆರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ವರದಿ ನೀಡಲಾಗಿತ್ತು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.

ನೆರೆಪರಿಹಾರದಲ್ಲಿ ಸಂತ್ರಸ್ತರಿಗೆ ಒಂದು ಕೋಮಿನವರಿಗೆ ಹೆಚ್ಚು ಪರಿಹಾರ ಬರುವ ರೀತಿಯಲ್ಲಿ ಇನ್ನೊಂದು ಕೋಮಿನವರಿಗೆ ಕಡಿಮೆ ಪರಿಹಾರ ಬರುವ ರೀತಿಯಲ್ಲಿ ಕಂದಾಯ ಇಲಾಖೆಯ ಸಿಬ್ಬಂ ಯೊಬ್ಬರು ವರದಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಿದ್ದಾರೆ. ಇದರಿಂದ ಒಂದು ಕೋಮಿನ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಮಂಜು ಆರೋಪಿಸಿದರು. ಸಂತ್ರಸ್ತರಿಗೆ ಪರಿಹಾರ ನೀಡಿರುವ ಪಟ್ಟಿ ನೀಡುವಂತೆ ಕಂದಾಯ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯೊಬ್ಬರು 94ಸಿ ಅಡಿ ಅರ್ಜಿ ಸಲ್ಲಿಸಿ ಒಂದುವರೆ ವರ್ಷ ಕಳೆದಿದ್ದರೂ ಹಕ್ಕು ಪತ್ರ ನೀಡಿಲ್ಲ. ಅಲ್ಲದೇ, ಅರ್ಜಿ ಸಹ ಕಂದಾಯ ಇಲಾಖೆಯಲ್ಲಿ ಲಭ್ಯವಿಲ್ಲ. ಇದರ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಉಪಾಧ್ಯಕ್ಷರು ಆಗ್ರಹಿಸಿದರು.ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಈ.ಸಿ.ಜಯಶ್ರೀ ಮೋಹನ್‌ ವಹಿಸಿದ್ದರು. ತಾಪಂ ಉಪಾಧ್ಯಕ್ಷ ಮಂಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್‌ .ನಾಗೇಶ್‌, ಇಒ ಎಸ್‌.ನಯನ ಇತರರಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.