Udayavni Special

ಹೊರ ಗುತ್ತಿಗೆ ನೌಕರರ ಧರಣಿ 11ನೇ ದಿನಕ್ಕೆ


Team Udayavani, Oct 5, 2020, 7:15 PM IST

ಹೊರ ಗುತ್ತಿಗೆ ನೌಕರರ ಧರಣಿ 11ನೇ ದಿನಕ್ಕೆ

ಚಿಕ್ಕಮಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಹೊರಗುತ್ತಿಗೆ ಪದ್ಧತಿ ಕೈ ಬಿಡುವಂತೆ ಒತ್ತಾಯಿಸಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಹೋರಾಟ ಭಾನುವಾರಕ್ಕೆ 11ನೇ ದಿನಕ್ಕೆ ಕಾಲಿಟ್ಟಿದ್ದು. ಸರ್ಕಾರ ನೌಕರರ ಬೇಡಿಕೆಗೆ ಕ್ಯಾರೇ ಎನ್ನದಿರುವುದರಿಂದ ಆಸ್ಪತ್ರೆಗಳು ಅವ್ಯಸ್ಥೆಯ ಆಗರವಾಗಿವೆ.

ಜಿಲ್ಲಾದ್ಯಂತ ಸುಮಾರು 1,200ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ನೌಕರರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆಗೆ ಮುಂದಾಗಿರುವುದರಿಂದ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ವೈದ್ಯರು, ನರ್ಸ್‌, ಡಾಟಾ ಎಂಟ್ರಿ ಸಿಬ್ಬಂದಿ, “ಡಿ’ ಗ್ರೂಪ್‌ ನೌಕರರಿಲ್ಲದೆ ಸಮಸ್ಯೆ ಉಂಟಾಗಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗದಿರುವುದರಿಂದ ಪರಿಸ್ಥತಿ ಮತ್ತಷ್ಟು ಬಿಗಡಾಯಿಸಿದೆ.

ಕೋವಿಡ್‌-19 ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸೇವಾ ಭದ್ರತೆ ನೀಡಬೇಕು. ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕೆಂಬ ತಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ವೈದ್ಯರು, ಡಾಟಾಎಂಟ್ರಿ ಆಪರೇಟರ್, ನರ್ಸ್‌, “ಡಿ’ ದರ್ಜೆ ನೌಕರರುಕರ್ತವ್ಯಕ್ಕೆ ಹಾಜರಾಗದೇ ಹೋರಾಟಕ್ಕೆಮುಂದಾಗಿರುವ ಪರಿಣಾಮ ಚಿಕ್ಕಮಗಳೂರುನಗರದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಅನೇಕ ಸಮಸ್ಯೆ ಎದುರಿಸುವಂತಾಗಿದೆ.

ನವಜಾತ ಶಿಶು ನಿಗಾ ಘಟಕದ ಬಹುತೇಕ ಸಿಬ್ಬಂದಿ ತರಬೇತಿ ಪಡೆದ ಹೊರಗುತ್ತಿಗೆ ನೌಕರರೇ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ತ್ಯಜಿಸಿಹೋರಾಟಕ್ಕೆ ಮುಂದಾಗಿರುವುದರಿಂದ ನವಜಾತ ಶಿಶು ನಿಗಾ ಘಟಕಕ್ಕೆ ತರಬೇತಿ ನೀಡಿ ಒಬ್ಬರು,ಇಬ್ಬರು ಸಿಬ್ಬಂ ದಿಗಳನ್ನು ನಿಯೋಜನೆ ಮಾಡಲಾಗಿದೆ. ಇದರಿಂದ ಸಿಬ್ಬಂದಿ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಪರಿಸ್ಥಿತಿ ಇದೆ. ವೈದ್ಯರ ಕೊರತೆಯಿಂದಾಗಿ ನಾನ್‌ ಕ್ಲಿನಿಕ್‌ ಡಿಸಿಸ್‌ಗೆ ಸಂಬಂಧಪಟ್ಟಂತೆ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್‌ನಂತರ ಗಂಭೀರ ಕಾಯಿಲೆಗಳಿಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆದಂತಾಗಿದ್ದು, ಅನೇಕ ರೋಗಿಗಳು ಖಾಸಗಿ ಆಸ್ಪತ್ರೆಯ ಮೊರೆ ಹೋಗುವಂತಾಗಿದೆ.

ಡಾಟಾ ಟಂಟ್ರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗಿರುವುದರಿಂದ ಐಸಿಟಿಸಿ, ಎನ್‌ವಿಬಿಡಿಸಿಪಿ, ಐಡಿಎಸ್‌ಪಿ, ಎನ್‌ಎಫ್‌ಡಿಎಸ್‌, ಎನ್‌ಸಿಡಿ ನ್ಯಾಷನಲ್‌ ರಿಪೋರ್ಟ್‌ಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಲು ಸಾಧ್ಯವಾಗದಾಗಿದೆ. ಇನ್ನು ಜಿಲ್ಲಾಸ್ಪತ್ರೆಯಲ್ಲಿ 18 ಜನ ಡಾಟಾ ಎಂಟ್ರಿ ವಿಭಾದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸದ್ಯ 8 ಜನರು ಮಾತ್ರ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ವೈರಾಜಿಕಲ್‌ಪ್ರಯೋಗಾಲಯದಲ್ಲಿ ಕೇವಲ ಇಬ್ಬರು ಟೆಕ್ನಿಷಿಯನ್‌ ಮಾತ್ರ ಕೆಲಸ ನಿರ್ವಹಿಸುತ್ತಿದ್ದು, ದಿನಕ್ಕೆ 500 ರಿಂದ 600 ಕೋವಿಡ್  ಸ್ಯಾಂಪಲ್‌ ಪರೀಕ್ಷೆಗೆ ಒಳಪಡಿಸುವ ಪರಿಸ್ಥಿತಿ ಇದೆ. ಡಾಟಾ ಎಂಟ್ರಿ ಸಿಬ್ಬಂದಿ ಕೊರತೆಯಿಂದ ರೋಗಿಯ ದಾಖಲಾತಿ, ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರ, ಆಸ್ಪತ್ರೆಯಿಂದ ರೋಗಿಯ ಬಿಡುಗಡೆ ಸೇರಿದಂತೆ ಅನೇಕ ಸಮಸ್ಯೆಗಳಾಗುತ್ತಿದ್ದು, ಇರುವ ಸಿಬ್ಬಂದಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು “ಡಿ’ ಗ್ರೂಪ್‌ ನೌಕರರು ಪ್ರತಿಭಟನೆ ನಿರತರಾಗಿರುವುದರಿಂದ ಸ್ವಚ್ಛತೆಗೂ ಆದ್ಯತೆ ನೀಡಲು ಸಾಧ್ಯವಾಗದಂತಾಗಿದೆ.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

chikkamagalore news

ಕಾಫಿನಾಡಲ್ಲಿ ಪ್ರವಾಸಿ ತಾಣಕ್ಕೆ ಮುಗಿ ಬಿದ್ದ ಜನ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಆರದವಳ್ಳಿ ಗ್ರಾಮದಲ್ಲಿ ಅಂಬು ಹೊಡೆಯುವ ಆಚರಣೆ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

chikkamagalore news

ಹೊಸಹಳ್ಳಿಯಲ್ಲಿ ಹೊಯ್ಸಳರ ಕಾಲದ ವೀರಗಲ್ಲು ಪತ್ತೆ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.