ಬೆಂಗಳೂರಿಗೆ ಶರಾವತಿ ಹರಿಸಲು ವಿರೋಧ

•ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಒದಗಿಸಿ•ಮಲೆನಾಡು ಜನತೆ ಬದುಕಿಗೆ ಶಾಪ

Team Udayavani, Jul 2, 2019, 10:07 AM IST

cm-tdy-1..

ಸಾಗರ: ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ ಮುಖಂಡರು ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಾಗರ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರು ಮಾತನಾಡಿ, ಜಿಲ್ಲೆಯಲ್ಲಿ ಸಕಾಲಿಕ ಮಳೆಯಾಗದೆ ಅನೇಕ ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಗ್ರಾಮೀಣ ಭಾಗದಲ್ಲಿ ಬಿತ್ತನೆ ಕಾರ್ಯ ಸಹ ಕುಂಠಿತಗೊಂಡಿದೆ. ಪ್ರಾಣಿ ಪಕ್ಷಿಗಳು ನೀರು ಇಲ್ಲದೆ ಪರಿತಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಭಾಗಕ್ಕೆ ಸಮರ್ಪಕ ಕುಡಿಯುವ ನೀರಿನ ಯೋಜನೆ ತಯಾರಿಸಬೇಕಾದ ರಾಜ್ಯ ಸರ್ಕಾರ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಅವೈಜ್ಞಾನಿಕ ಯೋಜನೆ ರೂಪಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಡಿಗೆ ಬೆಳಕು ನೀಡಲು ಈ ಭಾಗದ ಜನರು ಎರಡು ಮೂರು ಬಾರಿ ಮುಳುಗಡೆಯಾಗಿದ್ದು, ತಮ್ಮ ಜಮೀನು, ಮನೆ, ತೋಟವನ್ನು ಕಳೆದುಕೊಂಡು ಇಂದಿಗೂ ನಿರಾಶ್ರಿತರ ಜೀವನ ನಡೆಸುತ್ತಿದ್ದಾರೆ. ಈತನಕ ಮುಳುಗಡೆ ಸಂತ್ರಸ್ತರ ಪೂರ್ಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಮತ್ತೂಮ್ಮೆ ಈ ಭಾಗದ ಜನರ ಬದುಕಿಗೆ ಬರೆ ಎಳೆಯುವ ಕೆಲಸ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವುದು ಅವೈಜ್ಞಾನಿಕ ಯೋಜನೆಯಾಗಿದ್ದು, ಇದು ಖಂಡಿತಾ ಸಾಧ್ಯವಿಲ್ಲ. ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಶರಾವತಿ ನದಿ ಪಾತ್ರದ ಪರಿಸರ ನಾಶವಾಗುತ್ತದೆ. ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಪೈಪ್‌ಲೈನ್‌ ಹಾದು ಹೋಗುವ ಸ್ಥಳಗಳಲ್ಲಿ ಸಾವಿರಾರು ಎಕರೆ ಅರಣ್ಯ ನಾಶವಾಗುವ ಸಾಧ್ಯತೆ ಇದೆ. ಜತೆಗೆ ನೀರು ಮೇಲೆತ್ತಲು ವಿದ್ಯುತ್‌ ವ್ಯಯವಾಗುತ್ತದೆ ಎಂದು ಪ್ರತಿಭಟನಾನಿರತರು ಹೇಳಿದರು.

ಸರ್ಕಾರ ಯೋಜನೆಯಿಂದಾಗುವ ಅನಾಹುತಗಳನ್ನು ಮೊದಲು ಅಧ್ಯಯನ ನಡೆಸಲಿ. ಯಾವುದೇ ಕಾರಣಕ್ಕೂ ಈ ಯೋಜನೆ ಅನುಷ್ಠಾನಕ್ಕೆ ತರದಂತೆ ನಮ್ಮ ಸಂಘಟನೆ ಒತ್ತಾಯಿಸುತ್ತಿದೆ. ಇದು ಮಲೆನಾಡು ಜನರ ಬದುಕಿಗೆ ಶಾಪವಾಗಿ ಪರಿಣಮಿಸುವ ಎಲ್ಲ ಸಾಧ್ಯತೆ ಇದೆ. ಕೂಡಲೆ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಪರಮೇಶ್ವರ ದೂಗೂರು, ತಾಲೂಕು ಸಂಚಾಲಕ ನಾಗರಾಜ್‌, ಪ್ರಮುಖರಾದ ವೆಂಕಟೇಶ್‌, ಅರ್ಷದ್‌ ಆಲಿ, ನಿಸಾರ್‌, ಸರೋಜ, ಹೇಮಾವತಿ, ಶಿವಣ್ಣ, ಚಂದ್ರಣ್ಣ, ಬಾಬಣ್ಣ, ಶಂಕರಪ್ಪ, ಕವಿತಾ, ರಹೀಮ್‌ ಹಾಜರಿದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Kadur: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ತಪ್ಪಿದ ಅನಾಹುತ

Kadur: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ತಪ್ಪಿದ ಅನಾಹುತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.